ಫೇಸ್ಬುಕ್ನಲ್ಲಿ ಪರಿಚಿತಳಾದ ಮಹಿಳೆಗೆ 18 ಲಕ್ಷ ರೂ.ವಂಚನೆ
Team Udayavani, Nov 8, 2022, 1:54 PM IST
ಬೆಂಗಳೂರು: ಫೇಸ್ಬುಕ್ನಲ್ಲಿ ಮಹಿಳೆಯನ್ನು ಪರಿಚಯಿಸಿಕೊಂಡು ಆಕೆಯ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಸೈಬರ್ ಕಳ್ಳರು, ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಮತ್ತೆ ವಂಚಿಸಿ ಒಟ್ಟು 18.22 ಲಕ್ಷ ರೂ. ಲಪಟಾಯಿಸಿದ್ದಾರೆ.
ನಾಗರಬಾವಿ ನಿವಾಸಿ ರಾಜಲಕ್ಷ್ಮೀ (38) ವಂಚನೆಗೊಳಗಾದವರು. ರಾಜಲಕ್ಷ್ಮೀಗೆ ಫೇಸ್ಬುಕ್ನಲ್ಲಿ ವಿದೇಶಿ ಪ್ರಜೆಯ ಸೋಗಿನಲ್ಲಿ ಡಾ.ಜುಲಿಯೆನ್ ಫೆಲಿಕ್ಸ್ ಎಂಬಾತ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ. ಇದಕ್ಕೆ ಸ್ಪಂದಿಸಿದ ಮಹಿಳೆಯು ಆತನ ಜತೆ ಚಾಟ್ ಮಾಡುತ್ತಿದ್ದರು. ನಂತರ ಆತ ಮಹಿಳೆಯ ಮೊಬೈಲ್ಗೆ ವಿಡಿಯೋ ಕರೆ ಮಾಡಿ ಮಾತನಾಡಲಾರಂಭಿಸಿದ್ದ. ವಿಡಿಯೋ ಕರೆ ರೆಕಾರ್ಡ್ ಮಾಡಿ ಹಾಗೂ ಫೇಸ್ಬುಕ್ನಲ್ಲಿರುವ ರಾಜಲಕ್ಷ್ಮೀ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಹಣ ಕೊಡುವಂತೆ ಬ್ಲ್ಯಾಕ್ಮೇಲ್ ಮಾಡಿದ್ದ. ಆತಂಕಗೊಂಡ ರಾಜಲಕ್ಷ್ಮೀ 74 ಸಾವಿರ ರೂ. ಅನ್ನು ಆತನ ಖಾತೆಗೆ ಜಮೆ ಮಾಡಿದ್ದರು. ಇಷ್ಟಕ್ಕೆ ಸುಮ್ಮನಾಗದ ಆತ, ಮಹಿಳೆ ಬಳಿ ಕ್ಷಮೆಯಾಚಿಸಿ 74 ಸಾವಿರ ರೂ.ಅನ್ನು ನಿಮ್ಮ ವಿಳಾಸಕ್ಕೆ ಪಾರ್ಸೆಲ್ ಕಳುಹಿಸಿರುವುದಾಗಿ ನಂಬಿಸಿದ್ದ.
ಇದಾದ ಕೆಲ ದಿನಗಳ ಬಳಿಕ ದೆಹಲಿ ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ರಾಜಲಕ್ಷ್ಮೀಗೆ ಕರೆ ಮಾಡಿದ ಅಪರಿಚಿತರು ನಿಮಗೆ ವಿದೇಶದಿಂದ ಹಣ ಬಂದಿದೆ ಎಂದು ಹೇಳಿದ್ದರು. ಇದನ್ನು ಪಡೆಯಲು ಕಸ್ಟಮ್ಸ್, ಜಿಎಸ್ಟಿ ಶುಲ್ಕ ಪಾವತಿಸುವಂತೆ ಹೇಳಿ ಹಂತ-ಹಂತವಾಗಿ 18.22 ಲಕ್ಷ ರೂ. ಅನ್ನು ತಮ್ಮ ಖಾತೆಗೆ ಹಾಕಿಸಿಕೊಂಡಿದ್ದರು. ನಂತರ ಸಂಪರ್ಕಕ್ಕೆ ಸಿಗದೇ ವಂಚಿಸಿದ್ದಾರೆ. ಆಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ರಾಜಲಕ್ಷ್ಮೀ ಗಮನಕ್ಕೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.