ಮುಕ್ತ ವ್ಯಾಪಾರ ಒಪ್ಪಂದ ದೇಶದ ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ : ಸಿದ್ದರಾಮಯ್ಯ ಟ್ವೀಟ್
Team Udayavani, Oct 23, 2019, 12:02 PM IST
ಬೆಂಗಳೂರು: ಮಾಜಿ ಸಿ.ಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರದ ವಿರುದ್ದ ಗುಡುಗಿದ್ದಾರೆ.
ಪ್ರಾದೇಶಿಕ ಆರ್ಥಿಕದಡಿಯಲ್ಲಿ ನಡೆಯಲಿರುವ ಮುಕ್ತ ವ್ಯಾಪಾರ ಒಪ್ಪಂದ ದೇಶದ ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ ಕೇಂದ್ರ ಸರ್ಕಾರದ ಈ ಪ್ರಯತ್ನ ರೈತರ ಪಾಲಿನ ಮರಣ ಶಾಸನ ಎಂದು ಮಾಜಿ ಸಿ.ಎಂ ಹಾಗೂ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರದ ವಿರುದ್ದ ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ.
ಸರಣಿ ಟ್ವೀಟ್ ಮಾಡಿದ ಅವರು ಸುಮಾರು10 ಕೋಟಿ ರೈತರ ಬದುಕು ಹೈನುಗಾರಿಕೆಯನ್ನು ಅವಲಂಬಿಸಿದೆ.ಕರ್ನಾಟಕದಲ್ಲಿಯೇ ಸುಮಾರು 86 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನ್ಯೂಜಿಲೆಂಡ್, ಆಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದಿಗೆ ಅವಕಾಶ ನೀಡುವ ಆರ್ .ಸಿ.ಇ.ಪಿ ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
ನಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಎಫ್.ಟಿ.ಎ ವಿರೋಧಿಸಲು ಕರೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಬೇಕೆಂದು ಪಕ್ಷದ ಕಾರ್ಯಕರ್ತರಿಗೆ ಟ್ವೀಟ್ ಮೂಲಕ ಕರೆ ಕೊಟ್ಟಿದ್ದಾರೆ.
ಯುಪಿಎ ಸರ್ಕಾರ ಆರ್ .ಸಿ.ಇ.ಪಿ ಮಾತುಕತೆಯಲ್ಲಿ ಭಾಗಿಯಾಗಿದ್ದು ನಿಜ. ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ರೈತರ ಹಿತ ಕಾಪಾಡಲು ಕೆಲವು ಬದಲಾವಣೆಗಳನ್ನು ಬಯಸಿದ್ದರು. ಆದರೆ ನರೇಂದ್ರ ಮೋದಿ ಅವರು ಇಡೀ ದೇಶವನ್ನು ಕತ್ತಲಲ್ಲಿಟ್ಟು ಈ ಒಪ್ಪಂದಕ್ಕೆ ಸಹಿ ಹಾಕಲು ಹೊರಟಿದ್ದಾರೆ. ಎಲ್ಲಿದೆ ಪಾರದರ್ಶಕತೆ ಎಂದು ಪ್ರಶ್ನೆ ಹಾಕಿದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಹೈನುಗಾರಿಕೆಯನ್ನು ಉತ್ತೇಜಿಸಲು ‘ಕ್ಷೀರಧಾರೆ’ ಮತ್ತು ಶಾಲಾ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಲು ‘ಕ್ಷೀರಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿದ್ದೆ.@narendramodi ಸರ್ಕಾರ ರೈತರು ಮತ್ತು ಶಾಲಾ ಮಕ್ಕಳ ಬದುಕು ಕಸಿಯಲು ಹೊರಟಿದೆ.
3/5#IOpposeRCEP @INCKarnataka— Siddaramaiah (@siddaramaiah) October 23, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.