ಉದ್ಯಮ ಸ್ಥಾಪನೆಗೆ ಮುಕ್ತ ಸ್ವಾಗತ
Team Udayavani, Jul 8, 2018, 6:15 AM IST
ಬೆಂಗಳೂರು: ರಾಜ್ಯದ ಕೈಗಾರಿಕಾ ವಲಯದಲ್ಲಿ ಬಂಡವಾಳ ಹೂಡಿಕೆಯ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿದ್ದು, ಹೂಡಿಕೆ ದಾರರನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣ ನೇತೃತ್ವದಲ್ಲಿ ತಮ್ಮನ್ನು ಭೇಟಿ ಮಾಡಿದ ಭಾರತೀಯ ಕೈಗಾರಿಕಾ ಒಕ್ಕೂಟದ ನಿಯೋಗದ ಜತೆ ಚರ್ಚಿಸಿದ ನಂತರ ಮಾತನಾಡಿದ ಅವರು, ಈಗಾಗಲೇ ಆಯವ್ಯಯದಲ್ಲಿ ಮಂಡಿಸಿದಂತೆ ವಿವಿಧ ಜಿಲ್ಲೆಗಳಲ್ಲಿ ಬೇರೆ, ಬೇರೆ ಉತ್ಪನ್ನಗಳ ತಯಾರಿಕಾ ವಲಯ ಸ್ಥಾಪಿಸಲು ಉದ್ದೇಶಿಸಿದ್ದು, ಸರ್ಕಾರ ಹೂಡಿಕೆದಾರರನ್ನು ಮುಕ್ತ ಮನಸ್ಸಿನಿಂದ ಆಹ್ವಾನಿಸುತ್ತದೆ.
ಬಂಡವಾಳ ಹೂಡಿಕೆದಾರರು ಸರ್ಕಾರದ ಅನುಮತಿಗಾಗಿ ವಿವಿಧ ಇಲಾಖೆಗಳ ಬಾಗಿಲು ತಟ್ಟುವುದನ್ನು ತಪ್ಪಿಸಲು ನನ್ನ ಕಚೇರಿಯಲ್ಲಿಯೇ ಜವಾಬ್ದಾರಿಯುತ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ, ಕೈಗಾರಿಕಾ ಒಕ್ಕೂಟವು ರಾಜ್ಯದಲ್ಲಿ ಹೊಂದಿರುವ ಹೂಡಿಕೆಯ ಯೋಜನೆಗಳ ಕುರಿತು ಮೂರು ವಾರದಲ್ಲಿ ಮಾಹಿತಿ ನೀಡುವುದಾಗಿ ಸಿಐಐ ಪದಾಧಿಕಾರಿಗಳು ತಿಳಿಸಿದರು. ಜುಲೈ 12ರಂದು ನಡೆಯಲಿರುವ ಇಂಡಿಯಾ ಇನೋವೇಷನ್ ಸಮ್ಮಿಟ್‌ಗೆ ಸಿಎಂಗೆ ಆಹ್ವಾನ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.