ಇನ್‌ಸ್ಟಾಗ್ರಾಂ ಪರಿಚಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರಗೈದ ಐವರ ಬಂಧನ!
Team Udayavani, Jan 22, 2021, 10:22 AM IST
ಬೆಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯಿಸಿಕೊಂಡ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಐವರು ಆರೋಪಿಗಳನ್ನು ಹನುಮಂತನಗರ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ನಗರ ನಿವಾಸಿಗಳಾದ ವೆಂಕಟೇಶ, ಚೇತನ್, ಲೇಖನ್, ರಕ್ಷಕ್, ಅಭಿಷೇಕ್ ಎಂಬವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಬಾಬು ಎಂಬಾತ ತಲೆಮರೆಸಿಕೊಂಡಿದ್ದು ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಪ್ರಕರಣದ ಪ್ರಮುಖ ಆರೋಪಿ ವೆಂಕಟೇಶ್ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದ್ದು, ಮರಗೆಲಸ ಮಾಡಿಕೊಂಡಿದ್ದಾನೆ. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯನಾಗಿದ್ದ ಈತ, ಇನ್‌ಸ್ಟ್ರಾಗ್ರಾಂನಲ್ಲಿ ಖಾತೆ ಹೊಂದಿದ್ದಾನೆ. ಈ ವೇಳೆ ಸಂತ್ರಸ್ತೆಯನ್ನು ಪರಿಚಯಿಸಿಕೊಂಡು, ಆಕೆ ಜತೆ ಹೆಚ್ಚು ಸಲುಗೆಯಿಂದ ಇದ್ದ. ಬಳಿಕ ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದರು. ಪ್ರತಿ ದಿನ ವಾಟ್ಸ್ಆ್ಯಪ್ ಚಾಟ್ ಮಾಡುತ್ತಿದ್ದರು. ಈ ವಿಚಾರವನ್ನು ಆರೋಪಿ ತನ್ನ ಸಹಚರರ ಜತೆ ಹಂಚಿಕೊಂಡಿದ್ದ.
ಇದನ್ನೂ ಓದಿ:ಕಲ್ಲು ಗಣಿಗಾರಿಕೆಯಲ್ಲಿ ಡೈನಾಮೈಟ್ ಸ್ಫೋಟ 7ಕ್ಕೂ ಹೆಚ್ಚು ಕಾರ್ಮಿಕರು ಬಲಿ
ಕಳೆದ ನ.8ರಂದು ಮುಂಜಾನೆ ಬಾಲಕಿಯನ್ನು ಪುಸಲಾಯಿಸಿಕೊಂಡು ಹೊರಗೆ ಹೋಗೋಣ ಎಂದು ಹೇಳಿ ಕರೆದೊಯ್ದ ಆರೋಪಿ ವೆಂಕಟೇಶ್, ತನ್ನ ಸ್ನೇಹಿತರಾದ ಬಾಬು ಹಾಗೂ ಅಭಿಷೇಕ್ ಜತೆ ಕಾರಿನಲ್ಲಿ ಬಾಲಕಿಯನ್ನು ಕರೆದು ಕೊಂಡು ಹೋಗಿದ್ದಾರೆ. ಪಾರ್ಕ್‌ವೊಂದರ ಬಳಿ ಜತೆಯಲ್ಲಿದ್ದ ಮೂವರು ಆರೋಪಿಗಳು ಬಾಲಕಿ ಮೇಲೆ ಆತ್ಯಾಚಾರ ಮಾಡಿ ಮನೆಗೆ ಬಿಟ್ಟು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ: ಬಾಂಬ್ ನಿಷ್ಕ್ರಿಯ ದಳ ಆಗಮಿಸಿದ ಬಳಿಕವಷ್ಟೇ ಮುಂದಿನ ಕ್ರಮ
ಸಂತ್ರಸ್ತೆಯನ್ನು ತಡರಾತ್ರಿ ಕರೆದೊಯ್ದು ಕೃತ್ಯ
ಈ ವಿಚಾರವನ್ನು ಸಂತ್ರಸ್ತೆ ಹೊರಗಡೆ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಅದನ್ನೇ ದುರುಪಯೋಗಪಡಿಸಿಕೊಂಡ ಆರೋಪಿಗಳು, ಜ.18 ರಂದು ಮಧ್ಯರಾತ್ರಿ ಸಂತ್ರಸ್ತೆಗೆ ಕರೆ ಮಾಡಿ ಬೆದರಿಕೆಯೊಡ್ಡಿ ಗುಟ್ಟಹಳ್ಳಿಯ ಸ್ನೇಹಿತನ ಮನೆಗೆ ಕರೆದೊಯ್ದು ಕೃತ್ಯ ಎಸಗಿದ್ದಾರೆ. ಈ ಸಂಬಂಧ ದೂರು ನೀಡಲಾಗಿತ್ತು. ಬಳಿಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.