ಐವರು ಮಹಿಳೆಯರಿಂದ ಪ್ಯಾರಾಚೂಟ್ ಡೈವ್
Team Udayavani, Feb 24, 2019, 11:29 AM IST
ಬೆಂಗಳೂರು: ಐವರು ಮಹಿಳಾ ವಿಂಗ್ ಕಮಾಂಡರ್ಗಳು ಏರೋ ಇಂಡಿಯಾ ಶೋನಲ್ಲಿ 400 ಅಡಿ ಎತ್ತರದಿಂದ ಪ್ಯಾರಾಚೂಟ್ನೊಂದಿಗೆ ಹಾರುವ ಮೂಲಕ ಪ್ರೇಕ್ಷಕರು ಹುಬ್ಬೇರಿಸುವಂತೆ ಮಾಡಿದರು. ವಿಂಗ್ ಕಮಾಂಡ್ ಆಶಾ ಜೋತಿರ್ಮಯಿ ನೇತೃತ್ವದ ತಂಡದಲ್ಲಿ ಬೆಂಗಳೂರು ಮೂಲದ ಸಂಗೀತಾ ಪೌಲ್ರಾಜ್ ಹಾಗೂ ಸೀಮಾ ಶರೋನ್, ಈಶಾ ಗಿಲ್, ತುಹಿತಾ ಗೌರ್ ಇದ್ದರು. 9.30ಕ್ಕೆ ಹೆಲಿಕಾಪ್ಟರ್ ನಲ್ಲಿ ಆಕಾಶದಿಂದ ಭಾರತೀಯ ಧ್ವಜ, ಸೇನೆಯ ಧ್ವಜ ಹಿಡಿದು ಪ್ಯಾರಚೂಟ್ ಮೂಲಕ ಭೂಮಿಗೆ ಇಳಿದ ಮಹಿಳೆಯರು, 15 ನಿಮಿಷದಲ್ಲಿ ರನ್ವೇ ತಲುಪಿದ್ದರು. ಈ ವೇಳೆ ಪುರುಷರ ತಂಡವೊಂದು ಪ್ಯಾರಾಚೂಟ್ ಡೈವ್ ನಡೆಸಿತು.
ನಂತರ ಮಾತನಾಡಿದ ವಿಂಗ್ ಕಮಾಂಡ್ ಆಶಾ ಜೋತಿರ್ಮಯಿ, ಕಠಿಣ ಪರಿಶ್ರಮದಿಂದ ಇದು ಸಾಧ್ಯವಾಗಿದೆ. ಮಹಿಳೆಯಾಗಿ ಇಂತಹ ಸಾಧನೆ ಮಾಡಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ. ಸುಮಾರು 20 ವರ್ಷದಿಂದ ಅಭ್ಯಾಸ ಮಾಡುತ್ತಿದ್ದೇನೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹಿಳೆರು ಸಾಧನೆ ಮಾಡುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ ಎಂದರು.
ಸಂಗೀತಾ ಪೌಲ್ರಾಜ್ ಮಾತನಾಡಿ, ಮಹಿಳೆಯರು ಸವಾಲುಗಳನ್ನು ಸ್ವೀಕರಿಸಿದರೆ ಮಾತ್ರ ರಕ್ಷಣಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ. ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಸಾಕಷ್ಟು ಅವಕಾಶಗಳಿದ್ದು, ಅವುಗಳ ಸದುಪಯೋಗ ಪಡೆಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.