ಅಭಿವೃದ್ಧಿ ನೆಪದಲ್ಲಿ ಫುಟ್ಪಾತ್ ಕಣ್ಮರೆ!
ನಗರದ ಹಲವೆಡೆ ಇಲ್ಲ ಸೂಕ್ತ ವ್ಯವಸ್ಥೆ | ಅಪಾಯದ ನಡುವೆ ಓಡಾಡುತ್ತಿರುವ ಪಾದಚಾರಿಗಳು
Team Udayavani, Jun 7, 2019, 10:05 AM IST
ವಿವಿಪುರದಲ್ಲಿ ವೈಟ್ಟಾಪಿಂಗ್ ಮಾಡಲಾದ ರಸ್ತೆಯ ಅರ್ಧ ಭಾಗ ವಾಹನ ನಿಲುಗಡೆಗೆ ಬಳಕೆಯಾಗುತ್ತಿದೆ. ಜತೆಗೆ ಅಲ್ಲಿ ಪಾದಚಾರಿ ಮಾರ್ಗವೂ ಇಲ್ಲ.
ಬೆಂಗಳೂರು: ಬಿಬಿಎಂಪಿ ವತಿಯಿಂದ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಂದ ಪಾದಚಾರಿಗಳು ಮತ್ತು ವಾಹನ ಸವಾರರು ಅಪಾಯದ ನಡುವೆಯೇ ಸಂಚಾರ ಮಾಡುವಂತಾಗಿದೆ.
ನಗರದ ಕೇಂದ್ರ ಭಾಗ ಸೇರಿದಂತೆ ಹಲವಾರು ಕಡೆಗಳಲ್ಲಿ ಪಾಲಿಕೆಯಿಂದ ವೈಟ್ಟಾಪಿಂಗ್, ಟೆಂಡರ್‌ಶ್ಯೂರ್ ಹಾಗೂ ಚರಂಡಿಗಳಲ್ಲಿ ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿಯಲ್ಲಿವೆ. ವೈಟ್ಟಾಪಿಂಗ್ ಹಾಗೂ ವೈಟ್ಟಾಪಿಂಗ್ ಕಾಮಗಾರಿಗೆ ರಸ್ತೆಯ ಎರಡು ಬದಿಯ ಪಾದಚಾರಿ ಮಾರ್ಗವನ್ನು ಅಗೆಯಲಾಗಿದ್ದು, ಜನರು ಅಪಾಯದ ವಾಹನಗಳೊಂದಿಗೆ ರಸ್ತೆಯಲ್ಲಿ ಸಂಚಾರ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಪಾಲಿಕೆಯ ಕೇಂದ್ರ ಭಾಗದ ಗಾಂಧಿನಗರ, ಚಾಮರಾಜ ಪೇಟೆ, ಚಿಕ್ಕಪೇಟೆ, ಜಯನಗರ, ಬಿಟಿಎಂ ಬಡಾವಣೆ ವಿಧಾನಸಭಾ ಕ್ಷೇತ್ರಗಳಲ್ಲಿ ಪಾಲಿಕೆಯಿಂದ ನೂರಾರು ಕಾಮಗಾರಿಗಳನ್ನು ಪ್ರಗತಿಯಲ್ಲಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಜನರಿಗೆ ತೊಂದರೆಯಾಗುತ್ತಿದೆ. ಕೆಲವೆಡೆ ವೈಟ್ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದ್ದರೂ, ಪಾದಚಾರಿ ಮಾರ್ಗಗಳ ನಿರ್ಮಾ ಣಕ್ಕೆ ಗುತ್ತಿಗೆದಾರರು ಮುಂದಾಗದ ಹಿನ್ನೆಲೆಯಲ್ಲಿ ಸಮಸ್ಯೆ ಸೃಷ್ಟಿಯಾಗಿದೆ. ಪಾಲಿಕೆಯಿಂದ ಯಾವುದೇ ರಸ್ತೆ ಕಾಮಗಾರಿ ಕೈಗೆತ್ತಿಕೊಂಡರೂ ಪಾದಚಾರಿಗಳ ಅನುಕೂಲಕ್ಕಾಗಿ ಮೊದಲಿಗೆ ಪಾದಚಾರಿ ಮಾರ್ಗ ನಿರ್ಮಾಣ ಮಾಡಬೇಕು. ಬಳಿಕ ರಸ್ತೆ ಕಾಮಗಾರಿ ನಡೆಸಬೇಕೆಂಬ ನಿಯಮವಿದೆ. ಆದರೆ, ಗುತ್ತಿಗೆದಾರರು ರಸ್ತೆ ಕಾಮಗಾರಿ ಮೊದಲು ಪೂರ್ಣಗೊಳಿಸಿ ನಂತರದಲ್ಲಿ ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಮುಂದಾಗುತ್ತಿರುವುದರಿಂದ ಪಾದಚಾರಿಗಳಿಗೆ ಸಮಸ್ಯೆಯಾಗುತ್ತಿದೆ.
ಅದರಲ್ಲಿಯೂ ಪಾಲಿಕೆಯಿಂದ ನಗರದ ವಾರ್ಡ್ ರಸ್ತೆಗಳಲ್ಲಿ ಕೈಗೆತ್ತಿಕೊಳ್ಳುತ್ತಿರುವ ವೈಟ್ಟಾಪಿಂಗ್ ಕಾಮಗಾರಿ ವೇಳೆ ಪಾದಚಾರಿ ಮಾರ್ಗಗಳ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿಲ್ಲ ಎಂಬ ಆರೋಪಗಳಿದ್ದು, ಸಜ್ಜನ್‌ರಾವ್ ವೃತ್ತ ಸುತ್ತಮುತ್ತಲಿನ ರಸ್ತೆಗಳಲ್ಲಿ ವೈಟ್ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸಿ ಪಾದಚಾರಿ ಮಾರ್ಗ ನಿರ್ಮಿಸದಿರುವುದು ಅದಕ್ಕೆ ಪೂರಕವೆಂಬಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.