ಗಾಳಿ ಸಹಿತ ಮಳೆಗೆ 20 ಮರ ಧರೆಗೆ

Team Udayavani, Mar 31, 2018, 12:02 PM IST

gaali-sahita.jpg

ಬೆಂಗಳೂರು: ನಗರದಲ್ಲಿ ಶುಕ್ರವಾರ ಗಾಳಿ ಸಹಿತ ಸುರಿದ ಮಳೆಯಿಂದಾಗಿ 20ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ಹಲವು ಭಾಗಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು.

ಗಾಳಿ ಸಹಿತ ಮಳೆಗೆ ಶಂಕರಮಠ, ಮಲ್ಲೇಶ್ವರ, ಗೊರಗುಂಟೆ ಪಾಳ್ಯ, ಬಿಎಂಶ್ರೀ ಮುಖ್ಯರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಯಶವಂತಪುರ, ಬಾಣಸವಾಡಿ, ಮಡಿವಾಳ, ಸಂಜಯ್‌ನಗರ, ನಾಗರಬಾವಿ, ಬನಶಂಕರಿ 2ನೇ ಹಂತ ಸೇರಿದಂತೆ ಹಲವಾರು ಕಡೆಗಳಲ್ಲಿ ಬೃಹದಾಕಾರದ ಮರಗಳು ಧರೆಗುರುಳಿದ ಪರಿಣಾಮ ತೀವ್ರ ಸಂಚಾರ ದಟ್ಟಣೆ ವಾಹನ ಸವಾರರು ತೊಂದರೆಗೊಳಗಾದರು.
 
ಪಾಲಿಕೆಯ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ತೆರಳಿ ಬಿದ್ದ ಮರಗಳನ್ನು ತೆರವುಗೊಳಿಸಿದರು. ಕೆಲವು ಭಾಗಗಳಲ್ಲಿ ಮರದ ಕೊಂಬೆಗಳು ವಿದ್ಯುತ್‌ ತಂತಿಯ ಮೇಲೆ ಬಿದ್ದ ಪರಿಣಾಮ ವಿದ್ಯುತ್‌ ಕಂಬಗಳು ಸಹ ಉರುಳಿದ್ದು, ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಆದರೆ, ಯಾವುದೇ ರೀತಿಯ ಜೀವ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೌಡಾಯಿಸಿದ ಆಯುಕ್ತರು: ನಗರದಲ್ಲಿ ಮಳೆ ಆರಂಭವಾದ ಕೂಡಲೇ ಬಿಬಿಎಂಪಿ ಕೇಂದ್ರ ಕಚೇರಿಗೆ ಭೇಟಿ ನೀಡಿದ ಪಾಲಿಕೆಯ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಸ್ವತಃ ನಿಯಂತ್ರಣ ಕೊಠಡಿಯಲ್ಲಿ ಕುಳಿತು ಸಾರ್ವಜನಿಕರಿಂದ ಬರುವ ದೂರುಗಳನ್ನು ಸ್ವೀಕರಿಸಿದರು. ಜತೆಗೆ ಪರಿಹಾರ ಕಾರ್ಯಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಹವಾಮಾನ ಇಲಾಖೆ ಮಾಹಿತಿಯ ಹಿನ್ನೆಲೆಯಲ್ಲಿ ಅಗತ್ಯ ಮಂಜಾಗ್ರತಾ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಯಾವುದೇ ಹಾನಿಯುಂಟಾಗಿಲ್ಲ. ನಗರದಲ್ಲಿ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಗಳಿಗೆ ಸಿದ್ಧರಾಗಿರುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿತ್ತು. ಅದರಂತೆ ಮರಗಳು ಬಿದ್ದ ಕೂಡಲೇ ಸಿಬ್ಬಂದಿ ತೆರವುಗೊಳಿಸಿದ್ದಾರೆ ಎಂದರು ಹೇಳಿದರು.

ಮನೆಗಳಿಗೆ ನುಗ್ಗಿದ ನೀರು: ನಗರದಲ್ಲಿ ಶುಕ್ರವಾರ ಸುರಿದ ಮಳೆಯಿಂದ ಮಹದೇವಪುರದ ಹಲವಾರು ಪ್ರದೇಶಗಳಿಗೆ ನೀರು ನುಗ್ಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು. ವಲಯದ ಬೆಳ್ಳಂದೂರು, ಮಾರತ್ತಹಳ್ಳಿ, ಬೆಳತೂರು, ಕಾಡುಗುಡಿ, ಹಗದೂರು ಭಾಗದ ತಗ್ಗುಪ್ರದೇಶಗಳಲ್ಲಿ ಬಡಾವಣೆಗಳಿಗೆ ಮಳೆನೀರು ನುಗ್ಗಿದ್ದು,

ಗಾಳಿಸಹಿತ ಮಳೆಯಿಂದ ಕೆಲವು ಕಡೆಗಳಲ್ಲಿ ವಿದ್ಯುತ್‌ ಕಂಬಗಳು ಧರೆಗುರುಳಿದರಿಂದ ವಿದ್ಯುತ್‌ ವ್ಯತ್ಯಯ ಉಂಟಾಯಿತು. ವೈಟ್‌ಫೀಲ್ಡ್‌, ಮಹದೇವಪುರ, ಮಾರತಹಳ್ಳಿ, ಕುಂದಲಹಳ್ಳಿ, ಐಟಿಪಿಎಲ್‌ ಭಾಗದ ಮುಖ್ಯರಸ್ತೆಗಳಲ್ಲಿ ನೀರು ನಿಂತು ದಟ್ಟಣೆ ಉಂಟಾದ ಪರಿಣಾಮ ವಾಹನ ಸವಾರರು ಮಳೆಯಲ್ಲಿ ನಿಲ್ಲುವಂತಾಯಿತು.

ಟಾಪ್ ನ್ಯೂಸ್

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.