ಇಂದಿನಿಂದ ಸವಿರುಚಿ ಸಂಚಾರ

Team Udayavani, Feb 27, 2018, 12:12 PM IST

saviruchi.jpg

ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಮೂಲಕ ಸಿಲಿಕಾನ್‌ ಸಿಟಿಯ ಲಕ್ಷಾಂತರ ಬಡವರ ಹಸಿವು ನೀಗಿಸುವಲ್ಲಿ ಯಶಸ್ವಿಯಾದ ಸರ್ಕಾರ, ಇದೀಗ ಹೆಚ್ಚು ಜನ ಸೇರುವ ಸ್ಥಳಗಳಿಗೇ ತೆರಳಿ ಕಡಿಮೆ ದರದಲ್ಲಿ ಆಹಾರ ಒದಗಿಸುವ “ಸವಿರುಚಿ ಸಂಚಾರಿ ಕ್ಯಾಂಟೀನ್‌’ ಅನುಷ್ಠಾನಕ್ಕೆ ಮುಂದಾಗಿದೆ. 

ವಿಧಾನಸೌಧದ ಎದುರು ಮಂಗಳವಾರ (ಫೆ.27) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಿರುಚಿ ವಾಹನಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸೋಮವಾರ ಈ ಕುರಿತು ಮಾಹಿತಿ ನೀಡಿದ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಭಾರತಿ ಶಂಕರ್‌, ಬೆಳಗ್ಗೆ 9.30ಕ್ಕೆ ವಿಧಾನಸೌಧದ ಪೂರ್ವ ಮುಖ್ಯದ್ವಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ಜಿಲ್ಲಾ ಸ್ತ್ರೀ ಶಕ್ತಿ ಸಂಘಗಳಿಗೆ ಸವಿರುಚಿ ಸಂಚಾರಿ ವಾಹನಗಳನ್ನು ಹಸ್ತಾಂತರಿಸುವರು ಎಂದರು. 

ಮುಖ್ಯ ಅತಿಥಿಗಳಾಗಿ ಸಚಿವ ಆರ್‌.ರೋಷನ್‌ ಬೇಗ್‌, ಕೆ.ಜೆ.ಜಾರ್ಜ್‌, ಉಮಾಶ್ರೀ, ರಾಮಲಿಂಗಾರೆಡ್ಡಿ, ಎಚ್‌.ಎಂ. ರೇವಣ್ಣ, ವಿರೋಧ ಪಕ್ಷದ ಮುಖಂಡ ಜಗದೀಶ್‌ ಶೆಟ್ಟರ್‌, ಮೇಯರ್‌ ಸಂಪತ್‌ ರಾಜ್‌ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ. ಇದೇ ವೇಳೆ ವಿಕಲಚೇತನರಿಗೆ “ಯಂತ್ರ ಚಾಲಿತ ದ್ವಿಚಕ್ರ ವಾಹನ ‘ ವಿತರಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಮೂಲಕ ಸವಿರುಚಿ ಸಂಚಾರಿ ಕ್ಯಾಂಟೀನ್‌ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ. ಸ್ತ್ರೀ ಶಕ್ತಿ ಸಂಘಗಳ ಸಬಲೀಕರಣ ಸರ್ಕಾರದ ಮುಖ್ಯ ಉದ್ದೇಶದೊಂದಿಗೆ ಈಗಾಗಲೇ ಜಿಲ್ಲಾ ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 10 ಲಕ್ಷ ರೂ. ಬಡ್ಡಿ ರಹಿತ ಸಾಲ ನೀಡಿದೆ. ಸವಿರುಚಿ ಸಂಚಾರಿ ಕ್ಯಾಂಟೀನ್‌ ಯಶಸ್ಸಿಗಾಗಿ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳಿಗೆ ವಿಶೇಷ ತರಬೇತಿ ನೀಡಲಾಗಿದೆ. ಯೋಜನೆ ಯಶಸ್ಸು ಆಧರಿಸಿ ತಾಲೂಕು ಮಟ್ಟದಲ್ಲಿ ವಿಸ್ತರಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದು ಭಾರತಿ ಶಂಕರ್‌ ಮಾಹಿತಿ ನೀಡಿದರು.

ಈ ಹಿಂದೆ ಸವಿರುಚಿ ಸಂಚಾರಿ ಕ್ಯಾಂಟೀನ್‌ ನಡೆಸಲು ಸ್ತ್ರೀಶಕ್ತಿ ಸಂಘಗಳು ಹಿಂದೇಟು ಹಾಕಿದ್ದವು. ಹೀಗಾಗಿ ಯೋಜನೆಯ ಜಾರಿ ವಿಳಂಬವಾಯಿತು. ಸಂಚಾರಿ ವಾಹನ ಖರೀದಿ, ಕ್ಯಾಂಟೀನ್‌ಗೆ ಬೇಕಾಗುವ ಅಗತ್ಯ ಪರಿಕರಗಳನ್ನು ಖರೀದಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ  ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು ಎಂದು ತಿಳಿಸಿದರು.

ಜನ ಇರುವಲ್ಲಿ ಕ್ಯಾಂಟೀನ್‌ ಸಂಚಾರ: ಕಾರ್ಯಾಚರಣೆ ವಿಷಯದಲ್ಲಿ ಸವಿರುಚಿ ಸಂಚಾರಿ ಕ್ಯಾಂಟೀನ್‌, ಇಂದಿರಾ ಕ್ಯಾಂಟೀನ್‌ಗಿಂತ ಭಿನ್ನವಾಗಿದೆ. ಜನದಟ್ಟಣೆ ಇರುವ ಕಡೆಗೆ ಸವಿರುಚಿ ವಾಹನ ಸಂಚರಿಸಲಿದೆ. ಊಟ ಮತ್ತು ಉಪಹಾರದ ಮೆನು ಕೂಡ ಭಿನ್ನವಾಗಿರಲಿದೆ. ಜಾತ್ರೆ ನಡೆಯುವ ಸ್ಥಳ, ಕೈಗಾರಿಕಾ ಪ್ರದೇಶ, ಶಾಲಾ ಕಾಲೇಜು ಸೇರಿದಂತೆ ದೊಡ್ಡ ದೊಡ್ಡ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಈ ಸಂಚಾರಿ ಕ್ಯಾಂಟೀನ್‌ ಇರಲಿದೆ. ಇಡೀ ಕ್ಯಾಂಟೀನ್‌ ವ್ಯವಹಾರವನ್ನು 11 ಮಹಿಳೆಯರ ತಂಡ ನಿರ್ವಹಿಸಲಿದೆ.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.