ಕೈಗೆ ಸಿಗದ ಪರಂ: ಮುಂದುವರಿದ ಅಸಮಾಧಾನ
Team Udayavani, Sep 3, 2017, 6:05 AM IST
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಬೇಸರಗೊಂಡಿದ್ದಾರೆಂದು ಹೇಳಲಾಗಿರುವ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಶನಿವಾರವೂ ಮನೆಯಲ್ಲಿಯೇ ಉಳಿದು ಯಾರಿಗೂ ಭೇಟಿಗೆ ಅವಕಾಶ ನೀಡದೆ ತಮ್ಮ ಅಸಮಾಧಾನ ಮುಂದುವರಿಸಿದ್ದಾರೆ.
ಶುಕ್ರವಾರ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿಯೇ ಇದ್ದರೂ ಕಾರ್ಯಕ್ರಮದಿಂದ ದೂರ ಉಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಏಕ ಪಕ್ಷೀಯ ನಿರ್ಧಾರದ ಬಗ್ಗೆ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎನ್ನಲಾಗಿತ್ತು. ಈ ಕುರಿತು ಮಾಧ್ಯಮಗಳಿಗೂ ಯಾವುದೇ ಪ್ರತಿಕ್ರಿಯೆ ನೀಡದೇ ದೂರ ಉಳಿದಿದ್ದು, ತಮ್ಮ ಅಸಮಾಧಾನ ಬಹಿರಂಗವಾಗಿ ಹೇಳಿಕೊಳ್ಳಲಾಗದ ಸ್ಥಿತಿಯಲ್ಲಿ ಪರಮೇಶ್ವರ್ ಇದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ತಿಪಟೂರು ಶಾಸಕ ಷಡಕ್ಷರಿಗೆ ಸಂಪುಟದಲ್ಲಿ ಸ್ಥಾನ ಕೊಡಿಸಿ ತುಮಕೂರು ಜಿಲ್ಲೆಯಲ್ಲಿ ವಿಶೇಷವಾಗಿ ತಮ್ಮ ಕ್ಷೇತ್ರ ಕೊರಟಗೆರೆಯಲ್ಲಿ ಲಿಂಗಾಯತ ಮತದಾರರನ್ನು ಸೆಳೆಯುವ ಲೆಕ್ಕಾಚಾರ ಹಾಕಿದ್ದ ಪರಮೇಶ್ವರ್ ಆಸೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆ ಕ್ಷಣದಲ್ಲಿ ಶಾಕ್ ನೀಡಿರುವುದು ಪರಮೇಶ್ವರ್ ಮುನಿಸಿಗೆ ಕಾರಣ ಎನ್ನಲಾಗಿದೆ.
ಹತ್ತು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವುದರಿಂದ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಯಾದರೆ, ಅದು ಪಕ್ಷ ಸಂಘಟನೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ಸಂದರ್ಭದಲ್ಲಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿದರೆ, ಪಕ್ಷದ ಕಾರ್ಯಕರ್ತರಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ ಎಂಬ ಕಾರಣಕ್ಕೆ ಪರಮೇಶ್ವರ್ ಎಲ್ಲವನ್ನೂ ಅನುಸರಿಸಿಕೊಂಡು ಹೋಗುವ ಮನಸ್ಥಿತಿಗೆ ಬಂದಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಪರಮೇಶ್ವರ್ ಮುನಿಸಿಗೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ, “ಅವರನ್ನೇ ಕೇಳಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಸಿಎಂ ಮತ್ತು ಅಧ್ಯಕ್ಷರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸುಮ್ಮನೆ ಸೃಷ್ಟಿ ಮಾಡಬೇಡಿ, ನಾವೆಲ್ಲಾ ಚೆನ್ನಾಗಿದ್ದೇವೆ. ಪರಮೇಶ್ವರ್ ನಮ್ಮ ನಾಯಕರು. ಈಗಷ್ಟೇ ಸಚಿವನಾಗಿದ್ದೇನೆ. ಇಲಾಖೆಯಲ್ಲಿ ಏನಾಗಿದೆ ಎಂದು ನೋಡುತ್ತೇನೆ.
– ಆರ್.ಬಿ. ತಿಮ್ಮಾಪುರ, ಅಬಕಾರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.