ಎರಡನೇ ಡೋಸ್ ಲಸಿಕೆ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ
Team Udayavani, Apr 29, 2021, 1:01 PM IST
ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.
ಸಿದ್ದರಾಮಯ್ಯನವರು ಮಾರ್ಚ್ 15 ರಂದು ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು. ಇದಾದ ಬಳಿಕ ಗುರುವಾರ ಬೆಳಗ್ಗೆ 11 ಗಂಟೆಗೆ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡರು.
ಸಿದ್ದರಾಮಯ್ಯ ಅವರಿಗೂ ಕೋವಿಡ್ ಸೋಂಕು ಪಾಸಿಟಿವ್ ಆಗಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದಾದ ಬಳಿಕ ಸಾಕಷ್ಟು ಎಚ್ಚರಿಕೆಯನ್ನು ವಹಿಸಿಕೊಂಡಿದ್ದರು.
ಇನ್ನು ದೇಶದಲ್ಲಿ ಕೋವಿಡ್ ವಿರುದ್ಧ ಹೋರಾಟ ತೀವ್ರಗೊಳಿಸುವ ನಿಟ್ಟನಿಲ್ಲಿ ಲಸಿಕಾ ಅಭಿಯಾನ ಚುರುಕುಗೊಳಿಸಲಾಗಿದೆ. ಈಗಾಗಲೇ ಎರಡು ಹಂತಗಳಲ್ಲಿ ಕೋವಿಡ್ ಲಸಿಕೆ ನೀಡಲಾಗಿದೆ. ಇದೀಗ ಮೂರನೇ ಹಂತದಲ್ಲಿ ಲಸಿಕಾ ಅಭಿಯಾನ ಮೇ 1 ರಿಂದ ಶುರುವಾಗಲಿದೆ. 18 ವರ್ಷ ಮೇಲ್ಪಟ್ಟವರಿಗೂ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಈ ನಿಟ್ಟನಿಲ್ಲಿ ಬುಧವಾರ 4 ಗಂಟೆಯಿಂದ ನೋಂದಣಿ ಕಾರ್ಯ ಆರಂಭಗೊಂಡಿದ್ದು ಸುಮಾರು 70 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.