ಕೆಎಎಸ್‌ ಕನಸು ಕಂಡವಳಿಗೆ 59 ಲಕ್ಷ ರೂ. ವಂಚನೆ

Team Udayavani, Aug 8, 2022, 1:41 PM IST

tdy-3

ಬೆಂಗಳೂರು: ಕೆಎಎಸ್‌ ಪರೀಕ್ಷೆಯಲ್ಲಿ ಅನುಕೂಲಕರ ಅಂಕಗಳನ್ನು ನೀಡುವಂತೆ ಪರಿಚಿತ ಐಎಎಸ್‌ ಅಧಿಕಾರಿಗಳಿಗೆ ಶಿಫಾರಸು ಮಾಡಿಸಿ ತಹಶೀಲ್ದಾರ್‌ ಹುದ್ದೆ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಮಹಿಳೆಗೆ ಬರೊಬ್ಬರಿ 59.50 ಲಕ್ಷ ರೂ. ವಂಚಿಸಿದ್ದಾನೆ.

ಉತ್ತರ ಕರ್ನಾಟಕ ಮೂಲದ ಸಹಕಾರ ನಗರದ ನಿವಾಸಿ ಸವಿತಾ ಶಾಂತಪ್ಪ ಯಳಸಂಗೀಕರ್‌ ಕೊಟ್ಟ ದೂರಿನ ಆದಾರದ ಮೇಲೆ ವಿಜಯನಗರ ಠಾಣೆ ಪೊಲೀಸರು ಸಿದ್ದರಾಜ್‌ ಸುಭಾಷ್‌ ಚಂದ್ರ ಕಟ್ಟಿಮನಿ ವಿರುದ್ಧ ಎಫ್ಐಆರ್‌ ದಾಖಲಿಸಿದ್ದಾರೆ. ಸ್ಫರ್ಧಾತ್ಮಕ ಪರೀಕ್ಷೆ ತರಬೇತಿಗಾಗಿ ಸವಿತಾ ವಿಜಯನಗರಕ್ಕೆ ಬಂದು ಪಿಜಿಯೊಂದರಲ್ಲಿ ವಾಸಿಸುತ್ತಿದ್ದರು. ಸ್ನೇಹಿತೆಯರ ಮೂಲಕ ಸವಿತಾಗೆ ಆರೋಪಿ ಸಿದ್ಧರಾಜು ಪರಿಚಯವಾಗಿತ್ತು. ನನಗೆ ಸಾಕಷ್ಟು ಮಂದಿ ಐಎಎಸ್‌ ಅಧಿಕಾರಿಗಳ ಪರಿಚಯವಿದ್ದು, ಅವರ ಮೂಲಕ ನಿಮಗೆ ಕೆಎಎಸ್‌ ಪರೀಕ್ಷೆಯಲ್ಲಿ ಅನುಕೂಲಕರ ಅಂಕಗಳನ್ನು ನೀಡುವಂತೆ ಶಿಫಾರಸು ಮಾಡಿಸಿ ತಹಶೀಲ್ದಾರ್‌ ಹುದ್ದೆ ಕೊಡಿಸುವುದಾಗಿ ನಂಬಿಸಿದ್ದ.

ಇದಕ್ಕೆ ಒಂದಿಷ್ಟು ಹಣ ಖರ್ಚಾಗುತ್ತದೆ ಎಂದು ಹೇಳಿದ್ದ. ಆತನ ಮಾತಿನ ಮೋಡಿಗೆ ಮರುಳಾದ ಸವಿತಾ ಹಣ ಕೊಡಲು ಒಪ್ಪಿದ್ದರು. ಆರೋಪಿ ಸಿದ್ದರಾಜು ಸೂಚನೆಯಂತೆ 2020 ಆಗಸ್ಟ್‌ನಿಂದ ಹಂತ-ಹಂತವಾಗಿ ಆತನ ತಂದೆ ಹಾಗೂ ಸ್ನೇಹಿತನ ಬ್ಯಾಂಕ್‌ ಖಾತೆಗೆ 15.50 ಲಕ್ಷ ರೂ. ವರ್ಗಾವಣೆ ಮಾಡಿದ್ದರು.

ಇಷ್ಟಕ್ಕೆ ಸುಮ್ಮನಾಗದ ಸಿದ್ದರಾಜು ಐಎಎಸ್‌ ಅಧಿಕಾರಿಗಳು ಇನ್ನಷ್ಟು ಹಣಕ್ಕೆ ಬೇಡಿಕೆಯಿಟ್ಟಿ ದ್ದಾರೆ. ಇನ್ನು 24 ಲಕ್ಷ ರೂ. ಕೊಟ್ಟರೆ ಕೆಲಸ ಗ್ಯಾರೆಂಟಿ ಎಂದು ಸವಿತಾಳನ್ನು ನಂಬಿಸಿದ್ದ. ಹೇಗಾದರೂ ಮಾಡಿ ಕೆಎಎಸ್‌ ಅಧಿಕಾರಿಯಾ ಗಬೇಕೆಂದು ಕನಸು ಕಂಡಿದ್ದ ಸವಿತಾ ಮತ್ತೆ ಆತನಿಗೆ 24 ಲಕ್ಷ ರೂ. ಕೊಟ್ಟಿದ್ದರು. ಬಳಿಕ ಹಲವು ಸಬೂಬುಗಳನ್ನು ಹೇಳಿದ್ದ ಆರೋಪಿ ಸವಿತಾ ಅವರಿಂದ ಪುನಃ 20 ಲಕ್ಷ ರೂ. ಲಪಟಾಯಿಸಿದ್ದ. ಒಟ್ಟು 59.50 ಲಕ್ಷ ರೂ. ಪಡೆದಿದ್ದ ಸಿದ್ಧರಾಜು ವರ್ಷ ಉರುಳಿದರೂ ಕೆಲಸವನ್ನೂ ಕೊಡಿಸದೆ ಹಣವನ್ನೂ ನೀಡದೆ ವಂಚಿಸಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

de

Mangaluru: ಅಪರಿಚಿತ ವ್ಯಕ್ತಿ ಸಾವು

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.