ಮಾಜಿ ಸಂಸದೆ ರಮ್ಯಾ ಗೈರಿಗೆ ಡಿ.ಕೆ.ಶಿವಕುಮಾರ್ ಸಮಜಾಯಿಷಿ
Team Udayavani, Nov 28, 2018, 6:00 AM IST
ಬೆಂಗಳೂರು: ಹಿರಿಯ ನಟ ಅಂಬರೀಶ್ ಅವರ ಅಂತಿಮ ದರ್ಶನ ಪಡೆಯಲು ಮಾಜಿ ಸಂಸದೆ ರಮ್ಯಾ ಆಗಮಿಸದಿರುವ ಬಗ್ಗೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟೀಕರಣ ನೀಡಿದ್ದಾರೆ. ರಮ್ಯಾ ಅವರ ಕಾಲಿಗೆ ಪೆಟ್ಟಾಗಿ ನಡೆಯಲಾಗದ ಸ್ಥಿತಿಯಲ್ಲಿ ಇರುವುದರಿಂದ ಅಂಬರೀಶ್ ಅವರ ಅಂತ್ಯ ಸಂಸ್ಕಾರಕ್ಕೆ ಆಗಮಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರು ನಿಧನರಾದ ನಂತರ ರಮ್ಯಾ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲಾಯಿತು. ಅವರು ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿ ಇರುವುದರಿಂದ ಅಂಬರೀಶ್ ಅಂತ್ಯ ಸಂಸ್ಕಾರಕ್ಕೆ ಬರಲು ಆಗಿಲ್ಲ. ಈ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ತಿಳಿಸಿದರು.
ಈ ಬೆಳವಣಿಗೆಗಳ ಬೆನ್ನಲ್ಲೇ ರಮ್ಯಾ ತಮ್ಮ ಕಾಲಿಗೆ ಪೆಟ್ಟಾಗಿ ನಡೆಯಲು ಬಾರದ ಸ್ಥಿತಿಯಲ್ಲಿದೆ ಎಂಬ ಬಗ್ಗೆ ಇನ್‌ಸ್ಟ್ರಾಗ್ರಾಂನಲ್ಲಿ ಫೋಟೊ ಅಪ್‌ಲೋಡ್ ಮಾಡಿದ್ದು, ತಾವು ಇನ್ನು ಕೆಲವು ದಿನಗಳವರೆಗೆ ನಡೆದಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ನನ್ನ ಕಾಲಿಗೆ ಕ್ಯಾನ್ಸರ್ ತಗುಲಿಲ್ಲ ಎಂದು ಸಂದೇಶ ಪೋಸ್ಟ್ ಮಾಡಿದ್ದಾರೆ. ಜತೆಗೆ ಸಲಹೆಯನ್ನೂ ನೀಡಿರುವ ರಮ್ಯಾ, ಯಾರಿಗಾದರೂ ದೇಹದಲ್ಲಿ ನೋವು ಕಂಡ ತಕ್ಷಣ ವೈದ್ಯರನ್ನು ಸಂಪರ್ಕಿಸಿ. ನನ್ನ ಹಾಗೆ ನಿರ್ಲಕ್ಷ್ಯ ಮಾಡಬೇಡಿ. ದೊಡ್ಡ ಗಾತ್ರದ ಗಡ್ಡೆ ಉಂಟಾಗುವ ಸಾಧ್ಯತೆ ಇದ್ದು, ಈ ರೀತಿಯ ಸಮಸ್ಯೆ ಒಂದು ಮಿಲಿಯನ್ ಮಹಿಳೆಯರಲ್ಲಿ ಒಬ್ಬರಿಗೆ ತಗಲುತ್ತದೆ. ಅದು ಮಾರಣಾಂತಿಕವಾಗುವ ಸಾಧ್ಯತೆ ಇದೆ. ಹೀಗಾಗಿ ಅದನ್ನು ಆರಂಭದಲ್ಲಿಯೇ ತಡೆಯುವ ಪ್ರಯತ್ನ ಮಾಡಬೇಕು. ಅಲ್ಲದೇ ನನ್ನ ದೇಹದ ನೋವಿಗೆ
ಸ್ಪಂದಿಸಬೇಕು ಎನ್ನುವುದು ನಾನು ಕಲಿತ ದೊಡ್ಡ ಪಾಠ ಎಂದೂ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.