2030ರ ವೇಳೆ ದೇಶದಲ್ಲಿ ಆಹಾರ ಅಭಾವ

Team Udayavani, Mar 26, 2019, 12:21 PM IST

Udayavani Kannada Newspaper

ಬೆಂಗಳೂರು: ಹಲವು ಅಧ್ಯಯನಗಳ ಪ್ರಕಾರ 2030ರ ವೇಳೆಗೆ ದೇಶದಲ್ಲಿ ಆಹಾರಧಾನ್ಯಗಳ ಅಭಾವ ಉಂಟಾಗಲಿದ್ದು, ಈ ಕೊರತೆ ನೀಗಿಸುವ ನಿಟ್ಟಿನಲ್ಲಿ ಸಂಶೋಧನೆಗಳು ಮತ್ತು ತಂತ್ರಜ್ಞಾನಗಳ ಅಳವಡಿಕೆ ಆಗಬೇಕು ಎಂದು ಪಂಜಾಬ್‌ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪದ್ಮಶ್ರೀ ಪ್ರೊ.ಬಲದೇವ್‌ ಸಿಂಗ್‌ ದಿಲ್ಲಾನ್‌ ತಿಳಿಸಿದರು.

ನಗರದಲ್ಲಿ ಸೋಮವಾರ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 53ನೇ ಘಟಿಕೋತ್ಸವದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ಭೂಹಿಡುವಳಿ ಕಡಿಮೆ, ಜನಸಂಖ್ಯೆ ಹೆಚ್ಚಳದ ನಡುವೆಯೂ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನಗಳ ಫ‌ಲವಾಗಿ ಆಹಾರಧಾನ್ಯಗಳನ್ನು ರಫ್ತು ಮಾಡುವಷ್ಟು ಪ್ರಗತಿ ಸಾಧಿಸಿದ್ದೇವೆ.

ಆದರೆ, ಇತ್ತೀಚಿನ ದಿನಗಳಲ್ಲಿ ನಡೆಸಿದ ಹಲವು ಅಧ್ಯಯನಗಳ ಪ್ರಕಾರ 2030ರ ವೇಳೆಗೆ ಆಹಾರಧಾನ್ಯ, ಎಣ್ಣೆಕಾಳು, ಬೇಳೆಕಾಳುಗಳ ಕೊರತೆ ಉಂಟಾಗಲಿದೆ. ಆದ್ದರಿಂದ ದೇಶದ ಆಹಾರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ರೈತರ ಜೀವನಮಟ್ಟ ಸುಧಾರಿಸುವಂತಹ ಯೋಜನೆಗಳನ್ನು ರೂಪಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಕೃಷಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ನ್ಯಾನೊ ತಂತ್ರಜ್ಞಾನವು ಒಂದು ಆಶಾದಾಯಕ ತಂತ್ರಜ್ಞಾನದಂತೆ ಕಂಡುಬರುತ್ತಿದೆ. ಗಿಡಗಳ ಸಾಮರ್ಥ್ಯ, ಪೋಷಕಾಂಶ, ತ್ವರಿತಗತಿಯಲ್ಲಿ ರೋಗಗಳ ಪತ್ತೆ, ರೋಗಗಳಿಗೆ ಆಣಿಕ ಚಿಕಿತ್ಸೆ , ಆಹಾರ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯಲ್ಲಿ ಗಮನಾರ್ಹ ಪಾತ್ರ ನಿರ್ವಹಿಸುತ್ತಿದೆ ಎಂದು ಪ್ರೊ.ಬಲದೇವ್‌ ಸಿಂಗ್‌ ತಿಳಿಸಿದರು.

ಇದೇ ವೇಳೆ ವಿವಿಧ ಪದವಿಗಳ ವಿದ್ಯಾರ್ಥಿಗಳಿಗೆ 119 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಈ ಪೈಕಿ 39 ವಿಶ್ವವಿದ್ಯಾಲಯದ ಚಿನ್ನದ ಪದಕಗಳು, ಮೂರು ಸ್ನಾತಕ ಮತ್ತು 4 ಸ್ನಾತಕೋತ್ತರ ಆವರಣ ಚಿನ್ನದ ಪದಕಗಳು ಹಾಗೂ 73 ದಾನಿಗಳ ಚಿನ್ನದ ಪದಕಗಳು,

21 ಚಿನ್ನದ ಪದಕಗಳ ಪ್ರಮಾಣಪತ್ರಗಳು ಇವೆ. 661 ಸ್ನಾತಕ ಪದವಿ, 309 ಸ್ನಾತಕೋತ್ತರ ಪದವಿ ಹಾಗೂ 72 ಡಾಕ್ಟೊರಲ್‌ ಪದವಿ ನೀಡಲಾಯಿತು. ಕುಲಪತಿ ಡಾ.ಎಸ್‌. ರಾಜೇಂದ್ರ ಪ್ರಸಾದ್‌ ಉಪಸ್ಥಿತರಿದ್ದರು. ರಾಜ್ಯಪಾಲ ಹಾಗೂ ಕುಲಾಧಿಪತಿ ವಜುಭಾಯಿ ವಾಲಾ ಗೈರುಹಾಜರಿದ್ದರು.

ಟಾಪ್ ನ್ಯೂಸ್

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Theft Case: ಕೆಲಸಕ್ಕಿದ್ದ ಆಸ್ಪತ್ರೆಯಲ್ಲೇ ಕಳ್ಳತನ

Theft Case: ಕೆಲಸಕ್ಕಿದ್ದ ಆಸ್ಪತ್ರೆಯಲ್ಲೇ ಕಳ್ಳತನ

Arrested: ನಕಲಿ ಕಂಪನಿಗಳನ್ನು ತೆರೆದು ಇಎಸ್‌ಐ ಕಾರ್ಡ್‌ ವಿತರಣೆ ಧಂಧೆ!

Arrested: ನಕಲಿ ಕಂಪನಿಗಳನ್ನು ತೆರೆದು ಇಎಸ್‌ಐ ಕಾರ್ಡ್‌ ವಿತರಣೆ ಧಂಧೆ!

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.