Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ
ಹಳಸಿದ ಆಹಾರ ಸೇವನೆಯಿಂದ ಅನಾರೋಗ್ಯ ಶಂಕೆ
Team Udayavani, Oct 8, 2024, 10:14 AM IST
ಬೆಂಗಳೂರು: ವಿಷ ಆಹಾರ ಸೇವಿಸಿ 5 ವರ್ಷದ ಬಾಲಕ ಮೃತಪಟ್ಟು, ಆತನ ತಂದೆ-ತಾಯಿ ಅಸ್ವಸ್ಥಗೊಂಡಿರುವ ಘಟನೆ ಕೆ.ಪಿ.ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆ.ಪಿ.ಅಗ್ರಹಾರದ ಭುವನೇಶ್ವರಿನಗರ ನಿವಾಸಿ ಧೀರಜ್ (5) ಮೃತ ಬಾಲಕ. ಈತನ ತಂದೆ ಬಾಲರಾಜ್ ಮತ್ತು ತಾಯಿ ನಾಗಲಕ್ಷ್ಮೀ ಸಹ ವಿಷ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ತಂದೆ ಬಾಲರಾಜ್ ಸ್ವಿಗ್ಗಿ ಡೆಲಿವರಿ ಕೆಲಸ ಮಾಡುತ್ತಿದ್ದು, ತಾಯಿ ನಾಗಲಕ್ಷ್ಮೀ ಗೃಹಣಿಯಾಗಿದ್ದಾರೆ. ಇಬ್ಬರು ಮಕ್ಕಳ ಜತೆ ದಂಪತಿಭುವನೇಶ್ವರಿನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಭಾನುವಾರ ರಾತ್ರಿ ಬಾಲರಾಜ್ ದಂಪತಿ ಹಾಗೂ ಪುತ್ರ ಧೀರಜ್ ಊಟ ಮುಗಿಸಿ ನಿದ್ದೆಗೆ ಜಾರಿದ್ದಾರೆ. ಸೋಮವಾರ ಮುಂಜಾನೆ ಮೂವರಿಗೂ ಹೊಟ್ಟೆ ನೋವು ಕಾಣಿಸಿಕೊಂಡು ತೀವ್ರ ಅಸ್ವಸ್ಥರಾಗಿ ಚೀರಾಡಿದ್ದಾರೆ.
ಅವರ ಚೀರಾಟದ ಶಬ್ದ ಕೇಳಿದ ಸ್ಥಳೀಯರು ಕೂಡಲೇ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಸಿದ್ದಾರೆ. ಈ ವೇಳೆ ಪರೀಕ್ಷಿಸಿದ ವೈದ್ಯರು ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆಯೇ ಧೀರಜ್ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಇನ್ನು ತೀವ್ರ ಫುಡ್ ಪಾಯ್ಸನ್‌ನಿಂದಾಗಿ ಅಸ್ವಸ್ಥಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಬಾಲರಾಜ್ ಮತ್ತು ನಾಗಲಕ್ಷ್ಮೀಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಹೀಗಾಗಿ ಘಟನೆ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ ಫುಡ್ ಪಾಯಿಸನ್‌ನಿಂದ ಘಟನೆ ನಡೆದಿದೆ. ಅದು ಮನೆಯ ಆಹಾರವೇ, ಅಥವಾ ಹೊರಗಿನಿಂದ ತರಿಸಿರುವ ಆಹಾರವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಫ್ರಿಡ್ಜ್ ಆಹಾರದಿಂದಲೇ ಅಸ್ವಸ್ಥ ಸಾಧ್ಯತೆ:
ಬಾಲರಾಜ್ ದಂಪತಿ ತಮ್ಮ ಮಕ್ಕಳ ಪೈಕಿ ಮಗಳನ್ನು ಕೆಲ ದಿನಗಳ ಹಿಂದೆ ಅಜ್ಜಿ ಮನೆಗೆ ಕಳುಹಿಸಿದ್ದರು. ಹೀಗಾಗಿ ಮನೆಯಲ್ಲಿ ಮೂವರು ಮಾತ್ರ ಇದ್ದರು. ಪಿತೃಪಕ್ಷಕ್ಕೆ ಮಾಡಿದ್ದ ಆಹಾರವನ್ನು ಫ್ರಿಡ್ಜ್ ನಲ್ಲಿ ಇರಿಸಲಾಗಿತ್ತು. ಅದೇ ಆಹಾರವನ್ನು ಭಾನುವಾರ ರಾತ್ರಿ ಮೂವರೂ ಸೇವಿಸಿದ್ದರು. ಬಳಿಕ ಮೂವರು ಅಸ್ವಸ್ಥಗೊಂಡಿದ್ದಾರೆ ಎಂಬುದು ಪ್ರಾಥಮಿಕ ಮಾಹಿತಿಯಿಂದ ಗೊತ್ತಾಗಿದೆ.
ಆನ್‌ಲೈನ್‌ನಲ್ಲಿ ಬಂದ ಕೇಕ್ ಕೂಡ ಸೇವನೆ:
ಮತ್ತೂಂದೆಡೆ ಫುಡ್ ಡೆಲಿವರಿ ಕೆಲಸ ಮಾಡುವ ಬಾಲರಾಜ್, ಗ್ರಾಹರೊಬ್ಬರು ಆನ್‌ಲೈನ್ ಕೇಕ್ ಆರ್ಡರ್ ಮಾಡಿ, ಕೆಲ ಹೊತ್ತಿನ ಬಳಿಕ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅದನ್ನು ಮನೆಗೆ ತಂದು ಫ್ರಿಡ್ಜ್ನಲ್ಲಿ ಇರಿಸಿದ್ದರು. ಭಾನುವಾರ ರಾತ್ರಿ ಊಟ ಮಾಡುವಾಗ ಪತ್ನಿ, ಪುತ್ರನ ಜತೆಗೆ ಆ ಕೇಕ್ ಸಹ ಸೇವಿಸಿದ್ದರು. ಬಳಿಕ ಮೂವರೂ ಅಸ್ವಸ್ಥರಾಗಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆಯೂ ಇನ್ನು ಸ್ಪಷ್ಟತೆ ಇಲ್ಲ ಎಂದು ಮೂಲಗಳು ತಿಳಿಸಿವೆ.
ವಿಷ ಆಹಾರ ಸೇವನೆಯಿಂದ ಘಟನೆ:
ಮಗು ಸೇರಿದಂತೆ ಮೂವರನ್ನು ಪ್ರಾಥಮಿಕವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆಗ ವೈದ್ಯರು, ವಿಷ ಆಹಾರ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ. ಈ ಪೈಕಿ ಧೀರಜ್ ಮೃತಪಟ್ಟಿರುವುದು ಖಚಿತಪಟ್ಟಿದೆ. ಮೂವರು ಸೇವಿಸಿದ್ದ ಆಹಾರಗಳ ಮಾದರಿಯನ್ನು ಸಂಗ್ರಹಿಸಿದ್ದು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷ ಆಹಾರ ಸೇವನೆಯಿಂದ 5 ವರ್ಷದ ಬಾಲಕ ಧೀರಜ್ ಮೃತಪಟ್ಟಿರುವುದು ಆಸ್ಪತ್ರೆ ನೀಡಿರುವ ಎಂಎಲ್‌ಸಿ ವರದಿಯಲ್ಲಿ ದೃಢಪಟ್ಟಿದೆ. ಹಳಸಿದ ಆಹಾರ ಸೇವನೆ ಬಳಿಕ ಅದು ವಿಷ ಆಹಾರವಾಗಿ ದಂಪತಿ ಅಸ್ವಸ್ಥತೆಗೆ ಕಾರಣವಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.-ಗಿರೀಶ್, ಎಸ್. ಪಶ್ಚಿಮ ವಿಭಾಗದ ಡಿಸಿಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.