ಕೆಪಿಎಸ್‌ಸಿ ಕೆಲಸ ಕೊಡಿಸುವುದಾಗಿ ನಂಬಿಸಿ 28 ಸಾವಿರ ರೂ. ವಂಚನೆ
Team Udayavani, Dec 10, 2019, 10:30 AM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಕೆಲಸ ಕೊಡಿಸುವುದಾಗಿ ನಂಬಿಸಿ ಪದವೀಧರ ಯುವಕನನ್ನು ವಂಚಿಸಿರುವ ಆರೋಪ ಸಂಬಂಧ ಅನಿಲ್ ಕುಮಾರ್ ಎಂಬಾತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಜಯನಗರದ ಗಿರೀಶ್ ಎಂಬವರು ನೀಡಿದ ದೂರಿನ ಅನ್ವಯ ಅನಿಲ್‌ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಇನ್ನೂ ಹಲವರಿಗೆ ವಂಚಿಸಿರುವ ಸಾಧ್ಯತೆಯಿದೆ. ಈ ಕುರಿತು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನ.29ರಂದು ಬಿಸಿಎ ಪದವೀಧರ ಗಿರೀಶ್ ಅವರ ತಾಯಿಗೆ ದೂರವಾಣಿ ಕರೆ ಮಾಡಿದ್ದ ಅನಿಲ್ ಕುಮಾರ್ ಎಂಬಾತ, ತಾನು ಕೆಪಿಎಸ್ ಸಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾನೆ. ಬಳಿಕ ಆಯೋಗದಲ್ಲಿ ಟೈಪಿಸ್ಟ್ ಹುದ್ದೆಗಳು ಖಾಲಿಯಿದ್ದು, ಹಣ ನೀಡಿದರೆ ನಿಮ್ಮ ಮಗನಿಗೆ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ, 28 ಸಾವಿರ ರೂ. ಕೇಳಿದ್ದಾನೆ. ಆತನ ಮಾತು ನಂಬಿದ ಫೋನ್‌ಪೇ ಮೂಲಕ ಎಂಟು ಸಾವಿರ ರೂ.ಗಳನ್ನು ಅನಿಲ್‌ಗೆ ಕಳುಹಿಸಿದ್ದಾರೆ.
ಇದಾದ ಬಳಿಕ ಡಿ.2ರಂದು ಬಹುಮಹಡಿ ಕಟ್ಟಡ (ಎಂ.ಎಸ್. ಬಿಲ್ಡಿಂಗ್) ಬಳಿ ಗಿರೀಶ್ ಅವರಿಂದ 20 ಸಾವಿರ ರೂ. ಪಡೆದು ಕೆಲ ಹೊತ್ತಿನಲ್ಲಿ ಬರುತ್ತೇನೆ ಎಂದು ಹೇಳಿ ಹೋದವ ಮತ್ತೆ ಬಂದಿಲ್ಲ. ಆತನ ಪೋನ್ ಕೂಡ ಸ್ವಿಚ್ ಆಫ್ ಆಗಿದೆ. ಇದರಿಂದ ಅನುಮಾನಗೊಂಡ ಅವರು, ಲೋಕಸೇವಾ ಆಯೋಗಕ್ಕೆ ತೆರಳಿ ಅನಿಲ್ ಎಂಬಾತನ ಬಗ್ಗೆ ವಿಚಾರಿಸಿದಾಗ, ಅಂತಹ ಹೆಸರಿನ ವ್ಯಕ್ತಿ ಇಲ್ಲಿ ಕೆಲಸ ಮಾಡುತ್ತಿಲ್ಲ. ಹಣ ಪಡೆದು ಕೆಲಸ ನೀಡುವುದೂ ಇಲ್ಲ ಎಂದು ಹೇಳಿದ್ದಾರೆ. ಕಡೆಗೆ ಮೋಸ ಹೋಗಿರುವುದು ಗೊತ್ತಾಗಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಹೊಸ ಸೇರ್ಪಡೆ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.