ಫ್ಲಕ್ಸ್ ಅಳವಡಿಕೆ: ಸಚಿವ ಡಿಕೆಶಿ ವಿರುದ್ಧ ಎಫ್ಐಆರ್
Team Udayavani, Oct 9, 2018, 12:19 PM IST
ಬೆಂಗಳೂರು: ಕಾನೂನು ಬಾಹಿರವಾಗಿ ಫ್ಲೆಕ್ಸ್ ಅಳವಡಿಸಿದ ಆರೋಪ ಪ್ರಕರಣ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳು ಹಾಗೂ ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಬಿಬಿಎಂಪಿ ತೆರವು ಕಾರ್ಯಾಚರಣೆಗೆ ಮುಂದಾಗಿತ್ತು.
ಪಂತರಪಾಳ್ಯದಲ್ಲಿ ಸಚಿವ ಡಿ.ಕೆ.ಶಿವಕುಮಾರ್‌ಗೆ ಸೇರಿದ ಖಾಲಿ ಜಾಗದಲ್ಲಿ ಜಾಹೀರಾತು ಫಲಕವಿರುವುದು ಕಂಡುಬಂದಿತ್ತು. ಹೀಗಾಗಿ, ಫಲಕ ತೆರವುಗೊಳಿಸುವಂತೆ ಖುದ್ದು ಡಿ.ಕೆ ಶಿವಕುಮಾರ್‌ಗೆ ಪಾಲಿಕೆ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದರು. ಆದರೂ ತೆರವುಗೊಳಿಸರಲಿಲ್ಲ.
ಹೀಗಾಗಿ, ಪಾಲಿಕೆ ಅಧಿಕಾರಿ ಮುತ್ತುರಾಜ್ ನೀಡಿದ ದೂರಿನ ಅನ್ವಯ ಬ್ಯಾಟರಾಯನಪುರ ಠಾಣೆ ಪೊಲೀಸರು ಕೆಎಂಸಿ ಕಾಯಿದೆ ಅನ್ವಯ ಎಫ್ಐಆರ್ ದಾಖಲಿಸಿಕೊಂಡಿದ್ದರು. ಎಫ್ಐಆರ್ ದಾಖಲಾದ ಬಳಿಕ ಜಾಹೀರಾತು ಫಲಕ ತೆರವುಗೊಳಿಸಿದ್ದು, ಪ್ರಕರಣ ಸಂಬಂಧ ಪಾಲಿಕೆ ಅಧಿಕಾರಿಗಳು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.