ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಚಾರಣೆ
Team Udayavani, May 19, 2017, 3:45 AM IST
ಬೆಂಗಳೂರು: ಜಂತಕಲ್ ಮೈನಿಂಗ್ ಕಂಪನಿಗೆ ಅಕ್ರಮವಾಗಿ ಪರವಾನಗಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಂದೆ ಗುರುವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಚಾರಣೆಗೆ ಹಾಜರಾದರು.
ಬೆಂಗಳೂರಿನ ಹೆಬ್ಟಾಳದಲ್ಲಿರುವ ಲೋಕಾಯುಕ್ತ ವಿಶೇಷ ತನಿಖಾ ದಳದ ಕಚೇರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಎಚ್.ಡಿ. ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ ಅಧಿಕಾರಿಗಳು 60 ಪ್ರಶ್ನೆಗಳಿಗೆ ಉತ್ತರ ಪಡೆದರು.
ವಿಚಾರಣೆ ವೇಳೆ ಕುಮಾರಸ್ವಾಮಿ ಅವರು ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೂ ಸಮಾಧಾನದಿಂದಲೇ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮತ್ತೂಮ್ಮೆ ವಿಚಾರಣೆ ಅಗತ್ಯವಾದರೆ ತಮಗೆ ಮೂರು ದಿನ ಮುಂಚೆ ನೋಟಿಸ್ ಕೊಡಬೇಕು ಎಂದು ಇದೇ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಅಧಿಕಾರಿಗಳಿಗೆ ಹೇಳಿದರು. ಮಧ್ಯಾಹ್ನ 12 ಗಂಟೆ ವೇಳಗೆ ಎಸ್‌ಐಟಿ ಕಚೇರಿಗೆ ಆಗಮಿಸಿದ ಕುಮಾರಸ್ವಾಮಿ ಮಧ್ಯಾಹ್ನ 1.50 ಕ್ಕೆ ನಿರ್ಗಮಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಅವರನ್ನು ಈಗಾಗಲೇ ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ. ಈ ವೇಳೆ ಅಂದಿನ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರ ಒತ್ತಡಕ್ಕೆ ಮಣಿದು ಅವರ ಮೌಖೀಕ ಸೂಚನೆ ಮೇರೆಗೆ ಪರವಾನಗಿ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಅಲ್ಲದೇ ಇದನ್ನು ಕಡತದಲ್ಲೂ ಉಲ್ಲೇಖೀಸಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಲಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಹೊರತು ಪಡಿಸಿ, ಇತರ ಎಲ್ಲರನ್ನು ವಿಚಾರಣೆ ನಡೆಸಿ ಮೂರು ತಿಂಗಳ ಒಳಗೆ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸದ್ಯ 3 ಮಂದಿಯನ್ನು ಮಾತ್ರ ವಿಚಾರಣೆಗೆ ಕರೆಸಲಾಗಿದೆ. ಅಗತ್ಯ ಬಿದ್ದರೆ ಇನ್ನುಳಿದ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.
ಯಾವುದೇ ಭೀತಿಯಿಲ್ಲ:
ವಿಚಾರಣೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಎಸ್‌ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿದ್ದೇನೆ. ಏನು ಪ್ರಶ್ನೆ ಕೇಳಿದ್ದಾರೆ? ನಾನು ಏನು ಹೇಳಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಮತ್ತೆ ವಿಚಾರಣೆ ಅಗತ್ಯವಿದ್ದಲ್ಲಿ ಮೂರು ದಿನಗಳ ಮೊದಲೇ ನೋಟಿಸ್ ನೀಡುವಂತೆ ಹೇಳಿದ್ದೇನೆ. ಕೇವಲ ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತ್ರ ವಿಚಾರಣೆ ನಡೆಯಿತು. ಕೆಲವರು ನನಗೆ ಬಂಧನ ಭೀತಿ ಎಂದು ಹೇಳುತ್ತಿದ್ದಾರೆ. ಅಂತಹ ಯಾವುದೇ ಭೀತಿ ನಮಗಿಲ್ಲ ಎಂದು ಹೇಳಿದರು.
ಬಡೇರಿಯಾ ಮತ್ತೆ ಪೊಲೀಸ್ ವಶಕ್ಕೆ
ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅವರನ್ನು ಮೇ20ರವರೆಗೆ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಮೇ 18ರವರೆಗೆ ಪೊಲೀಸ್ ವಶಕ್ಕೆ ಪಡೆಯಲಾಗಿತ್ತು. ಆದರೆ, ಈ ಸಂದರ್ಭದಲ್ಲಿ ಗಂಗಾರಾಮ್ ಬಡೇರಿಯಾ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಎರಡು ದಿನಗಳ ವಿಚಾರಣೆ ನಡೆಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.