Arrested: 158 ಕೋಟಿ ರೂ. ವಂಚಿಸಿದ್ದ 9 ಮಂದಿ ಸೆರೆ
Team Udayavani, Jan 31, 2024, 11:35 AM IST
ಬೆಂಗಳೂರು: ವಾಟ್ಸ್‌ಆ್ಯಪ್, ಟೆಲಿಗ್ರಾಂ ಮೂಲಕ ವರ್ಕ್ ಫ್ರಂ ಹೋಮ್ ಕೆಲಸ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂ. ಹೂಡಿಕೆ ಮಾಡಿಕೊಂಡು ವಂಚಿಸುತ್ತಿದ್ದ ಪ್ರಕರಣ ಬೇಧಿಸಿರುವ ನಗರ ಸೈಬರ್ ಕ್ರೈಂ ಪೊಲೀಸರು ಮಹಿಳೆ ಸೇರಿ 9 ಮಂದಿಯನ್ನು ಬಂಧಿಸಿದ್ದಾರೆ. ಇದೇ ವೇಳೆ ಆರೋಪಿಗಳ ವಿಚಾರಣೆಯಲ್ಲಿ ಬೆಂಗಳೂರು ದೇಶದ ವಿವಿಧೆಡೆ ದಾಖಲಾಗಿದ್ದ 2,143 ಪ್ರಕರಣಗಳಲ್ಲಿ 158 ಕೋಟಿ ರೂ. ವಂಚಿಸಿದ್ದಾರೆ ಎಂಬುದು ಪತ್ತೆಯಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆರೋಪಿಗಳು ಹಮೀದ್ ಸುಹೇಲ್, ಇನಾಯತ್ ಖಾನ್, ನಯಾಜ್ ಅಹ್ಮದ್, ಆದಿಲ್ ಆಗಾ, ಸೈಯದ್ ಅಬ್ಟಾಸ್ ಆಲಿಖಾನ್, ಮಿಥುತ್ ಅಮಿತ್ ಸುಹಾಲಿ, ನೈನಾ ತಾರಾಚಂದ್, ಮಿಹಿರ್ ಶಶಿ ಕಾಂತ್ ಶಾ ಮತ್ತು ಸತೀಶ್ ಕೊಲಂಗಿ ಬಂಧಿ ತರು. ಈ ಪೈಕಿ ಬೆಂಗಳೂರಿನ ಇಬ್ಬರು,
ಹೈದ್ರಾಬಾದ್‌ನ ಮೂವರು, ಮುಂಬೈನ ನಾಲ್ವರು ಸೇರಿದ್ದಾರೆ. ಇತರೆ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿದರು.
ಆರೋಪಿಗಳು ನಕಲಿ ದಾಖಲೆಗಳನ್ನು ಸಲ್ಲಿಸಿ ಬ್ಯಾಂಕ್ ಖಾತೆಗಳನ್ನು ತೆರೆದು, ಸಾರಸಗಟಾಗಿ ವಾಟ್ಸ್‌ಆ್ಯಪ್, ಟೆಲಿಗ್ರಾಂ ಮೂಲಕ ವರ್ಕ್ ಫ್ರಂ ಹೋಮ್ ಕೆಲಸ ಕೊಡುವುದಾಗಿ ಸಂದೇಶ ಕಳು ಹಿ ಸುತ್ತಿದ್ದರು. ಅದನ್ನು ನಂಬಿ ಪ್ರತಿಕ್ರಿಯೆ ನೀಡುತ್ತಿದ್ದ ಸಾರ್ವ ಜನಿಕರಿಗೆ ವಿಡಿಯೋ ಮತ್ತು ಫೋಟೋ ಗಳನ್ನು ಲೈಕ್ ಮಾಡಿ ಶೇರ್ ಮಾಡಿದರೇ ಒಂದಕ್ಕೆ 150 ರೂ. ಸಿಗಲಿದೆ. ಮನೆಯಲ್ಲಿಯೇ ಕುಳಿತು ದಿನಕ್ಕೆ 500 ರೂ.ನಿಂದ 10 ಸಾವಿರ ರೂ. ವರೆಗೂ ಸಂಪಾದನೆ ಮಾಡಬಹುದು ಎಂದು ಆಮಿಷ ವೊಡ್ಡುತ್ತಿದ್ದರು.
ಅದಕ್ಕೆ ಒಪ್ಪಿಗೆ ನೀಡುತ್ತಿದ್ದ ಅಮಾಯಕರು, ವಂಚಕರ ಆ್ಯಪ್‌ಡೌನ್ ಲೋಡ್ ಮಾಡಿಕೊಳ್ಳು ತ್ತಿದ್ದರು. ನೋಂದಣಿ ಶುಲ್ಕವೆಂದು ಇಂತಿಷ್ಟು ಪಾವತಿ ಮಾಡಿದ ಜನರಿಗೆ ಆರಂಭದಲ್ಲಿ ಹಣವನ್ನು ಅವರ ವ್ಯಾಲೆಟ್‌ಗೆ ವರ್ಗಾವಣೆ ಮಾಡುತ್ತಿದ್ದರು. ಆದರೆ, ಅದನ್ನು ಡ್ರಾ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಡ್ರಾ ಮಾಡಲು ಪ್ರಯತ್ನಿಸುವವರಿಗೆ ಕಂಪನಿಯಲ್ಲಿ ಹೂಡಿಕೆ ಮಾಡಿದರೇ ಹೆಚ್ಚಿನ ಕಮಿಷನ್ ಸಿಗಲಿದೆ ಎಂದು ಆಸೆ ಹುಟ್ಟಿಸುತ್ತಿದ್ದರು. ಅದನ್ನು ನಂಬಿ ಜನರು ಲಕ್ಷಾಂತರ ರೂ. ಹೂಡಿಕೆ ಮಾಡುತ್ತಿದ್ದರು.
ಇದೇ ರೀತಿಯಾಗಿ ಆ.18ರಂದು ಬಿಇಎಲ್ ಲೇಔಟ್ ನಿವಾಸಿ ಮನೆಯಿಂದಲೇ ಕೆಲಸದ ಆಮಿಷಕ್ಕೆ ಒಳಗಾಗಿ 18.75 ಲಕ್ಷ ರೂ. ಹೂಡಿಕೆ ಮಾಡಿ ಸೈಬರ್ ವಂಚನೆಗೆ ಒಳಗಾಗಿದ್ದರು. ಈ ಬಗ್ಗೆ ದಾಖಲಾದ ದೂರಿನ ಮೇರೆಗೆ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪಿಐ ಹಜರೇಶ್ ಎ.ಕಿಲೆದಾರ್ ನೇತೃತ್ವದ ತಂಡ ಪ್ರಕರಣ ದಾಖಲಿಸಿಕೊಂಡು ತಾಂತ್ರಿಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.
2,143 ಕೇಸ್‌ಗಳು ಪತ್ತೆ: ಆರೋಪಿಗಳ ಬ್ಯಾಂಕ್ ಖಾತೆ ಗಳ ಆಧಾರವಾಗಿ ಇಟ್ಟುಕೊಂಡು ತನಿಖೆ ನಡೆಸಿದಾಗ ಕೇಂದ್ರ ಗೃಹ ಸಚಿವಾಲಯದ ಎನ್‌ಸಿಆರ್‌ಬಿ ಪೋರ್ಟಲ್‌ನಲ್ಲಿ ದೇಶದ 28 ರಾಜ್ಯ ಗಳಲ್ಲಿ ದಾಖಲಾಗಿದ್ದ 2,143 ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ 265 ಪ್ರಕರಣಗಳು ಅದರಲ್ಲಿಯೂ ಬೆಂಗಳೂರು ನಗರದ 14 ಠಾಣೆಗಳಲ್ಲಿ ದಾಖಲಾಗಿದ್ದ 135 ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದರು.
30 ಬ್ಯಾಂಕ್ ಖಾತೆ ಜಪ್ತಿ, 62.83 ಲಕ್ಷ ರೂ. ವಶಕ್ಕೆ :
ಆರೋಪಿಗಳು ಬಳಸಿದ ಬ್ಯಾಂಕ್ ಖಾತೆಗಳ ವಿವರ ಸಂಗ್ರಹಿಸಿ ತನಿಖೆ ನಡೆಸಿದಾಗ ದೇಶಾ ದ್ಯಂತ ದಾಖಲಾಗಿದ್ದ 2,143 ಪ್ರಕರಣಗಳಲ್ಲಿ 158 ಕೋಟಿ ರೂ. ವಂಚಿಸಿರುವುದು ಪತ್ತೆ ಯಾಗಿದೆ. ಈ ಪೈಕಿ 30 ಬ್ಯಾಂಕ್ ಖಾತೆಗಳು ಜಪ್ತಿ ಮಾಡಿದ್ದು, 62.83 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಜತೆಗೆ 11 ಮೊಬೈಲ್, 1 ಲ್ಯಾಪ್‌ಟಾಪ್, 15 ಸಿಮ್ ಕಾರ್ಡ್, 3 ಬ್ಯಾಂಕ್ ಚೆಕ್ ಬುಕ್‌ಗಳನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದರು.
ಬಂಧಿತರ ಆಸ್ತಿ ಜಪ್ತಿಗೆ ಇತರೆ ಇತರೆ ರಾಜ್ಯಗಳ ಜತೆ ಚರ್ಚೆ:
ಸಾರ್ವಜನಿಕರಿಂದ ಹಣ ಹೂಡಿಕೆ ಮಾಡಿಸಿಕೊಂಡ ಬಳಿಕ ತಮ್ಮ ನೆಟ್‌ವರ್ಕ್ ಬಳಸಿ ನಗದು ಡ್ರಾ ಮಾಡುವುದು ಅಥವಾ ಬೇರೊಂದು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದ ಆರೋಪಿ ಗಳು, ಅಮಾಯಕರು ಹಣ ಜಮೆ ಮಾಡಿದ ಕೆಲವೇ ತಾಸಿನಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ನಗದು ಡ್ರಾ ಮಾಡುತ್ತಾರೆ. ಅದರಿಂದ ಆರೋಪಿಗಳಿಂದ ಹಣ ಜಪ್ತಿ ಮಾಡುವುದು ದೊಡ್ಡ ಸವಾಲಾಗಿದೆ. ಹೀಗಾಗಿ ಆರೋಪಿಗಳ ಆಸ್ತಿ-ಪಾಸ್ತಿಗಳನ್ನು ಪತ್ತೆ ಹಚ್ಚಿ ಜಪ್ತಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ಇತರೆ ರಾಜ್ಯಗಳ ತನಿಖಾ ಸಂಸ್ಥೆಗಳ ಜತೆ ಚರ್ಚೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.