ಮಹಿಳಾ ಸಾಹಿತ್ಯಕ್ಕೆ ಸಿಗದ ಮುಕ್ತ ಪರಿಸರ


Team Udayavani, Jul 10, 2017, 11:35 AM IST

mahila–KENGERI-1.jpg

ಕೆಂಗೇರಿ: ಮಹಿಳಾ ಸಾಹಿತ್ಯವನ್ನು ಮುಕ್ತವಾಗಿ ಸ್ವೀಕರಿಸುವ ಪರಿಸರ ಇನ್ನೂ ನಿರ್ಮಾಣವಾಗಿಲ್ಲ. ಆರೋಗ್ಯಕರ ಸಮಾಜದ ಬೆಳವಣಿಗೆಗಾಗಿ ಮಹಿಳಾ ಸಾಹಿತ್ಯ ಚಿಂತನೆಗೆ ಮನ್ನಣೆ ನೀಡಬೇಕಾದ ಅಗತ್ಯವಿದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಡಾ.ಗೀತಾ ರಾಮಾನುಜಂ ತಿಳಿಸಿದರು.

ಯಶವಂತಪುರ ವಿಧಾನ ಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಕೆಂಗೇರಿ ಉಪನಗರದ ಶೇಷಾದ್ರಿಪುರಂ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಕನ್ನಡ ಮಣ್ಣಿನ ಸಂಸ್ಕೃತಿಯಲ್ಲಿ ಸರ್ವಜನಾಂಗವನ್ನೂ ಪ್ರೀತಿಸುವ ಧೋರಣೆಗಳಿದ್ದರೂ ಬುದ್ಧಿಜೀವಿಗಳನ್ನೊಳಗೊಂಡ ಸಾಹಿತ್ಯ ಕ್ಷೇತ್ರದಲ್ಲಿಯೂ ಜಾತೀಯತೆ ಗುಂಪುಗಾರಿಕೆ ಮರೆಯಾಗಿಲ್ಲ.

ನಮ್ಮವರಲ್ಲೆ ಇವ ನಮ್ಮವನು ಅವ ನಮ್ಮವನಲ್ಲ ಎಂಬ ಧೋರಣೆ ಇದ್ದರೆ ಸಾಹಿತ್ಯ ಸೇವೆ ಮುಕ್ತವಾಗಿ ಮೂಡದು. ಸಾರ್ವತ್ರಿಕವಾಗಿಯೂ ಸ್ವೀಕಾರವಾಗದು. ಹನ್ನೆರಡನೇ ಶತಮಾನದಲ್ಲಿಯೇ ಬಸವಣ್ಣನವರು ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಮತ್ತು ಎಲ್ಲಾ ಜನಾಂಗದವರಿಗೆ ಸಮಾನ ಅವಕಾಶ ಕಲ್ಪಿಸುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಿದ್ದರು. ಕನ್ನಡವನ್ನು ಮಾತನಾಡಲು ಅವಮಾನವೆಂಬುದನ್ನು ಮೊದಲು ಕನ್ನಡಿಗರು ತೊರೆಯಬೇಕು. ಇದರೊಂದಿಗೆ ಮಕ್ಕಳಿಗೆ ನಮ್ಮ ಸಂಸ್ಕೃತಿ, ವಿಚಾರದಾರೆಗಳ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ,’ ಎಂದು ತಿಳಿಸಿದರು. 

“ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸುವುದರಲ್ಲಿ ಪûಾತೀತವಾಗಿ ಹಲವಾರು ರಾಜಕಾರಣಿಗಳ ಸ್ವಾರ್ಥವಿದೆ. ಸರ್ಕಾರಿ ಶಾಲೆಗಳು ವಿಶಾಲವಾದ ವಿಸ್ತಾರ ಹೊಂದಿದ್ದರೂ ವಿದ್ಯಾರ್ಥಿಗಳನ್ನು ಆಕರ್ಷಿಸಿ ಶಿಕ್ಷಣ, ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಯಾವುದೇ ರೀತಿಯ ಪ್ರಯತ್ನಗಳನ್ನು ಮಾಡದೆ ಕಡಿಮೆ ವಿದ್ಯಾರ್ಥಿಗಳಿದ್ದಾರೆ ಎಂಬ ಕಾರಣ ನೀಡಿ ಶಾಲೆಯನ್ನು ಮುಚ್ಚುವ ಅಥವಾ ಸ್ಥಳಾಂತರಿಸುವ ಸರ್ಕಾರದ ಧೋರಣೆ ಸರಿಯಲ್ಲ,’ ಎಂದರು.

ಕೇಂದ್ರ ಸಚಿವ ಸದಾನಂದಗೌಡ ಮಾತನಾಡಿ “ನಾವು ಎಷ್ಟೇ ಎತ್ತರಕ್ಕೇರಿದ್ದರೂ ಮಾತೃ ಭಾಷೆ ಕನ್ನಡವನ್ನು ಯಾವುದೇ ಕಾರಣಕ್ಕೂ ಮರೆಯಬಾರದು. ಇಂದಿಗೂ ನಾನು ಯಾವುದೇ ಕಡತಗಳಿಗೆ ಕನ್ನಡದಲ್ಲೇ ಸಹಿ ಮಾಡುತ್ತೇನೆ. ಇಂಗ್ಲಿಷ್‌ ವ್ಯಾಮೋಹಕ್ಕೆ ಒಳಗಾಗದೆ ಬಾಲ್ಯದಲ್ಲಿಯೇ ಮಕ್ಕಳಿಗೆ ಕನ್ನಡ ಭಾಷೆ, ಕಲೆ, ಸಾಹಿತ್ಯ, ಸಂಸ್ಕೃತಿ ಕಲಿಸುವ ದಿಕ್ಕಿನತ್ತ ಪೋಷಕರು ಚಿಂತಿಸಬೇಕು. ಭಾವನಾತ್ಮಕ ಸಂಬಂಧಗಳು ಗಟ್ಟಿಗೊಳಿಸುವಲ್ಲಿ ನಮ್ಮ ಮಾತೃಭಾಷೆ ಮಹತ್ವದ ಪಾತ್ರವಹಿಸುತ್ತದೆ,’ ಎಂದರು.

ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಾಯಣ್ಣ ಮಾತನಾಡಿ, “ಕನ್ನಡ ಭಾಷಾ ಬೆಳವಣಿಗೆಯಲ್ಲಿ ಹಲವಾರು ಮಹನೀಯರ ನಿಸ್ವಾರ್ಥ ಸೇವೆ ಹಾಗೂ ಕೊಡುಗೆಗಳಿವೆ. ಅವರನ್ನು ಸ್ಮರಿಸುವ ಅಗತ್ಯವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಂದ ಪ್ರೇರಿತವಾಗಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್‌ ಮೂಲಕ ಅನ್ಯ ಭಾಷಿಕರಿಗೂ ಕನ್ನಡ ಕಲಿಸಿ ಕನ್ನಡ ವಾತಾವರಣ ನಿರ್ಮಾಣ ಮಾಡಬೇಕಾದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ,’ ಎಂದರು.

ಯಶವಂತಪುರ ವಿಧಾನ ಸಭಾ ಕ್ಷೇತ್ರ ಶಾಸಕ ಎಸ್‌.ಟಿ.ಸೋಮಶೇಖರ್‌ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್‌ ಸದಸ್ಯ ನಾರಾಯಣಸ್ವಾಮಿ, ಶ್ರಿಮಹಾಲಕ್ಷಿ¾ ದೇವಸ್ಥಾನ ಸಂಸ್ಥಾಪಕ ಅಧ್ಯಕ್ಷೆ ಡಾ.ಸಂಗೀತಮ್ಮ, ಕಪೂಚಿನ್‌ ಧರ್ಮಗುರು ಆಲ್ವಿನ್‌ ಡಯಾಸ್‌, ಕೆಂಗೇರಿ ವಾರ್ಡ್‌ನ ಪಾಲಿಕೆ ಸದಸ್ಯ ವಿ.ವಿ.ಸತ್ಯನಾರಾಯಣ, ಕೆಂಗೇರಿ ಪುರಸಭೆಯ ಮಾಜಿ ಉಪಾಧ್ಯಕ್ಷ ಜಿ.ಮುನಿರಾಜು, ಯಶವಂತಪುರ ಕ.ಸಾ.ಪ ಅಧ್ಯಕ್ಷ ಶ್ರೀನಿವಾಸ್‌,’ ಮತ್ತಿತರರು ಉಪಸ್ಥಿತರಿದ್ದರು.

ಬೆಳಿಗ್ಗೆ ಕೆಂಗೇರಿ ಉಪನಗರದ ಹೊಯ್ಸಳ ವೃತ್ತದಿಂದ ಶೇಷಾದ್ರಿಪುರಂ ಕಾಲೇಜುವರೆಗೆ ಬೆಳ್ಳಿ ರಥದಲ್ಲಿ ಸಮ್ಮೇಳನಾಧ್ಯಕ್ಷರನ್ನ ವಿವಿಧ ಜಾನಪದ ಕಲಾ ತಂಡದೊಂದಿಗೆ ವಿವಿಧ ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಕನ್ನಡ ಪರ ಘೋಷಣೆಗಳೊಂದಿಗೆ ಕರೆತಂದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರುಗಳನ್ನ ಸನ್ಮಾನಿಸಿ ಗೌರವಿಸಲಾಯಿತು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.