ಬೆಂಗಳೂರಿಗೆ ಬಂದ ಅಟಲ್‌ ಅಸ್ಥಿಗೆ ಸ್ವಾಗತ​​​​​​​


Team Udayavani, Aug 23, 2018, 6:30 AM IST

former-pm-atal-bihari-vajpayee.jpg

ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮದ ಕಳಶ ಬುಧವಾರ ಬೆಂಗಳೂರಿಗೆ ತರಲಾಗಿದ್ದು , ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಹಸ್ರಾರು ಕಾರ್ಯಕರ್ತರು ಬರಮಾಡಿಕೊಂಡರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ , ಸಂಸದರಾದ ಸುರೇಶ್‌ ಅಂಗಡಿ, ಶಿವಕುಮಾರ  ಉದಾಸಿಯವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಂದ ಅಸ್ಥಿ ಕಳಶ ಸ್ವೀಕರಿಸಿ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ,  ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಸೇರಿ ಹಲವು ನಾಯಕರು ಸ್ವಾಗತ ಕೋರಿದರು.

ನಂತರ ಅಸ್ಥಿ ಕಳಶ ತೆರೆದ ಜೀಪಿನಲ್ಲಿ ಬೈಕ್‌ ರ್ಯಾಲಿ ಮೂಲಕ ಮೆರವಣಿಗೆಯಲ್ಲಿ ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ತರಲಾಯಿತು. ಮಾರ್ಗದುದ್ದಕ್ಕೂ ಸಹಸ್ರಾರು ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿದರು.

ರಾಜ್ಯ  ಬಿಜೆಪಿ ಕಚೇರಿಯಲ್ಲಿಯೂ ಪರಿಷತ್‌ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ರವಿಕುಮಾರ್‌ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಹಾಜರಿದ್ದ ಕಾರ್ಯಕರ್ತರು ಹಾಗೂ ಮುಖಂಡರು ಅಸ್ಥಿ ಕಳಶ ಸ್ವಾಗತಿಸಿ ಪುಷ್ಪಾರ್ಚನೆ ಮಾಡಿ ಗೌರವ ಸೂಚಿಸಿದರು.

ರಾಜ್ಯ ಕಚೇರಿಗೆ ಚಿತಾಭಸ್ಮದ ಕಳಶ ಆಗಮಿಸದಾಗ ಅಭಿಮಾನಿಗಳು ಅಟಲ್‌ ಜೀ, ಅಮರ್‌ ರಹೇ, ವಾಜಪೇಯಿ ಜಿಂದಾಬಾದ್‌’ ಎಂದು ಘೋಷಣೆಗಳ ಮೂಲಕ ಗೌರವ ಅರ್ಪಿಸಿದರು. ರಾತ್ರಿ ಹತ್ತು ಗಂಟೆವರೆಗೂ ಚಿತಾಭಸ್ಮಕ್ಕೆ ಗೌರವ ಸಲ್ಲಿಸಲು ಸಾರ್ವಜನಿಕರಿಗೂ ಅವಕಾಶ ಮಾಡಿಕೊಡಲಾಗಿತ್ತು.

ಇಂದು ಕಾವೇರಿಗೆ ವಿಸರ್ಜನೆ
ಗುರುವಾರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ ಮಾಡಲಾಗುವುದು. ಬೆಳಗ್ಗೆ 9 ಗಂಟೆಯಿಂದ ರಾಜ್ಯ ಬಿಜೆಪಿ ಕಾರ್ಯಾಲಯದಿಂದ ಅಸ್ಥಿ ಕಳಶ ತೆರೆದ ಜೀಪಿನಲ್ಲಿ ಮೆರವಣಿಗೆ ನಡೆಸಿ ನವರಂಗ್‌ ವೃತ್ತ, ವಿಜಯನಗರ, ಗಾಳಿ ಆಂಜನೇಯ ದೇವಸ್ಥಾನ, ರಾಜರಾಜೇಶ್ವರಿ ನಗರ ವೃತ್ತ, ಕೆಂಗೇರಿ ಮೂಲಕ ಸಾಗಲಿದೆ.

ಬಿಡದಿಯಲ್ಲಿ ಕಳಶ ಸ್ವಾಗತಿಸಿ ನಂತರ ರಾಮನಗರ, ಚೆನ್ನಪಟ್ಟಣ, ಮದ್ದೂರು, ಮಂಡ್ಯ ಮೂಲಕ 2 ಗಂಟೆಗೆ ಶ್ರೀರಂಗಪಟ್ಟಣಕ್ಕೆ ತಲುಪಿದ್ದು, ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ ಮಾಡಲಾಗುವುದು. ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್‌, ಸಂಸದರಾದ ಪಿ.ಸಿ.ಮೋಹನ್‌, ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌, ಮಾಜಿ ಸಚಿವ ಅರವಿಂದ ಲಿಂಬಾವಳಿ ಮೆರವಣಿಗೆಯಲ್ಲಿ ಸಾಗುವರು. ಪಶ್ಚಿಮ ವಾಹಿನಿ ಬಳಿ ಸಂಸದ ಪ್ರತಾಪಸಿಂಹ ಹಾಗೂ ಶಾಸಕರಾದ ರಾಮದಾಸ್‌, ಎಲ್‌.ನಾಗೇಂದ್ರ ಜತೆಗೂಡಲಿದ್ದಾರೆ .

ನಂತರ ಆ.25 ರಂದು ನೇತ್ರಾವತಿ, ಮಲಪ್ರಭಾ,  ಕೃಷ್ಣಾ , ಕಾರಂಜಾ,  ತುಂಗಭದ್ರಾ,  ಶರಾವತಿ , ತುಂಗಾ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.