ಐವರು ಬಾಂಗ್ಲಾ ಪ್ರಜೆಗಳ ಬಂಧನ..!


Team Udayavani, Nov 27, 2021, 11:16 AM IST

araga

ಬೆಂಗಳೂರು: ಬೆಂಗಳೂರಿನಲ್ಲಿ ಬಾಂಗ್ಲದೇಶದ ಅಕ್ರಮ ವಲಸಿಗರ ಮೇಲೆ ನಿಗಾವಹಿಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಶುಕ್ರವಾರ ಇಬ್ಬರು ಮಹಿಳೆ ಯರು ಸೇರಿ ಐವರು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ. ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಅವರೊಂದಿಗೆ ಇಬ್ಬರು ಮಕ್ಕಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚೆಗೆ ಮಹಾರಾಷ್ಟ್ರದ ಥಾಣೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 9 ಮಂದಿ ಬ್ಲಾಂಗಾ ಪ್ರಜೆಗಳನ್ನು ಬಂಧಿಸಲಾಗಿತ್ತು. ಅವರ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಆರೋಪಿಗಳು ರೈಲು ಮೂಲಕ ಗುರುವಾರವಷ್ಟೇ ನಗರಕ್ಕೆ ಬಂದಿದ್ದು, ಕಾಡುಗೋಡಿಯಲ್ಲಿ ಕಾರ್ಮಿಕರ ಶೆಡ್‌ ವೊಂದರಲ್ಲಿ ನೆಲೆಸಿದ್ದರು.

ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ಸ್ಥಳೀಯ ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಪಾಸ್‌ಪೋರ್ಟ್‌, ವೀಸಾ ಇಲ್ಲದೇ ಅನಧಿಕೃತವಾಗಿ ಭಾರತ ಪ್ರವೇಶಿಸಿ ಬಳಿಕ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದರು.

ಇದನ್ನೂ ಓದಿ;- ಕಾನ್ಪುರ ಟೆಸ್ಟ್: ಸಾಹಾ ಬದಲು ವಿಕೆಟ್ ಕೀಪಿಂಗ್ ಗೆ ಆಗಮಿಸಿದ ಕೆ.ಎಸ್.ಭರತ್!

ಬಂಧಿತ ಪುರುಷ ಆರೋಪಿಗಳು ಬಾಂಗ್ಲಾದೇಶದಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಬೆಂಗಳೂರಿಗೆ ಹೇಗೆ ಬಂದರು, ಯಾರ ಸಹಾಯ ಪಡೆದುಕೊಂಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು. ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ವಲಸಿಗರ ಬಗ್ಗೆ ಎಚ್ಚರಿಕೆ: ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ವಲಸಿಗರ ಬಗ್ಗೆ ಸರ್ಕಾರ ಎಚ್ಚರಿಕೆ ವಹಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಅಕ್ರಮ ವಲಸಿಗರ ಪಟ್ಟಿ ಮಾಡಲು ಪೊಲೀಸ್‌ ಠಾಣೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.

ಸಿಸಿಬಿ ಪೊಲೀಸರು ಐದು ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಇರುವ ಅಕ್ರಮ ವಲಸಿಗರ ಪಟ್ಟಿ ಮಾಡಿ ಅವರನ್ನು ಡಿಟೆಂಷನ್‌ ಸೆಂಟರ್‌ ತಂದು ಹಾಕಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅಕ್ರಮ ವಲಸಿಗರು ದೇಶದ ಭದ್ರತೆಗೆ ಅಪಾಯಕಾರಿ. ಅವರು ಹೇಗೆ ಬಂದಿದ್ದಾರೆ, ಯಾರು ಕಳೆದುಕೊಂಡು ಬಂದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು.

ಕೆಲವೆಡೆ ಅಕ್ರಮ ವಲಸಿಗರು ಬಿಲ್ಡಿಂಗ್‌ ಕೆಲಸ ,ಕಾಫಿ ಎಸ್ಟೇಟ್‌ ಕೆಲಸಕ್ಕೆ ಬಂದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಿ ಮೂಲ ಹುಡಕಲಾಗುವುದು ಎಂದು ಹೇಳಿದರು.ಅಕ್ರಮ ವಲಸಿಗರಿಗೆ ದಾಖಲೆ ಕೊಡಿಸುವ ಜಾಲವೇ ಇದೆ.ಕರ್ನಾಟಕದಲ್ಲಷ್ಟೇ ಅಲ್ಲ, ಅಸ್ಸಾಂ ಭಾಗದಲ್ಲಿ ಇದೆ. ಕೇಂದ್ರಕ್ಕೆ ಹಾಗೂ ಆಯಾ ರಾಜ್ಯಕ್ಕೆ ಈ ಬಗ್ಗೆ ತಿಳಿಸಿದ್ದೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.