ವಿಶೇಷ ಚೇತನ ವಿದ್ಯಾರ್ಥಿನಿ ಮನೆಗೆ ತೆರಳಿ ಅಭಿನಂದಿಸಿದ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್
Team Udayavani, Aug 10, 2021, 3:33 PM IST
ಬೆಂಗಳೂರು: ಮಾಜಿ ಶಿಕ್ಷಣ ಸಚಿವರು ಹಾಗೂ ಬಿಜೆಪಿ ಶಾಸಕರು ಆಗಿರುವ ಸುರೇಶ್ ಕುಮಾರ್ ಎಸ್ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿಶೇಷ ಚೇತನ ವಿದ್ಯಾರ್ಥಿನಿಯೋರ್ವಳನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಯಶಸ್ವಿನಿ ಹೆಸರಿನ ವಿದ್ಯಾರ್ಥಿನಿ ಮೂಳೆಯ ಸಮಸ್ಯೆಯಿಂದ ಬಳಲುತ್ತಿದ್ದಾಳೆ. 10ನೇ ವಯಸ್ಸಿನಿಂದಲೇ ಈ ಖಾಯಿಲೆ ಈಕೆಗೆ ಅಂಟಿಕೊಂಡಿದೆ. ಹೆಚ್ಚು ಹೊತ್ತು ಕೂರಲು ಈಕೆಯ ಆಗುವುದಿಲ್ಲ. ಇಂತಹ ಸಮಸ್ಯೆಯ ನಡುವೆಯೂ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರದೇ ತೀರುತ್ತೇನೆ ಎಂಬ ಛಲದಿಂದ ಪರೀಕ್ಷೆಯನ್ನು ಬರೆದು 80 % ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾಳೆ.
ಇಂದು ಈ ವಿದ್ಯಾರ್ಥಿನಿಯ ಮನೆಗೆ ತೆರಳಿದ ಮಾಜಿ ಸಚಿವರು ಅಭಿನಂದನೆ ತಿಳಿಸಿದ್ದಾರೆ. ಕೆಲವೊತ್ತು ಆಕೆಯ ಜೊತೆ ಮಾತನಾಡಿ ಕುಶಲೋಪರಿ ವಿಚಾರಿಸಿಕೊಂಡು ಬಂದಿದ್ದಾರೆ. ಈ ವಿಚಾರವನ್ನು ತಮ್ಮ ಫೇಸ್ ಬುಕ್ ನಲ್ಲಿ ಹಂಚಿಕೊಂಡ ಅವರು, “ಇಂದು ಯಶಸ್ಸಿನಿಯ ಪುಟ್ಟ ಮನೆಯಲ್ಲಿ ಸಂಭ್ರಮದ ವಾತಾವರಣ ಇತ್ತು. ಆಕೆಯ ಮೊಗದಲ್ಲಿ ತೃಪ್ತಿಯ ನಗೆ ಕಾಣಿಸಿಕೊಂಡಿತ್ತು. ಆಕೆ ಓದಿದ ಮೀರಾ ಶಾಲೆಯ ಶಿಕ್ಷಕ ವೃಂದವೇ ಅಲ್ಲಿ ನೆರೆದಿತ್ತು. ಜುಲೈ 22 ರಂದು ಪರೀಕ್ಷಾ ನಂತರ ಈ ಬಾಲೆಯ ಛಲದ ಕುರಿತು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದೆ. ನಾವೆಲ್ಲರೂ ಯಶಸ್ವಿನಿಯ ಈ ಸಾಧನೆಗೆ ಶ್ಲಾಘನೆ ಮಾಡಬೇಕಲ್ಲವೆ” ಎಂದು ಹೇಳಿದ್ದಾರೆ.
https://t.co/HcWWAiRr6V pic.twitter.com/J0t8P4mT1e
— S.Suresh Kumar (@nimmasuresh) August 10, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.