ಹಳೇ ನೋಟುಗಳ ಬದಲಾವಣೆಗೆ ಯತ್ನಿಸಿದ ನಾಲ್ವರ ಬಂಧನ
Team Udayavani, Aug 13, 2017, 11:20 AM IST
ಬೆಂಗಳೂರು: ನಿಷೇಧಿತ ನೋಟುಗಳ ಬದಲಾವಣೆಗೆ ಯತ್ನಿಸಿದ ನಾಲ್ವರನ್ನು ಬಂಧಿಸಿರುವ ವಿವೇಕನಗರ ಪೊಲೀಸರು ಅಮಾನ್ಯಗೊಂಡ 500 ಹಾಗೂ 1000 ಮುಖಬೆಲೆಯ ಮೂರು ಕೋಟಿ ರೂ. ಮೌಲ್ಯದ ನೋಟು ವಶಪಡಿಸಿಕೊಂಡಿದ್ದಾರೆ. ಶಾಂತಿನಗರದ ನಿವಾಸಿ ಅಯ್ಯುಬ್ (50), ಅಜೀಬ್ (52), ಅಜೀಮ್ ಹಾಗೂ ಫ್ರೆಜರ್ಟೌನ್ನ ಅತಿಕ್ ಬಂಧಿತರು. ಈ ವೇಳೆ ಕೋಲ್ಕತ್ತಾಾ¤ ಮೂಲದ ಸೌರಭ್ ಜೈನ್ ಮತ್ತು ಮಹೇಶ್ ಪರಾರಿಯಾಗಿದ್ದಾರೆ.
ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ಆರೋಪಿಗಳೆಲ್ಲರೂ ಆ.11ರಂದು ರಾತ್ರಿ 11 ಗಂಟೆ ಸುಮಾರಿಗೆ ವಿವೇಕನಗರ ಠಾಣಾ ವ್ಯಾಪ್ತಿಯ ಶ್ರೀನಿವಾಗಿಲು ಸಿಗ್ನಲ್ ಬಳಿ ಪೊಲೀಸರು ತಪಾಸಣೆ ನಡೆಸುತ್ತಿರುವಾಗ ಮಾರುತಿ ಕಾರಿನಲ್ಲಿ ವೇಗವಾಗಿ ಬಂದಿದ್ದಾರೆ. ಇದನ್ನು ನೋಡಿದ ಪೊಲೀಸರು ನಿಲ್ಲಿಸುವಂತೆ ಸೂಚಿಸಿದ್ದಾರೆ.
ಆದರೆ, ಪೊಲೀಸರ ಮೇಲೆಯೇ ಕಾರು ಚಲಾಯಿಸಲು ಯತ್ನಿಸಿ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಹಿಂಬಾಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ ಸೌರಭ್ ಜೈನ್ ಮತ್ತು ಮಹೇಶ್ ಎಂಬ ಇಬ್ಬರು ಪರಾರಿಯಾಗಿದ್ದಾರೆ.
ಕಾರು ತಪಾಸಣೆ ನಡೆಸಿದಾಗ ಎರಡು ಬ್ಯಾಗ್ಗಳಲ್ಲಿ ನಿಷೇಧಿತ ನೋಟುಗಳನ್ನು ತುಂಬಿರುವುದು ಪತ್ತೆಯಾಗಿದೆ. ಶೇ.25ರಷ್ಟು ಕಮಿಷನ್ ಆಸೆಗಾಗಿ ನೋಟುಗಳ ಬದಲಾವಣೆಗೆ ಯತ್ನಿಸಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ 420(ವಂಚನೆ) ಹಾಗೂ ದಿ ಸ್ಪೆಸಿಫೈಡ್ ಬ್ಯಾಂಕ್ ನೋಟ್ಸ್ ಕಾಯ್ದೆ7ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.