ಮತ ಸಮರ ಕಹಳೆ; ಇಂದಿನಿಂದ ಬಿಜೆಪಿ ಪರಿವರ್ತನಾ ಯಾತ್ರೆ


Team Udayavani, Nov 2, 2017, 6:00 AM IST

bs-01-2017.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟದ ರಣಕಹಳೆ ಮೊಳಗಿಸಿರುವ ರಾಜ್ಯ ಬಿಜೆಪಿಯ “ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ’ಗೆ ಗುರುವಾರ ಚಾಲನೆ ದೊರೆಯಲಿದ್ದು, ಜ. 28ರವರೆಗೆ ನಡೆಯುವ ಯಾತ್ರೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಉದ್ಘಾಟಿಸಲಿದ್ದಾರೆ.

ತುಮಕೂರು ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಬೆಳಗ್ಗೆ 11 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಅಮಿತ್‌ ಶಾ ಅವರು ಮಧ್ಯಾಹ್ನ 12ಕ್ಕೆ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ ತೊರೆದಿರುವ ಚನ್ನಪಟ್ಟಣ ಶಾಸಕ ಸಿ.ಪಿ. ಯೋಗೇಶ್ವರ್‌ ಮತ್ತು ಬಿಆರ್‌ಎಸ್‌ ಕಾಂಗ್ರೆಸ್‌ನ ಕುಡಚಿ ಶಾಸಕ ರಾಜೀವ್‌ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಯಾತ್ರೆ ನಡೆಯಲಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಸಹ ಉಸ್ತುವಾರಿ ಪುರಂದೇಶ್ವರಿ, ರಾಜ್ಯ ಚುನಾವಣಾ ಸಹ ಉಸ್ತುವಾರಿ ಪಿಯೂಷ್‌ ಗೋಯಲ್‌, ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ, ರಮೇಶ್‌ ಜಿಗಜಿಣಗಿ, ಅನಂತಕುಮಾರ್‌ ಹೆಗಡೆ, ವಿಧಾನ ಮಂಡಲದ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌, ಕೆ.ಎಸ್‌.ಈಶ್ವರಪ್ಪ ಸೇರಿದಂತೆ ಪಕ್ಷದ ರಾಜ್ಯ ನಾಯಕರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಆರಂಭವಾಗುವ ಯಾತ್ರೆ ತುಮಕೂರು ಮೂಲಕ ರಾಜ್ಯದ ವಿವಿಧೆಡೆ ಸಂಚರಿಸಿ 2018ರ ಜ. 25ರಂದು ಮೈಸೂರಿನಲ್ಲಿ ಅಂತ್ಯಗೊಳ್ಳಲಿದೆ. ಜ. 28ರಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಅಧಿಕೃತ ತೆರೆ ಬೀಳಲಿದೆ. ಯಡಿಯೂರಪ್ಪ ಮತ್ತು ಯಾತ್ರೆಯ ಸಂಚಾಲಕಿಯೂ ಆಗಿರುವ ಸಂಸದೆ ಶೋಭಾ ಕರಂದ್ಲಾಜೆ ಅವರು ಎಲ್ಲಾ ದಿನಗಳಂದು ಯಾತ್ರೆಯಲ್ಲಿ ಪಾಲ್ಗೊಳ್ಳುವರು. ಪಕ್ಷದ ರಾಜ್ಯ ಮುಖಂಡರು ತಂಡಗಳಾಗಿ ವಿವಿಧೆಡೆ ಭಾಗವಹಿಸಲಿದ್ದಾರೆ. ಇದಲ್ಲದೆ, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳೂ ಕೆಲ ದಿನ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಆ ಮೂಲಕ ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.

ಯಾತ್ರೆಯುದ್ಧಕ್ಕೂ ರಾಜ್ಯ ಕಾಂಗ್ರೆಸ್‌ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮುಂತಾದ ವಿಚಾರಗಳನ್ನು ಪ್ರಸ್ತಾಪಿಸುವುದರ ಜತೆಗೆ ಕೇಂದ್ರ ಸರ್ಕಾರದ ಸಾಧನೆಗಳನ್ನು ಹೇಳುವ ಮೂಲಕ ಬಿಜೆಪಿಯತ್ತ ಜನರನ್ನು ಸೆಳೆಯುವ ಪ್ರಯತ್ನ ಮಾಡುವುದಾಗಿ ಈಗಾಗಲೇ ಪಕ್ಷದ ನಾಯಕರು ಘೋಷಿಸಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ವಿರುದ್ಧ ವಾಕ್ಸಮರ ಹೆಚ್ಚಲೂ ಈ ಯಾತ್ರೆ ದಾರಿಮಾಡಿಕೊಡಲಿದೆ.

3 ಲಕ್ಷ ಮಂದಿ ಭಾಗಿ: ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರು ಜಿಲ್ಲೆಯ 28 ವಿಧಾನಸಭಾ ಕ್ಷೇತ್ರಗಳ ಪ್ರತಿ ಬೂತ್‌ನಿಂದ ಆರು ಬೈಕ್‌ಗಳಲ್ಲಿ ತಲಾ ಇಬ್ಬರಂತೆ ಮತ್ತು ಇತರೆ 16 ಜಿಲ್ಲೆಗಳ 86 ವಿಧಾನಸಭಾ ಕ್ಷೇತ್ರಗಳ ಪ್ರತಿ ಬೂತ್‌ನಿಂದ ಮೂರು ಬೈಕ್‌ಗಳಲ್ಲಿ ತಲಾ ಇಬ್ಬರಂತೆ ಒಟ್ಟು ಒಂದು ಲಕ್ಷ ಬೈಕ್‌ಗಳಲ್ಲಿ 2 ಲಕ್ಷ ಯುವ ಮೋರ್ಚಾ ಕಾರ್ಯಕರ್ತರು ಆಗಮಿಸಲಿದ್ದಾರೆ. ಇವರೊಂದಿಗೆ ಇತರೆ ವಾಹನಗಳಲ್ಲಿ ಸುಮಾರು ಒಂದು ಲಕ್ಷ ಮಂದಿ ಪಾಲ್ಗೊಳ್ಳುತ್ತಿದ್ದು, ಒಟ್ಟಾರೆ ಸುಮಾರು 3 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ವೇದಿಕೆಯಲ್ಲಿ 300 ಗಣ್ಯರು
ಪರಿವರ್ತನಾ ಯಾತ್ರೆಯ ಉದ್ಘಾಟನಾ ಸಮಾರಂಭಕ್ಕೆ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಆವರಣದಲ್ಲಿ ಸುಮಾರು 300 ಮಂದಿ ಕುಳಿತುಕೊಳ್ಳಲು ಅವಕಾಶವಾಗುವ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು ಒಂದು ಲಕ್ಷ ಮಂದಿ ನಿಲ್ಲಲು ಶಾಮಿಯಾನಾ ಹಾಕಲಾಗಿದೆ.

ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಿಂದ ಕಾರ್ಯಕರ್ತರು ಆಗಮಿಸಲಿದ್ದು, ಈಗಾಗಲೇ ಜಿಲ್ಲಾವಾರು ಎಷ್ಟು ಮಂದಿ ಆಗಮಿಸುತ್ತಿದ್ದಾರೆ ಎಂಬ ಲೆಕ್ಕವನ್ನು ಸಂಬಂಧಿಸಿದವರಿಗೆ ನೀಡಲಾಗಿದೆ. ಬಂದವರೆಲ್ಲರಿಗೂ ವಸ್ತುಪ್ರದರ್ಶನ ಕೇಂದ್ರದ ಆವರಣದಲ್ಲೇ ಮಧ್ಯಾಹ್ನದ ಊಟ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

4 ಗಂಟೆಗಳ ಕಾರ್ಯಕ್ರಮ
ಯಾತ್ರೆಯ ಉದ್ಘಾಟನಾ ಕಾರ್ಯಕ್ರಮ ಒಟ್ಟು ನಾಲ್ಕು ಗಂಟೆ ಕಾಲ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಆರಂಭದಲ್ಲಿ ರಾಜ್ಯದ ನಾಯಕರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅಮಿತ್‌ ಶಾ ಅವರು ಆಗಮಿಸಲಿದ್ದು, ನಂತರ ಯಾತ್ರೆಯ ಉದ್ಘಾಟನೆ ಮತ್ತು ರಥ ಲೋಕಾರ್ಪಣೆಯಾಗಲಿದೆ. ಬಳಿಕ ಅಮಿತ್‌ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು, ಬಿಜೆಪಿ ರಾಜ್ಯಾಧ್ಯಕ್ಷರು ಮಾತನಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.

ಕೊಡಗಿನಲ್ಲಿ ಒಂದೇ ಸಭೆ
ನ. 10ರಂದು ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ನ. 8ರಂದು ಯಾತ್ರೆ ಮಡಿಕೇರಿಯಲ್ಲಿ ತಂಗಲು ಕೊಡಗು ಜಿಲ್ಲಾಡಳಿತ ಅವಕಾಶ ನೀಡದ ಕಾರಣ, ಜಿಲ್ಲೆಯ ಒಂದು ಕ್ಷೇತ್ರದಲ್ಲಿ ಮಾತ್ರ ಯಾತ್ರೆ ನಡೆಯಲಿದೆ. ಕೊಡಗು ಜಿಲ್ಲೆಯಲ್ಲಿ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಿದ್ದು, ಈ ಹಿಂದೆ ನಿಗದಿಪಡಿಸಿದಂತೆ ನ. 8ರಂದು ಮಧ್ಯಾಹ್ನ 3 ಗಂಟೆಗೆ ಮಡಿಕೇರಿ/ಸೋಮವಾರಪೇಟೆ ಹಾಗೂ 6 ಗಂಟೆಗೆ ವಿರಾಜಪೇಟೆಯಲ್ಲಿ ಯಾತ್ರೆ ಮತ್ತು ಬಹಿರಂಗ ಸಭೆ ನಡೆದು ರಾತ್ರಿ ಮಡಿಕೇರಿಯಲ್ಲೇ ತಂಗಬೇಕಿತ್ತು. ಆದರೆ, ಜಿಲ್ಲಾಡಳಿತ ಕೆಲ ನಿರ್ಬಂಧ ಹೇರಿದ ಪರಿಣಾಮ ಸಂಜೆ ವಿರಾಜಪೇಟೆಯಲ್ಲಿ ನಡೆಯಬೇಕಿದ್ದ ಯಾತ್ರೆ ಮತ್ತು ಬಹಿರಂಗ ಸಭೆಯನ್ನು ರದ್ದುಗೊಳಿಸಲಾಗಿದೆ. ಮಡಿಕೇರಿಯಲ್ಲಿ ಸಭೆ ಮುಗಿಸಿದ ಬಳಿಕ ಯಾತ್ರೆ ನೇರವಾಗಿ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯಕ್ಕೆ ತೆರಳಿ ತಂಗಲಿದೆ.

ಯಾತ್ರೆಯ ರಥ ಸಿದ್ಧ
ಪರಿವರ್ತನಾ ಯಾತ್ರೆಗೆ ಸಂಬಂಧಿಸಿದಂತೆ ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ರಥ ಸಿದ್ಧಪಡಿಸಲಾಗಿದ್ದು, ಯಾತ್ರೆಯ ಜತೆಗೆ ರಥಕ್ಕೂ ಅಮಿತ್‌ ಶಾ ಅವರು ಗುರುವಾರ ಹಸಿರು ನಿಶಾನೆ ತೋರಲಿದ್ದಾರೆ. ಟಾಟಾ ಸಂಸ್ಥೆಯ ವಾಹನವನ್ನು ಕೇಸರಿ ರಥದ ರೀತಿ ನಿರ್ಮಾಣ ಮಾಡಲಾಗಿದ್ದು, ಅದರಲ್ಲಿ ಪರಿವರ್ತನಾ ಯಾತ್ರೆ ಮತ್ತು ಕನ್ನಡಿಗರ ಭರವಸೆಯ ಸರ್ಕಾರಕ್ಕೆ ನಾವು ಬದ್ಧ ಎಂಬ ಘೋಷವಾಕ್ಯ ಬರೆಯಲಾಗಿದೆ. ಸುಮಾರು 12 ಜನ ನಿಂತುಕೊಳ್ಳಲು ಸಾಧ್ಯವಾಗುವ ವೇದಿಕೆ ನಿರ್ಮಿಸಲಾಗಿದ್ದು, ಸುಮಾರು 2000 ಮಂದಿಗೆ ಕೇಳಲು ಸಾಧ್ಯವಾಗುವ ಸಾಮರ್ಥ್ಯದ ಮೈಕ್‌ ಅಳವಡಿಸಲಾಗಿದೆ.

ರಥ ಸಂಪೂರ್ಣ ಹವಾನಿಯಂತ್ರಿತವಾಗಿದ್ದು, ಒಂದು ತಿರುಗುವ ಕುರ್ಚಿ ಮತ್ತು ಮೇಜು ಅಳವಡಿಸಲಾಗಿದೆ. ವಿಶ್ರಾಂತಿ ಮತ್ತು ಮಾತುಕತೆಗಾಗಿ ಪ್ರತ್ಯೇಕ ಕೊಠಡಿ ಜತೆಗೆ ಶೌಚಾಲಯ ವ್ಯವಸ್ಥೆ ಇದೆ. ಒಟ್ಟು 70 ಮಂದಿ 19 ದಿನಗಳ ಅವಧಿಯಲ್ಲಿ ಈ ರಥ ಸಿದ್ಧಪಡಿಸಿದ್ದಾರೆ. ಇದಲ್ಲದೆ ಪರ್ಯಾಯವಾಗಿ ಮತ್ತೂಂದು ಸಾಮಾನ್ಯ ರಥವನ್ನೂ ನಿರ್ಮಿಸಲಾಗಿದೆ.

ರಾಜ್ಯದಲ್ಲಿ ಬಿಜೆಪಿಯ ವಾಸ್ತವಿಕ ಸ್ಥಿತಿ ತಿಳಿದು ಶಕ್ತಿ ತುಂಬುವ ಸಲುವಾಗಿ ಗುರುವಾರದಿಂದ ಜ. 28ರವರೆಗೆ 224 ವಿಧಾನಸಭಾ ಕ್ಷೇತ್ರಗಳಲ್ಲೂ ಪರಿವರ್ತನಾ ಯಾತ್ರೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಅಪೇಕ್ಷೆಯಂತೆ ರಾಜ್ಯವನ್ನು ಕಾಂಗ್ರೆಸ್‌ ಮುಕ್ತಗೊಳಿಸಲು ಸಂಕಲ್ಪ ತೊಟ್ಟು ಈ ಯಾತ್ರೆ ನಡೆಸುತ್ತಿದ್ದು, ಎಲ್ಲರೂ ಕೈಜೋಡಿಸಬೇಕು.
– ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.