ಮೂರು ವರ್ಷದ ಬಾಲಕಿ ಸೇರಿ ನಾಲ್ವರ ಸಾವು


Team Udayavani, Nov 13, 2018, 12:00 PM IST

mooru-var.jpg

ಬೆಂಗಳೂರು: ಮನೆ ಖರೀದಿಗೆ 25 ಲಕ್ಷ ರೂ. ಪಡೆದಿದ್ದ ವ್ಯಕ್ತಿ ಮೃತಪಟ್ಟ ಕಾರಣ, ಹಣ ವಾಪಸ್‌ ಬರುವುದಿಲ್ಲವೆಂದು  ಮೂರು ವರ್ಷದ ಬಾಲಕಿ ಸೇರಿ ನಾಲ್ವರ ದುರಂತ ಸಾವು ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ.

 25 ಲಕ್ಷ ರೂ. ಪಡೆದಿದ್ದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಹಣ ವಾಪಸ್‌ ಬರಲ್ಲ ಎಂದು ಆತಂಕಗೊಂಡ ಗೃಹಿಣಿ, ತನ್ನ ಮೂರು ವರ್ಷದ ಮಗಳು ಹಾಗೂ ತಂದೆ ತಾಯಿಗೆ ವಿಷಪೂರಿತ ಮಾತ್ರೆ ನುಂಗಿಸಿ ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಧಾರಾಣಿ (29) ಸೋನಿಕಾ (3)  ಜನಾರ್ದನ್‌ (55) ಅವರ ಪತ್ನಿ ಸುಮಿತ್ರಾ (45) ಮೃತರು.

ನಾಲ್ವರು ಮೃತಪಟ್ಟಿರುವ ಎರಡು ಪುಟಗಳ ಡೆತ್‌ ನೋಟ್‌ ದೊರೆತಿದ್ದು” ಮನೆ ಖರೀದಿಸುವ ಸಲುವಾಗಿ ನೀಡಿದ್ದ 25 ಲಕ್ಷ ರೂ. ಪಡೆದಿದ್ದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದು, ಹಣ ಹಾಗೂ ಮನೆ ಸಿಗುವುದಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆಯಲಾಗಿದೆ. ಆದರೆ, ಹಣ ಪಡೆದುಕೊಂಡ ವ್ಯಕ್ತಿ ಯಾರು? ಆತನ ವಿಳಾಸ ಏನನ್ನೂ ನಮೂದಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವಿದ್ಯಾರಣ್ಯಪುರ ಠಾಣೆ ಪೊಲೀಸರು, ಹಲವು ಆಯಾಮಗಳಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ. ಮೃತ ಸುಧಾರಾಣಿ ಪತಿ ಅರ್ಜುನ್‌ನನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಮೃತ ದೇಹಗಳನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ಬಂದ ಬಳಿಕ ನಾಲ್ವರ ಸಾವು ಹೇಗೆ ಸಂಭವಿಸಿದೆ ಎಂಬುದು ಖಚಿತವಾಗಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ತಡವಾಗಿ ನಾಲ್ವರ ಸಾವು ಬೆಳಕಿಗೆ!: ಮೃತ ಸುಧಾರಾಣಿಗೆ 4 ವರ್ಷಗಳ ಹಿಂದೆ ಮತ್ತಿಕೆರೆಯ ಅರ್ಜುನ್‌ ಎಂಬಾತನ ಜತೆ ವಿವಾಹವಾಗಿದ್ದು, ದಂಪತಿಗೆ ಮೂರು ವರ್ಷದ  ಸೋನಿಕಾ ಮಗಳಿದ್ದಾಳೆ. ಅರ್ಜುನ್‌ ಮತ್ತಿಕೆರೆಯಲ್ಲಿ ಮೆಡಿಕಲ್‌ ಸ್ಟೋರ್‌ ನಡೆಸುತ್ತಿದ್ದ ಅದನ್ನು ಸುಧಾರಾಣಿ ನಿರ್ವಹಣೆ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಮಗಳ ಜತೆ  ಪೋಷಕರ ಮನೆಗೆ ಬಂದಿದ್ದ ಸುಧಾರಾಣಿ ಬಂದಿದ್ದರು.

ಕಳೆದ ಎರಡು ದಿನಗಳಿಂದ ಮನೆಯ ಬಾಗಿಲು ತೆಗೆದಿರಲಿಲ್ಲ. ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ಮನೆಯಿಂದ ಕೆಟ್ಟ ವಾಸನೆ ಬರಲಾರಂಭಿಸಿದೆ. ಇದನ್ನು ಗಮನಿಸಿದ ಮನೆಯ ಮಾಲೀಕರು ಮನೆಯ ಬಾಗಲು ಬಡಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಅನುಮಾನಗೊಂಡು ಸುಧಾರಾಣಿ ಪತಿಗೆ ಪೋನ್‌ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಅವರು ಬಂದು ನೋಡಿದಾಗ ಪತ್ನಿ, ಮಗಳು, ಅತ್ತೆ, ಮಾವ ಮೃತಪಟ್ಟಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಡೆತ್‌ನೋಟ್‌’ನಲ್ಲಿದೆಯೇ ಸಾವಿನ ರಹಸ್ಯ?: ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಮನೆಯನ್ನು ಪರಿಶೀಲಿಸಿದ್ದಾರೆ. ಜನಾರ್ದನ ಹಾಗೂ ಪತ್ನಿ ತಮ್ಮ ಕೊಠಡಿಯಲ್ಲಿ ತಮ್ಮ ಬೆಡ್‌ಮೇಲೆಯೇ ಅಸುನೀಗಿದ್ದರು. ಇತ್ತ ಸುಧಾರಾಣಿ ಹಾಗೂ ಸೋನಿಕಾ ಕೂಡ ಜೊತೆಯಲ್ಲಿಯೇ ಕೊನೆಯುಸಿರೆಳೆದಿದ್ದು, ಅಲ್ಲಿ ಡೆತ್‌ ನೋಟ್‌ ಲಭ್ಯವಾಗಿದೆ.

ಡೆತ್‌ನೋಟ್‌ನಲ್ಲಿರುವ ಮಾಹಿತಿಯನ್ನು ಗಮನಿಸಿದರೆ ಸುಧಾರಾಣಿ ಮೊದಲು ತಂದೆ, ತಾಯಿ ಮಗಳನ್ನು ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ಆದರೆ. ಡೆತ್‌ ನೋಟ್‌ ನಿಜವಾಗಿಯೂ ಬರೆದಿರುವುದು ಯಾರು ಎಂಬುದು ಖಚಿತವಾಗಬೇಕಿದೆ. ಹೀಗಾಗಿ, ಆಕೆಯ ಬರವಣಿಗೆ ಶೈಲಿಯನ್ನು ಪರಿಶೀಲಿಸಬೇಕಿದೆ. ಮೃತರ ಮರಣೋತ್ತರ ಪರೀಕ್ಷಾ ವರದಿಯೂ ಕೈ ಸೇರಬೇಕಿದೆ. ಜತೆಗೆ, 25 ಲಕ್ಷ ರೂ. ಹಣ ಪಡೆದಿದ್ದವರು ಯಾರು ಎಂಬುದು ತನಿಖೆಯಲ್ಲಿ ಗೊತ್ತಾಗಬೇಕಿದೆ.

ಜತೆಗೆ, ಸುಧಾರಾಣಿ ಹಾಗೂ ಆಕೆಯ ಪೋಷಕರು ಬಳಸುತ್ತಿದ್ದ ಮೊಬೈಲ್‌ ಫೋನ್‌ಗಳ ದೂರವಾಣಿ ಕರೆಗಳು, ಮೆಸೇಜ್‌ಗಳನ್ನು ಪರಿಶೀಲಿಸಲಾಗುತ್ತಿದ್ದು, ಕೊಲೆಯೇ? ಆತ್ಮಹತ್ಯೆಯೇ ಎಂಬುದು ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ನಾಲ್ವರು ಸಾವಿನ ಪ್ರಕರಣದ ತನಿಖೆಯನ್ನು ಹಲವು ದೃಷ್ಟಿಕೋನಗಳಲ್ಲಿ ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ದೊರೆತಿರುವ ಡೆತ್‌ನೋಟ್‌ನಲ್ಲಿ ಹಲವು ಮಾಹಿತಿಯಿದ್ದು, ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಮೃತರ ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಸಾವು ಸಂಭವಿಸಿರುವುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ.
-ಕಲಾ ಕೃಷ್ಣಮೂರ್ತಿ, ಡಿಸಿಪಿ, ಈಶಾನ್ಯ ವಿಭಾಗ

ಟಾಪ್ ನ್ಯೂಸ್

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.