ಉಚಿತ ವಿದ್ಯುತ್‌ನ ಮಿತಿ ಮೀರಿದರೆ ಫುಲ್ ಬಿಲ್
Team Udayavani, Jun 23, 2017, 12:17 PM IST
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಬಳಕೆದಾರರ ಉಚಿತ ವಿದ್ಯುತ್ ಬಳಕೆ ಮಿತಿಯನ್ನು 18 ಯೂನಿಟ್‌ನಿಂದ 40 ಯೂನಿಟ್‌ಗೆ ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಆದರೆ ಈ ಮಿತಿ ಮೀರಿದರೆ ಬಳಸಿದ ಅಷ್ಟೂ ಯೂನಿಟ್‌ಗೂ ಶುಲ್ಕ ಪಾವತಿಸಬೇಕಿದೆ.
ಕಳೆದ 2017ರ ಏಪ್ರಿಲ್ 1ರಿಂದಲೇ ಜಾರಿಗೊಳಿಸಿ ಆದೇಶ ಹೊರಡಿಸಿದೆ. 40 ಯೂನಿಟ್‌ಗಿಂತ ಹೆಚ್ಚು ಬಳಸಿದರೆ ಸಂಪೂರ್ಣ ಬಿಲ್ ಮೊತ್ತ (ಮೊದಲ ಯೂನಿಟ್‌ನಿಂದ ಬಳಸಿದ ಅಷ್ಟೂ ವಿದ್ಯುತ್‌ಗೆ) ಬಳಕೆದಾರರು ಪಾವತಿಸಬೇಕು ಎಂದು ಬೆಸ್ಕಾಂ ಪ್ರಧಾನ ವ್ಯವಸ್ಥಾಪಕ (ಕಂದಾಯ) ದೊರೆಸ್ವಾಮಿ ತಿಳಿಸಿದ್ದಾರೆ.
ಒಂದೊಮ್ಮೆ ಮಿತಿಗಿಂತ ಹೆಚ್ಚು ವಿದ್ಯುತ್ ಬಳಸಿ ನಂತರ ಶುಲ್ಕ ಪಾವತಿಸದಿದ್ದರೆ ಆ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಲಾಗುತ್ತದೆ. ಗ್ರಾಹಕರು ವಿದ್ಯುತ್ ಬಿಲ್ ಮೊತ್ತವನ್ನು ಬೆಸ್ಕಾಂ ವ್ಯಾಪ್ತಿಯ ಗ್ರಾಮ ವಿದ್ಯುತ್ ಪ್ರತಿನಿಧಿಗಳು, ನಗದು ಕೌಂಟರ್, ಎಟಿಪಿ, ಅಂಚೆ ಕಚೇರಿ, ಬೆಂಗಳೂರು ಒನ್, ತುಮಕೂರು ಒನ್ ಹಾಗೂ ದಾವಣಗೆರೆ ಒನ್ ಕೇಂದ್ರಗಳಲ್ಲಿ ಪಾವತಿಸಬಹುದು ಎಂದು ಹೇಳಿದ್ದಾರೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಸಂಪರ್ಕ ಸುಮಾರು ಏಳು ಲಕ್ಷವಿದ್ದು, ಈ ಕುಟುಂಬಗಳು ಬಳಸುವ ವಿದ್ಯುತ್‌ಗೆ ತಗಲುವ ಮೊತ್ತವನ್ನು ಸರ್ಕಾರವೇ ಭರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.