ಮಾಜಿ ಸಚಿವ ವೈಜನಾಥ್ ಪಾಟೀಲ್ ವಿಧಿವಶ
Team Udayavani, Nov 2, 2019, 7:55 AM IST
ಕಲಬುರಗಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ವೈಜನಾಥ್ ಪಾಟೀಲ್(82) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಚಿಂಚೋಳಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ 1984ರಲ್ಲಿ ತೋಟಗಾರಿಕೆ ಹಾಗೂ ಎಚ್. ಡಿ. ದೇವೆಗೌಡ ಸಂಪುಟದಲ್ಲಿ 1994ರಲ್ಲಿ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಹೈದರಾಬಾದ್ ಕರ್ನಾಟಕ ಈಗಿನ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಗೆ ಪಾಟೀಲ್ ರ ಮನಸ್ಸು ಸದಾ ಮಿಡಿಯುತ್ತಿತ್ತು. ಈ ಭಾಗದ ಅಭಿವೃದ್ಧಿಗಾಗಿ ವಿಶೇಷ ಸ್ಥಾನಮಾನ ಕಲ್ಪಿಸುವ 371 ಜೆ ವಿಧಿ ಜಾರಿಗೆ ಆಗ್ರಹಿಸಿ ಎರಡು ದಶಕಗಳ ಹಿಂದೆ ಧ್ವನಿ ಎತ್ತಿ ಹೋರಾಟ ನಡೆಸಿದ್ದರು.
ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳನ್ನು ತಕ್ಷಣವೇ ಸರಕಾರದ ಗಮನ ಸೆಳೆಯುತ್ತಿದ್ದರು. ಒಂದೊಮ್ಮೆ ಸರಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸಚಿವ ಸ್ಥಾನಕ್ಕೂ ಕೂಡ ರಾಜೀನಾಮೆ ನೀಡಿದ್ದರು.
ಎಂಎಸ್ಐಎಲ್ ಮಾಜಿ ಅಧ್ಯಕ್ಷ ಡಾ. ವಿಕ್ರಮ್ ಪಾಟೀಲ್, ಜಿಲ್ಲಾ ಪಂಚಾಯಿತಿ ಸದಸ್ಯ ಗೌತಮ ಪಾಟೀಲ್ ಸೇರಿ ಮೂವರು ಪುತ್ರರು, ಪತ್ನಿ ಹಾಗೂ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ (ರವಿವಾರ) ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.