ಮೀರಾಕುಮಾರ್‌ಗೆ ಜೆಡಿಎಸ್ ಬೆಂಬಲವೆಂದ ಮಾಜಿ ಪ್ರಧಾನಿ
Team Udayavani, Jun 26, 2017, 3:45 AM IST
ಬೆಂಗಳೂರು: ವಾರದ ಹಿಂದೆಯಷ್ಟೇ ವಿಧಾನಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲಿಸಿದ್ದ ಜೆಡಿಎಸ್, ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿದಿದೆ.
ಕಾಂಗ್ರೆಸ್ ನೇತೃತ್ವದ ಮಿತ್ರಪಕ್ಷಗಳ ಬೆಂಬಲದೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿರುವ ಮಾಜಿ ಸ್ಪೀಕರ್ ಮೀರಾಕುಮಾರ್ ಅವರಿಗೆ ಬೆಂಬಲ ನೀಡಲು ಮಾಜಿ ಪ್ರಧಾನಿ ದೇವೇಗೌಡ ನಿರ್ಧರಿಸಿದ್ದಾರೆ. ಹೀಗಾಗಿ ಮೀರಾಕುಮಾರ್ ಅವರ ನಾಮಪತ್ರಕ್ಕೆ ದೇವೇಗೌಡ, ಕುಮಾರಸ್ವಾಮಿ ಮತ್ತು ಮಧುಬಂಗಾರಪ್ಪ ಅವರು ಸಹಿ ಮಾಡಿದ್ದಾರೆ.
ಮೀರಾಕುಮಾರ್ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಆರಂಭಗೊಂಡಿದ್ದು, ನಾಮಪತ್ರಕ್ಕೆ ಸೂಚಕರಾಗಿ ಪ್ರತಿಪಕ್ಷಗಳ ಮುಖಂಡರ ಸಹಿ ಹಾಕಿಸಿಕೊಳ್ಳಲಾಗುತ್ತಿದೆ.ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಭಾನುವಾರ ದೇವೇಗೌಡರ ನಿವಾಸ ಅಮೋಘಕ್ಕೆ ತೆರಳಿ ಮೀರಾಕುಮಾರ್ ನಾಮಪತ್ರಕ್ಕೆ ಸಹಿ ಪಡೆದುಕೊಂಡರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೂಡ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದರು.
ಈ ಬಳಿಕ ಮಾತನಾಡಿದ, ಎಚ್.ಡಿ. ಕುಮಾರಸ್ವಾಮಿ, ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸಲು ಜೆಡಿಎಸ್ ನಿರ್ಧರಿಸಿದೆ. ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರ ತೀರ್ಮಾನದಂತೆ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಮೀರಾಕುಮಾರ್ ಬೆಂಬಲಿಸುವಂತೆ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ದೂರವಾಣಿ ಕರೆ ಮಾಡಿ, ದೇವೇಗೌಡರಿಗೆ ಮನವಿ ಮಾಡಿದ್ದರು. ಅದರಂತೆ ಮೀರಾಕುಮಾರ್ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಲಾಗಿದೆ ಎಂದರು.
ದೇವೇಗೌಡರ ಭೇಟಿ ಬಳಿಕ ಮಾತನಾಡಿದ ಪರಮೇಶ್ವರ್, ರಾಷ್ಟ್ರಪತಿ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ನೀಡಿದ್ದು, ಅದರಂತೆ ದೇವೇಗೌಡ ಮತ್ತು ಕುಮಾರಸ್ವಾಮಿಯವರು ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದ್ದಾರೆ ಎಂದರು.
ಸೂಚಕರಾಗಿ ಸಿದ್ದು ಸಹಿ: ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಮೀರಾಕುಮಾರ್ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ್ದಾರೆ. ಭಾನುವಾರ ಕೆಪಿಸಿಸಿ ಕಚೇರಿಗೆ ಆಗಮಿಸಿದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಸಮ್ಮುಖದಲ್ಲಿ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದರು. ಈ ಮಧ್ಯೆ ಸಂಸದ ವೀರಪ್ಪ ಮೊಯ್ಲಿ, ಸಚಿವರಾದ ಡಿ.ಕೆ. ಶಿವಕುಮಾರ್, ತನ್ವೀರ್ ಸೇs… ಸಹ ಸಹಿ ಹಾಕಿದರು.
ಜುಲೈ 17ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಯುಪಿಎ ಅಭ್ಯರ್ಥಿ ಮೀರಾಕುಮಾರ್ ಅವರು ಜೂ.28ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಹಾಜರಿರಲು ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳವಾರ ದೆಹಲಿಗೆ ತೆರಳಲಿದ್ದಾರೆ.
ಮೀರಾಕುಮಾರ್ ನಮ್ಮ ಅಭ್ಯರ್ಥಿ. ಅವರನ್ನು ಬೆಂಬಲಿಸಿ ನಾಮಪತ್ರಕ್ಕೆ ಸೂಚಕರಾಗಿ ನಾನು ಸೇರಿದಂತೆ ಸಂಸದರು, ಸಚಿವರು ಮತ್ತು ಶಾಸಕರು ಸಹಿ ಮಾಡಿದ್ದಾರೆ.
– ಮುಖ್ಯಮಂತ್ರಿ ಸಿದ್ದರಾಮಯ್ಯ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ತೀರ್ಮಾನದಂತೆ ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಒಮ್ಮತದ ಅಭ್ಯರ್ಥಿ ಮೀರಾಕುಮಾರ್ ಅವರನ್ನು ಬೆಂಬಲಿಸಲು ಜೆಡಿಎಸ್ ನಿರ್ಧರಿಸಿದೆ.
– ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ.
ರಾಷ್ಟ್ರಪತಿ ಚುನಾವಣೆಗೆ ಮೀರಾಕುಮಾರ್ ಯುಪಿಎ ನೇತೃತ್ವದ ಪ್ರತಿಪಕ್ಷಗಳ ಅಭ್ಯರ್ಥಿ. ಇಲ್ಲಿ ಯುಪಿಎ ಅಥವಾ ಎನ್‌ಡಿಎ ಬೆಂಬಲದ ಪ್ರಶ್ನೆ ಅಲ್ಲ. ಸೈದ್ದಾಂತಿಕ ನಿಲುವು ಉಳ್ಳುವರು ಮತ ಹಾಕುತ್ತಾರೆ.
-ಡಾ. ಎಂ. ವೀರಪ್ಪ ಮೊಯಿಲಿ, ಸಂಸದ.
ರಾಷ್ಟ್ರಪತಿ ಚುನಾವಣೆ ಹಿನ್ನೆಲೆ. ರಾಜಕೀಯದಲ್ಲಿ ಕೊನೆ ಕ್ಷಣದವರೆಗೆ ಏನು ಬೇಕಾದರೂ ಆಗಬಹುದು. ಲಾಲುಪ್ರಸಾದ್ ಯಾದವ್ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ ಚರ್ಚೆ ಮಾಡುತ್ತಿದ್ದಾರೆ. ಅಲ್ಲದೇ ಮೀರಾಕುಮಾರ್ ಬಿಹಾರದ ಹೆಣ್ಣು ಮಗಳು, ಹಾಗಾಗಿ ನಿತೀಶ್‌ಕುಮಾರ್ ತಮ್ಮ ನಿಲುವು ಬದಲಾಯಿಸಬಹುದು. ಕೊನೆಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಎಲ್ಲ ಪ್ರತಿಪಕ್ಷಗಳು ಸೇರಿ ಮೀರಾಕುಮಾರ್ ಆವರನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ.
– ಡಿ.ಕೆ. ಶಿವಕುಮಾರ್, ಇಂಧನ ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.