ಮತ್ತಿನಲ್ಲಿ ಸ್ನೇಹಿತರನ್ನೇ ಕೊಂದರು!


Team Udayavani, Jan 2, 2018, 12:19 PM IST

murder.jpg

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸ್ನೇಹಿತರ ಮಧ್ಯೆ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾದ ಘಟನೆ ಜೆ.ಪಿ.ನಗರ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಜರಗನಹಳ್ಳಿ ನಿವಾಸಿ, ಕಾರು ಚಾಲಕ ಹೇಮಂತ್‌ ಕುಮಾರ್‌ (25) ಕೊಲೆಯಾದವ. ಪ್ರಕರಣ ಸಂಬಂಧ ಸೆಕ್ಯೂರಿಟಿ ಗಾರ್ಡ್‌ ಕೆಲಸ ಮಾಡುವ ಅಮೃತ್‌ ಎಂಬಾತನನ್ನು ಬಂಧಿಸಲಾಗಿದೆ. ಜರಗನಹಳ್ಳಿ ಕ್ರಾಸ್‌ ಬಳಿಯಿರುವ ಸಿಂಧೂರು ಕಲ್ಯಾಣ ಮಂದಿರ ಸಮೀಪ ಘಟನೆ ನಡೆದಿದೆ.

ಡಿ.31ರ ತಡರಾತ್ರಿ 12 ಗಂಟೆ ಸುಮಾರಿಗೆ ಸಾರಕ್ಕಿ ಅಗ್ರಹಾರ ನಿವಾಸಿಗಳಾದ ಹೇಮಂತ್‌ ಮತ್ತು ಈತನ ಸಹೋದರ ಹಾಗೂ ಈತನ ಸ್ನೇಹಿತ ಅಮೃತ್‌ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ. ಈ ವೇಳೆ ಹೇಮಂತ್‌ನ ಸಹೋದರ ಹಾಗೂ ಈತನ ಸ್ನೇಹಿತರ ನಡುವೆ ಗಲಾಟೆಯಾಗಿದ್ದು, ಹೇಮಂತ್‌ ಇಬ್ಬರನ್ನು ಸಮಾಧಾನ ಮಾಡಿದ್ದಾನೆ.

ಕೆಲ ಹೊತ್ತಿನ ಬಳಿಕ ಆರೋಪಿ ಅಮೃತ್‌, “ನಿನ್ನ ತಮ್ಮನ ಕೆಟ್ಟ ಚಟಗಳ ಬಗ್ಗೆ ಹೇಳುತ್ತೇನೆ’ ಎಂದು ಹೇಮಂತ್‌ ಕುಮಾರ್‌ನನ್ನು ಬಾರ್‌ನಿಂದ ಹೊರಗಡೆ ಕರೆತಂದು ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಇದೇ ವೇಳೆ ಹೇಮಂತ್‌ನ ಸಹೋದರ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿ ಅಮೃತ್‌ನನ್ನು ಸೋಮವಾರ ನಸುಕಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಕ್ಯೂರಿಟಿ ಗಾರ್ಡ್‌ ಕೆಲಸ ಮಾಡುವ ಅಮೃತ್‌, ತನ್ನ ರಕ್ಷಣೆಗಾಗಿ ಚಾಕು ಖರೀದಿಸಿದ್ದು, ಮದ್ಯ ಸೇವಿಸಲು ಹೋಗುವಾಗ ಕೊಂಡೊಯ್ದಿದ್ದ. ಇದೇ ವೇಳೆ ಜಗಳ ವಿಕೋಪಕ್ಕೆ ಹೋದಾಗ ಅದೇ ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಜೆ.ಪಿ.ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮತ್ತೂಂದು ಪ್ರಕರಣದಲ್ಲಿ ಶಿವಮೊಗ್ಗ ಮೂಲದ ಅಮಿತ್‌ (24) ಎಂಬಾತನನು,° ಮದ್ಯದ ಅಮಲಿನಲ್ಲಿದ್ದ ಆತನ ಸ್ನೇಹಿತರೇ ಇರಿದು ಕೊಂದಿದ್ದಾರೆ. ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗಷ್ಟೇ ನಗರಕ್ಕೆ ಬಂದಿದ್ದ ಅಮಿತ್‌, ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ. ಭಾನುವಾರ ರಾತ್ರಿ ಬೇರೆಡೆ ಇರುವ ಸ್ನೇಹಿತರೆಲ್ಲ ಜೆ.ಪಿ.ನಗರದ ಮುಖ್ಯರಸ್ತೆಯಲ್ಲಿ ಹೊಸ ವರ್ಷಾಚರಣೆ ಮಾಡಿದ್ದಾರೆ.

ಈ ವೇಳೆ ಕಂಠಪೂರ್ತಿ ಮದ್ಯ ಸೇವಿಸಿದ್ದು, ಆಚರಣೆ ಬಳಿಕ ಎಲ್ಲರೂ ತಮ್ಮ ಮನೆಗಳಿಗೆ ತೆರಳಿದ್ದಾರೆ. ಆದರೆ, ದಾರಿ ಮಧ್ಯೆ ಮತ್ತೂಮ್ಮೆ ಎಲ್ಲರು ಪರಸ್ಪರ ಕರೆ ಮಾಡಿಕೊಂಡು ಜೆ.ಪಿ.ನಗರದ ಮುಖ್ಯ ರಸ್ತೆಗೆ ವಾಪಸ್‌ ಬಂದಿದ್ದಾರೆ. ಈ ವೇಳೆ ಸ್ನೇಹಿತರ ನಡುವೆ ಜಗಳವಾಗಿದ್ದು, ನಾಲ್ಕು ಮಂದಿ ಪೈಕಿ ಒಬ್ಟಾತ ಅಮಿತ್‌ಗೆ ಚಾಕುವಿನಿಂದ ಇರಿದಿದ್ದಾನೆ.

ಹೀಗಾಗಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಅಮಿತ್‌ ಸಾವನ್ನಪ್ಪಿದ್ದಾನೆ. ಪ್ರಕರಣ ಸಂಬಂಧ ಒಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದು, ಮದ್ಯದ ಅಮಲಿನಲ್ಲಿ ಘಟನೆ ನಡೆದಿರುವುದಾಗಿ ಹೇಳಿದ್ದಾನೆ. ಮತ್ತೂಬ್ಬನ ಬಂಧನದ ನಂತರ ಆದರೆ ಕೊಲೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ ಎಂದು ಜೆ.ಪಿ.ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.