ಇಂದಿರಾ ಶ್ರಮದಿಂದ ಆಹಾರ ಸ್ವಾವಲಂಬನೆ
Team Udayavani, Apr 23, 2017, 12:27 PM IST
ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆ ಮಾಡಿದ್ದರಿಂದ ಭಾರತ ಆಹಾರ ಉತ್ಪಾದನೆ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಲು ಸಾಧ್ಯವಾಯಿತು ಎಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
ಕೆಪಿಸಿಸಿ ವತಿಯಿಂದ ಇಂದಿರಾಗಾಂಧಿ ಶತಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ “ಇಂದಿರಾಗಾಂಧಿ ಯುಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದ ಮೇಲೆ ಆಶಯ ಭಾಷಣ ಮಾಡಿದ ಅವರು, ಭಾರತ ಕೃಷಿ ಉತ್ಪನ್ನಗಳ ಮಾರಾಟ ಮಾಡುವ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದೆ. ಅಕ್ಕಿ, ಜೋಳ, ಹತ್ತಿ, ಕಾಫಿ, ಟೀ, ಎಲ್ಲವನ್ನೂ ಭಾರತ ರಪು¤ ಮಾಡುತ್ತಿದೆ. ಇದಕ್ಕೆ ಪ್ರಮುಖ ಕಾರಣ ಇಂದಿರಾಗಾಂಧಿಯವರು ಕೃಷಿಯಲ್ಲಿ ತಂತ್ರಜ್ಞಾನ ಬಳಕೆಗೆ ನೀಡಿದ ಪ್ರೋತ್ಸಾಹ ಎಂದರು.
ಪ್ರೊ. ರಿಜ್ವಾನ್ ಕೈಸರ್ ಮಾತನಾಡಿ, ಇಂದಿರಾ ಗಾಂಧಿಯವರು ಭಾರತದ ಬಡತನವನ್ನು ಹೋಗಲಾಡಿಸಲು ವಿಜ್ಞಾನ ತಂತ್ರಜ್ಞಾನದ ಮೊರೆ ಹೋದರು. ಇಂದಿರಾ ಗಾಂಧಿ ಪರಮಾಣು ಹಾಗೂ ಬಾಹ್ಯಾಕಾಶ ತಂತ್ರಜ್ಞಾನದ ಬಳಕೆಯನ್ನೂ ಆಗಲೇ ಬಳಸಿ ಕೊಳ್ಳಲು ತೀರ್ಮಾನಿಸಿದ್ದರು.
ಬಾಹ್ಯಾ ಕಾಶ ತಂತ್ರಜ್ಞಾನದ ಮೂಲಕ ದೇಶದ ಪ್ರಾಕೃತಿಕ ಸಂಪತ್ತು ಮತ್ತು ಖನಿಜ ಸಂಪತ್ತಿನ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಇಂದಿರಾಗಾಂಧಿ ಮನಗಂಡಿದ್ದರು. ಪರಿ ಣಾಮವಾಗಿ 1974 ರಲ್ಲಿ ಫೋಕ್ರಾನ್ ಅಣು ಬಾಂಬ್ ಪರೀಕ್ಷೆ, 1975ರಲ್ಲಿ ಆರ್ಯಭಟ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಯಶಸ್ವಿ ಯಾಗಿ ಹಾರಿಸಲಾಯಿತು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಸಚಿವರಾದ ಡಿ.ಕೆ. ಶಿವಕುಮಾರ್, ರೋಷನ್ ಬೇಗ್, ರಾಮಲಿಂಗಾ ರೆಡ್ಡಿ ಹಾಗೂ ವಿಜ್ಞಾನಿಗಳಾದ ಡಾ. ಮಹದೇವಪ್ಪ ಹಾಗೂ ಬಿ.ವಿ. ಶ್ರೀಕಂಠನ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.