ಒಂದೇ ಕುಟುಂಬದ ಐವರ ದುರ್ಮರಣ

ಕೋಗಿಲು ಕ್ರಾಸ್‌ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ | ಡಿವೈಡರ್‌ ಹಾರಿ ಕಾರ್‌ಗೆ ಆ್ಯಂಬುಲೆನ್ಸ್‌ ಡಿಕ್ಕಿ

Team Udayavani, May 28, 2019, 7:12 AM IST

benglre-tdy-1..

ಬೆಂಗಳೂರು: ಅತಿ ವೇಗವಾಗಿ ಹೋಗುತ್ತಿದ್ದ ಸರ್ಕಾರಿ ಆ್ಯಂಬುಲೆನ್ಸ್‌, ಪಕ್ಕದಲ್ಲಿದ್ದ ಲಾರಿಯನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಗುದ್ದಿದ ಪರಿಣಾಮ ಪಶ್ಚಿಮ ಬಂಗಾಳ ಮೂಲದ ಕುಟುಂಬದ ಮೂವರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ಯಲಹಂಕದ ಕೋಗಿಲು ಕ್ರಾಸ್‌ ಮೇಲ್ಸೇತುವೆಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ದೀಪಾಂಕರ್‌ ಡೇ (46), ಅವರ ಪತ್ನಿ ಸ್ವಾಗತ ಚೌಧರಿ (42), ದಂಪತಿ ಪುತ್ರ ಧ್ರುವ ಡೇ (14) ಹಾಗೂ ಸ್ವಾಗತ ಚೌಧರಿ ಸಹೋದರಿ ಸುಜಯ (45), ಅವರ ತಾಯಿ ಜಯತಿ (65) ಮೃತಪಟ್ಟವರು.

ದೀಪಾಂಕರ್‌ ಡೇ ಕುಟುಂಬ ಸದಸ್ಯರೊಂದಿಗೆ, ದೇವಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಿಂದ ಆರ್‌.ಟಿ.ನಗರದ ಮನೆಗೆ ಬರುತ್ತಿದ್ದರು. ಅದೇ ವೇಳೆ ನಗರದಿಂದ ದೇವನಹಳ್ಳಿ ಕಡೆ ವೇಗವಾಗಿ ಹೋಗುತ್ತಿದ್ದ ಆ್ಯಂಬು ಲೆನ್ಸ್‌ ಚಾಲಕ ಚನ್ನಬಸಪ್ಪ, ದೀಪಾಂಕರ್‌ ಡೇ ಕುಟುಂಬವಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ತೀವ್ರ ರಕ್ತಸ್ರಾವದಿಂದ ಕಾರಿನಲ್ಲಿದ್ದ ಐವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆ್ಯಂಬುಲೆನ್ಸ್‌ ಚಾಲಕ ಚನ್ನಬಸಪ್ಪ ಸ್ಥಳದಿಂದ ಪರಾರಿಯಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.

ಪಶ್ಚಿಮ ಬಂಗಾಳದಿಂದ ಹಲವು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿರುವ ದೀಪಾಂಕರ್‌ ಡೇ ಮತ್ತು ಕುಟುಂಬ ನಗರದಲ್ಲಿ ಮಲ್ಟಿಮೀಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಸ್ವಾಗತ ಚೌಧರಿ ಜೈನ್‌ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ದಂಪತಿ ಪುತ್ರ ಧ್ರುವ ಡೇ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಚೆನ್ನೈನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಜಯ ಕೆಲ ದಿನಗಳ ಹಿಂದಷ್ಟೇ ತಾಯಿ ಜಯತಿ ಅವರೊಂದಿಗೆ ಸಹೋದರಿಯ ಮನೆಗೆ ಬಂದಿದ್ದರು ಎಂದು ಸಂಚಾರ ಪೊಲೀಸರು ಹೇಳಿದರು.

ಓವರ್‌ ಟೇಕ್‌ ಭರದಲ್ಲಿ ಡಿಕ್ಕಿ: 12.30ರ ಸುಮಾರಿಗೆ ನಗರದಿಂದ ದೇವನಹಳ್ಳಿ ಕಡೆಗೆ ಅತಿ ವೇಗವಾಗಿ ಹೋಗುತ್ತಿದ್ದ ಆ್ಯಂಬುಲೆನ್ಸ್‌ ಚಾಲಕ ಚನ್ನಬಸಪ್ಪ, ಕೋಗಿಲು ಕ್ರಾಸ್‌ ಮೇಲ್ಸೇತುವೆಯಲ್ಲಿ ಎದುರಿಗೆ ಹೋಗುತ್ತಿದ್ದ ಲಾರಿ ಮತ್ತು ಕಾರನ್ನು ಓವರ್‌ ಟೇಕ್‌ ಮಾಡಲು ಮುಂದಾಗಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಗುದ್ದಿದ್ದಾನೆ, ನಂತರ ಪಕ್ಕದ ರಸ್ತೆಯಲ್ಲಿ ಏರ್‌ಪೋರ್ಟ್‌ನಿಂದ ಆರ್‌.ಟಿ.ನಗರ ದ ಕಡೆಗೆ ಬರುತ್ತಿದ್ದ ದೀಪಾಂಕರ್‌ ಡೇ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದರು.

ಕಾರು ಸಂಪೂರ್ಣ ಜಖಂ: ಅಪಘಾತದ ತೀವ್ರತೆಗೆ ರಸ್ತೆ ವಿಭಜಕದಿಂದ ಜಿಗಿದ ಆ್ಯಂಬುಲೆನ್ಸ್‌ ನೇರವಾಗಿ ಕಾರಿನ ಮುಂಭಾಗಕ್ಕೆ ಬಲವಾಗಿ ಹೊಡೆದು ನಡುರಸ್ತೆಗೆ ಬಂದು ನಿಂತಿತ್ತು. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗೊಜ್ಜಾಗಿದ್ದು, ಮತ್ತು ಆ್ಯಂಬುಲೆನ್ಸ್‌ನ ಮುಂಭಾಗ ಜಖಂಗೊಂಡಿದೆ. ಕಾರು ಚಾಲನೆ ಮಾಡುತ್ತಿದ್ದ ದೀಪಾಂಕರ್‌, ಪಕ್ಕದ ಸೀಟಿನಲ್ಲಿ ಕುಳಿತಿದ್ದ ಧ್ರುವ ಡೇ ಹಾಗೂ ಹಿಂಬದಿ ಕುಳಿತಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದರು.

ಸ್ಥಳೀಯರು ಹಾಗೂ ಸಂಚಾರರ ಪೊಲೀಸರು ಮೂರು ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರಿನಲ್ಲೇ ಸಿಲುಕಿಕೊಂಡಿದ್ದ ದೀಪಾಂಕರ್‌ ಡೇ ಮತ್ತು ಮಹಿಳೆಯೊಬ್ಬರ ಶವವನ್ನು ತೆಗೆದು ಯಲಹಕದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ನಂತರ ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ಐದು ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.