ಅರ್ಜಿ ಇತ್ಯರ್ಥಕ್ಕೆ ಮಾ. 31ರ ಗಡುವು
Team Udayavani, Dec 7, 2017, 7:20 AM IST
ಬೆಂಗಳೂರು: ಗ್ರಾಮೀಣ ಅಕ್ರಮ-ಸಕ್ರಮ (94ಸಿ), ಬಗರ್‌ಹುಕುಂ ಸಾಗುವಳಿ ಚೀಟಿ, ವಾಸಿಸುವವನೇ ಮನೆಯೊಡೆಯ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ 2018ರ ಮಾ. 31ರ ಗಡುವು ವಿಧಿಸಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು, ಈ ನಿಟ್ಟಿನಲ್ಲಿ ಜಿಲ್ಲಾವಾರು ಸಭೆಗಳನ್ನು ನಡೆಸಲು ಡಿ. 15ರ ಬಳಿಕ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಗೋಡು ತಿಮ್ಮಪ್ಪ, ಗ್ರಾಮೀಣ ಅಕ್ರಮ-ಸಕ್ರಮ, ಬಗರ್‌ಹುಕುಂ ಸಾಗುವಳಿ ಚೀಟಿ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಈಗಾಗಲೇ ಸಾಕಷ್ಟು ಗಡುವು ವಿಧಿಸಲಾಗಿತ್ತಾದರೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಮಾ. 31ರ ಗಡುವು ವಿಧಿಸಲಾಗಿದೆ. ಇದರ ಜತೆಗೆ ವಾಸಿಸುವವೇ ಮನೆಯೊಡೆಯ ಯೋಜನೆ ಅರ್ಜಿಗಳ ಇತ್ಯರ್ಥಕ್ಕೂ ಇದೇ ಗಡುವು ವಿಧಿಸಲಾಗಿದೆ. ಈ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಏನೇನು ಕ್ರಮಗಳನ್ನು ಕೈಗೊಳ್ಳ ಬೇಕು ಎಂಬ ಬಗ್ಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದರು.
ತ್ವರಿತಕ್ಕೆ ಮತ್ತೂಮ್ಮೆ ಸುತ್ತೋಲೆ: ಗ್ರಾಮೀಣ ಅಕ್ರಮ-ಸಕ್ರಮ ಯೋಜನೆ 2012ರ ಮುಂಚಿನ ನಿರ್ಮಾಣಕ್ಕೆ ಮಾತ್ರ ಅನ್ವಯವಾಗುತ್ತದೆ ಎಂದು ಈ ಹಿಂದಿನ ಆದೇಶದಲ್ಲಿ ತಿಳಿಸಲಾಗಿತ್ತು. ಇದೀಗ 2015 ರವರೆಗೆ ಅವಧಿ ವಿಸ್ತರಿಸಲಾಗಿದೆ. ಜತೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಮುಂದಿನ ಫೆಬ್ರವರಿವರೆಗೆ ವಿಸ್ತರಿಸಲಾಗಿದೆ. ಪ್ರಸ್ತುತ 6-7 ಲಕ್ಷ ಅರ್ಜಿಗಳು ಬಂದಿದ್ದು, ಇನ್ನೂ ಸಾಕಷ್ಟು ಮಂದಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಿಗರು
ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ನಕ್ಷೆಯೊಂದಿಗೆ ಸುತ್ತಾಡಿ ಅರ್ಜಿ ಸಲ್ಲಿಸದವರಿಂದ ಅರ್ಜಿ ಪಡೆಯಬೇಕು. ರಾಜ್ಯಾದ್ಯಂತ ಈ ಪ್ರಕ್ರಿಯೆ ಚುರುಕುಗೊಳಿಸಿ ಮಾರ್ಚ್ ಅಂತ್ಯದೊಳಗೆ ಅರ್ಜಿ ಇತ್ಯರ್ಥಗೊಳಿಸಬೇಕು. ಅದಕ್ಕಾಗಿ ಮತ್ತೂಮ್ಮೆ ಸುತ್ತೋಲೆ ಹೊರಡಿಸಲಾಗುವುದು ಎಂದರು.
ಸಭೆ ಕರೆದು ಸೂಕ್ತ ಕ್ರಮ: ಇದರ ಜತೆಗೆ ಬಗರ್ ಹುಕುಂ ಸಾಗುವಳಿ ಚೀಟಿ ವಿತರಣೆ ಮತ್ತು ವಾಸಿಸುವವನೇ ಮನೆಯೊಡೆಯ ಯೋಜನೆ ಅರ್ಜಿಗಳನ್ನೂ ಕಾಲಮಿತಿಯೊಳಗೆ ಇತ್ಯರ್ಥ ಪಡಿಸಬೇಕಾಗಿದೆ. ಅದಕ್ಕಾಗಿ ಡಿ. 15ರ ಬಳಿಕ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.