Fraud: ಮನೆ ಬಾಡಿಗೆ ಪಡೆಯುವ ನೆಪದಲ್ಲಿ ಯುವತಿಗೆ 10 ಲಕ್ಷ ರೂ. ವಂಚನೆ
Team Udayavani, Sep 27, 2023, 12:31 PM IST
ಬೆಂಗಳೂರು: ಸೇನಾ ಸಿಬ್ಬಂದಿ ಸೋಗಿನಲ್ಲಿ ಮನೆ ಬಾಡಿಗೆಗೆ ಪಡೆಯುವುದಾಗಿ ನಂಬಿಸಿದ ಸೈಬರ್ ಕಳ್ಳರು ಮಹಿಳೆಯೊಬ್ಬರಿಗೆ ಬರೋಬ್ಬರಿ 9.95 ಲಕ್ಷ ರೂ. ವಂಚಿಸಿದ್ದಾರೆ.
ವಿಜಯನಗರದ ನಿವಾಸಿ ನವ್ಯಾ (28) ವಂಚನೆಗೊಳಗಾದವರು.
ಇತ್ತೀಚೆಗೆ ಇವರನ್ನು ಸಂಪರ್ಕಿಸಿದ ಪರಿಚಿತನೊಬ್ಬ “ತಾನು ಸೇನೆಯಲ್ಲಿ ಕೆಲಸ ಮಾಡುತ್ತಿದ್ದು, ನಿಮ್ಮ ಮನೆಗೆ ಬಾಡಿಗೆಗೆ ಬರುವುದಾಗಿ’ ಹೇಳಿದ್ದ. ಆದರೆ, ಸೇನೆಯ ನಿಯಮದ ಪ್ರಕಾರ ನೀವು ಮುಂಗಡವಾಗಿ ನಮ್ಮ ಖಾತೆಗೆ ಹಣ ಜಮೆ ಮಾಡಬೇಕಾಗುತ್ತದೆ ಎಂದು ನಂಬಿಸಿದ್ದ. ಆತನ ಮಾತು ಕೇಳಿದ ನವ್ಯಾ ಆರಂಭದಲ್ಲಿ ಸ್ವಲ್ಪ ಹಣವನ್ನು ಆತನ ಖಾತೆಗೆ ಜಮೆ ಮಾಡಿದ್ದರು. ಇದಾದ ಬಳಿಕ ನೀವು ಕಳುಹಿಸಿದ ಹಣ ಪುನಃ ನಿಮ್ಮ ಖಾತೆಗೆ ಜಮೆ ಮಾಡಬೇಕಾದರೆ ಮತ್ತಷ್ಟು ಹಣ ಕಳುಹಿಸಬೇಕಾಗುತ್ತದೆ ಎಂದು ಹೇಳಿದ್ದ. ಅತನ ಮಾತು ನಂಬಿದ ನವ್ಯಾ ಹಂತ-ಹಂತವಾಗಿ 9.95 ಲಕ್ಷ ರೂ. ಜಮೆ ಮಾಡಿದ್ದರು. ಇಷ್ಟಕ್ಕೆ ಸುಮ್ಮನಾಗದ ಅಪರಿಚಿತ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಾಗ ಅನುಮಾನಗೊಂಡ ನವ್ಯಾ ಈ ಬಗ್ಗೆ ಪರಿಶೀಲಿಸಿದಾಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.