ಬೆಂಗಳೂರು ಗೆಲ್ಲಲು ಮಿತ್ರರ ಕಾರ್ಯತಂತ್ರ
Team Udayavani, Mar 29, 2019, 11:49 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆ ನಂತರ ಉಪ ಚುನಾವಣೆಯಲ್ಲಿ ಒಂದೇ ವೇದಿಕೆ ಹತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೀಗ ಲೋಕಸಭೆ ಚುನಾವಣಾ ಅಖಾಡಕ್ಕೂ ಒಟ್ಟಿಗೇ ಇಳಿದಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ನಾಯಕರ ಜಂಟಿ ಸಭೆಯಲ್ಲಿ ಇಬ್ಬರೂ ಪಾಲ್ಗೊಂಡು, ಮೈತ್ರಿ ಬಗ್ಗೆ ಎರಡೂ ಪಕ್ಷಗಳ ಮುಖಂಡರು -ಕಾರ್ಯಕರ್ತರು ಸಣ್ಣಪುಟ್ಟ ವ್ಯತ್ಯಾಸಕ್ಕೂ ಅವಕಾಶವಿಲ್ಲದಂತೆ ಕೆಲಸ ಮಾಡಬೇಕು ಎಂಬ ಸಂದೇಶ ರವಾನಿಸಿದರು.
ಎಚ್.ಡಿ.ದೇವೇಗೌಡರು ಮಾತನಾಡಿ, ಮೈತ್ರಿ ವಿರುದ್ಧವಾಗಿ ಎರಡೂ ಪಕ್ಷಗಳ ಮುಖಂಡರು ಪಿಸು ಮಾತಿನಲ್ಲೂ ಮಾತನಾಡಬಾರದು. ಜೆಡಿಎಸ್‌ನಲ್ಲಿ ಯಾರಾದರೂ ಅಪಸ್ವರ ಎತ್ತಿದರೆ ಪಕ್ಷದಿಂದ ಹೊರಹಾಕುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೃಷ್ಣ ಬೈರೇಗೌಡ ಜನಪರ ನಾಯಕ. ಆದರೆ, ಸದಾನಂದಗೌಡ ನಾಟಕಕಾರ. ನಗೋದು ಬಿಟ್ಟು ಬೇರೇನೂ ಮಾಡಿಲ್ಲ. ಈಬಾರಿ ನಮಗೆ ಗೆಲ್ಲುವ ಅವಕಾಶ ಹೆಚ್ಚಾಗಿದ್ದು, ಎರಡೂ ಪಕ್ಷಗಳ ನಾಯಕರು ಜತೆಗೂಡಿ ಕೆಲಸ ಮಾಡಿ ಎಂದು ಹೇಳಿದರು.
ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲಲಿದ್ದು, ಯಾವುದೇ ಸಂಶಯ ಬೇಡ. ಆದರೆ, ನಾವು ಮನೆ ಮನೆಗೆ ಹೋಗಿ ಬಿಜೆಪಿಯ ವೈಫಲ್ಯ ಹೇಳಬೇಕು ಎಂದು ತಿಳಿಸಿದರು.
ಕೃಷ್ಣ ಬೈರೇಗೌಡ ಮಾತನಾಡಿ, ನಾನು ನಿಮ್ಮ ಮುಂದೆ ಅಭ್ಯರ್ಥಿಯಾಗಿ ಬರಲು ದೇವೇಗೌಡರು ಪ್ರಮುಖ ಕಾರಣ. ಕಾಂಗ್ರೆಸ್ ನಾಯಕರೆಲ್ಲರೂ ಕೊಟ್ಟ ಸಲಹೆಗೆ ಗೌರವ ಕೊಟ್ಟು ಸ್ಪರ್ಧೆ ಮಾಡಿದ್ದೇನೆ. ಇಲ್ಲಿಂದ ದೇವೇಗೌಡರೇ ಸ್ಪರ್ಧಿಸಬೇಕು ಎಂಬ ಆಸೆ ನಮ್ಮದಾಗಿತ್ತು. ಅವರು ತುಮಕೂರು ಆಯ್ಕೆ ಮಾಡಿಕೊಂಡರು. ಹೀಗಾಗಿ, ನನಗೆ ಅವಕಾಶ ಸಿಕ್ಕಿದೆ ಎಂದು ಹೇಳಿದರು.
ಸಚಿವ ಜಮೀರ್ ಅಹಮದ್ ಮಾತನಾಡಿ, ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿರುವುದು ನೋಡಿ ಸಂತೋಷವಾಗಿದೆ. ಬೆಂಗಳೂರಿನ ನಾಲ್ಕೂ ಸ್ಥಾನ ಗೆಲ್ಲುತ್ತೇವೆ. ತುಮಕೂರಿನಲ್ಲಿ ದೇವೇಗೌಡರು ಗೆಲ್ಲಲಿದ್ದಾರೆ ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್, ಜೆಡಿಎಸ್ ಶಾಸಕರಾದ ಗೋಪಾಲಯ್ಯ, ಮಂಜುನಾಥ್, ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್ ಉಪಸ್ಥಿತರಿದ್ದರು.
ಏ.. ಜೆಡಿಎಸ್ ಯಾಕೆ ಎದ್ದು ಹೋಗ್ತಿಯ?: ಜಂಟಿ ಸಭೆಯಲ್ಲಿ ಜೆಡಿಎಸ್‌ನ ಕೆಲವು ಕಾರ್ಯಕರ್ತರು-ಮುಖಂಡರು ಸಭೆಯ ಮಧ್ಯೆ ಎದ್ದು ಹೋಗುತ್ತಿದ್ದರು. ಇದನ್ನು ಗಮನಿಸಿದ ಸಿದ್ದರಾಮಯ್ಯ, “ಹೇ ಎಲ್ಲರೂ ಕುಳಿತುಕೊಳ್ಳಿ. ಏ, ಜೆಡಿಎಸ್ ಯಾಕೆ ಎದ್ದು ಹೋಗುತ್ತೀಯ ಕೂತ್ಕೊ’ ಎಂದು ಗದರಿ ಕುಳ್ಳರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.