ನಿರುದ್ಯೋಗಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ
Team Udayavani, Mar 29, 2019, 11:47 AM IST
ಬೆಂಗಳೂರು: ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಯುವಕ ಯುವತಿಯರಿಗೆ ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಏ.1ರಿಂದ ತರಗತಿಗಳು ಪ್ರಾರಂಭವಾಗಲಿವೆ. ಕಂಪ್ಯೂಟರ್ ಆಫೀಸ್ ಆಡ್ಮಿನಿಸ್ಟ್ರೇಷನ್ ಹಾಗೂ ಹಾರ್ಡ್‌ವೇರ್ ಮತ್ತು ನೆಟ್‌ವರ್ಕ್ ಆಡ್ಮಿನಿಸ್ಟ್ರೇಶನಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು.
ಪಿಯುಸಿ, ಡಿಗ್ರಿ, ಡಿಪ್ಲೊಮಾ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. 18 ರಿಂದ 27 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ವರ್ಗದ 30 ವರ್ಷದೊಳಗಿನ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಬಹುದು.
ಈ ತರಬೇತಿ ಪಡೆಯಲು ಇಚ್ಛಿಸುವವರು ಮಾ.30ರಂದು ಮಲ್ಲೇಶ್ವರದಲ್ಲಿರಯವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆ, ಚಿತ್ರಾಪುರ ಭವನ, ಮಲ್ಲೇಶ್ವರ ಅಥವಾ ದೂ.080 23440036, 23463580 ಅಥವಾ ಮೊ. 94485 38107 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.