ಮುಂಜಿ ಮಾಡಿಸಿ ಇಸ್ಲಾಂಗೆ ಮತಾಂತರ: ಆಮಿಷವೊಡ್ಡಿ ಬಲವಂತದ ಮತಾಂತರ
Team Udayavani, Oct 6, 2022, 12:23 PM IST
ಬೆಂಗಳೂರು: ಹಿಂದೂ ಯುವಕನಿಗೆ ಬಲವಂತವಾಗಿ ಕತ್ನಾ (ಮುಂಜಿ) ಮಾಡಿಸಿ ಮುಸ್ಲಿಂ ಧರ್ಮಕ್ಕೆ ಮಾತಾಂತರ ಮಾಡಿದ ಇಬ್ಬರು ಆರೋಪಿಗಳನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮೊಹಮ್ಮದ್ ಅಸಾನ್ ಅಲಿಯಾಸ್ ಅತ್ತಾರ್ವ ರೆಹಮಾನ್ (45 ವ) ಮತ್ತು ಬನಶಂಕರಿಯ ಕಾವೇರಿನ ನಗರ ನಿವಾಸಿ ಶಬೀರ್ (34) ಬಂಧಿತರು. ಆರೋಪಿಗಳು ಕೆಲ ದಿನಗಳ ಹಿಂದಷ್ಟೇ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಶ್ರೀಧರ್ ಎಂಬಾತನಿಗೆ ಮತಾಂತರ ಮಾಡಿಸಿದ್ದರು. ಆರೋಪಿಗಳ ವಿರುದ್ಧ ಮತಾಂತರ ಹಾಗೂ ಎಸ್ಸಿ ಮತ್ತು ಎಸ್ಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.
ಮಂಡ್ಯ ಜಿಲ್ಲೆ ಮದ್ದೂರ ತಾಲೂಕಿನ ಶ್ರೀಧರ್ (24) ಎಂಬಾತ ಡಿಪ್ಲೊಮಾ ವ್ಯಾಸಂಗ ಮಾಡಿದ್ದಾನೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಶ್ರೀಧರ್‌ಗೆ ಪರಿಚಯವಾಗಿದ್ದ ಶಬೀರ್ ಬಳಿ ತನ್ನ ಆರ್ಥಿಕ ಸಮಸ್ಯೆಗಳ ಬಗ್ಗೆ ಹೇಳಿಕೊಂಡಿದ್ದಾನೆ. ಈ ವೇಳೆ ಆರೋಪಿ ಮತಾಂತರ ಮಾಡಿಕೊಂಡರೆ ಹಣ ಸಿಗುವುದಾಗಿ ಆಮಿಷವೊಡ್ಡಿದ್ದಾನೆ. ಇದಕ್ಕೆ ಶ್ರೀಧರ್ ಒಪ್ಪಿಕೊಂಡಿದ್ದಾನೆ. ಬಳಿಕ ಆತನಿಗೆ ಕತ್ನಾ ಮಾಡಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿಸಿದ್ದರು. ನಂತರ ಮಸೀದಿಯೊಂದಕ್ಕೆ ಕರೆದೊಯ್ದು ಅಕ್ರಮವಾಗಿ ಗೃಹ ಬಂಧನದಲ್ಲಿರಿಸಿದ್ದರು.
ಇದನ್ನೂ ಓದಿ:ಆನೆಗೆ ಗಾಯ ಕುರಿತಂತೆ ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಲಾಗುವುದು: ಸಿಎಂ ಬೊಮ್ಮಾಯಿ
ಅದನ್ನು ವಿರೋಧಿಸಿದಾಗ ಶಸ್ತ್ರಾಸ್ತ್ರ ತೋರಿಸಿ ಬೆದರಿಸಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದರು. ಒಂದು ವೇಳೆ ಈ ವಿಷಯವನ್ನು ಬಾಯಿಬಿಟ್ಟರೆ ಉಗ್ರ ಎಂದು ವಿಡಿಯೋ ಹರಿಬಿಡುವುದಾಗಿ ಬೆದರಿಸಿದ್ದಾರೆ. ಜತೆಗೆ ವರ್ಷಕ್ಕೆ ಮೂವರನ್ನು ಕರೆ ತಂದು ಮತಾಂತರಿಸಬೇಕು ಎಂದು ಒತ್ತಾಯಿಸಿದ್ದರು ಎಂದು ಶ್ರೀಧರ್ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದರು.
ಹುಬ್ಬಳ್ಳಿಯಲ್ಲಿ ಪ್ರಕರಣ ಬೆಳಕಿಗೆ: ಈ ಮಧ್ಯೆ ಶ್ರೀಧರ್, ಸಾಮಾಜಿಕ ಜಾಲತಾಣ ಫೇಸ್ ಬುಕ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳನ್ನು ಹುಬ್ಬಳ್ಳಿಯಲ್ಲಿ ಭೇಟಿಯಾಗಲು ಹೋಗಿದ್ದ. ಆಗ ಸ್ಥಳೀಯರು ಈತನಿಗೆ ಥಳಿಸಿ, ಠಾಣೆಗೆ ಕರೆದೊಯ್ದಿದ್ದರು. ಈತನ ವಿಚಾರಣೆ ವೇಳೆ ಮತಾಂತರ ಮಾಡಿಸಿದ್ದಾರೆ. ಜತೆಗೆ ಬಲವಂತವಾಗಿ ದನದ ಮಾಂಸ ತಿನ್ನಸಿದಲ್ಲದೆ, ತನಗೆ ಮೊಹಮ್ಮದ್ ಸಲ್ಮಾನ್ ಎಂದು ಹೆಸರಿಟ್ಟಿದ್ದರು.
ಈ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯ ಬೆಂಗಳೂರಿನಲ್ಲಿ ನಡೆದಿದ್ದರಿಂದ ಬನಶಂಕರಿ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ನಡೆಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಲ್ಲದೆ, ಶ್ರೀಧರ್ ಪರಿಶಿಷ್ಟ ಸಮುದಾಯಕ್ಕೆ ಸೇರಿದವನಾದ್ದರಿಂದ ಎಸ್ಸಿ, ಎಸ್ಟಿ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿದೆ. ಜಯನಗರ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.