“ಗಜ’ ಚಂಡಮಾರುತ ಪ್ರಭಾವ: ಕರ್ನಾಟಕದಲ್ಲಿ ಮಳೆ ಸಾಧ್ಯತೆ
Team Udayavani, Nov 14, 2018, 7:13 AM IST
ಬೆಂಗಳೂರು: ತಮಿಳುನಾಡಿನ ಕರಾವಳಿಗೆ ಅಪ್ಪಳಿಸಲಿರುವ “ಗಜ’ ಚಂಡ ಮಾರುತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಲಿದೆ. ಪರಿಣಾಮ ನ.15ರಿಂದ ಮೂರು ದಿನ ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ನಿಕೋಬಾರ್ ಬಳಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ರಾಜ್ಯದ ಮೇಲೆಯೂ ಆಗಲಿದೆ. ಅದರಂತೆ ನ.15, 16 ಹಾಗೂ 17ರಂದು ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಿನಿಂದ ಡಿಸೆಂಬರ್‌ವರೆಗೆ ಬೆಂಗಳೂರಿನಲ್ಲಿ 286 ಮಿ.ಮೀ.ಮಳೆಯಾಗಿತ್ತು. ಸಾಮಾನ್ಯವಾಗಿ ಈ ಅವಧಿಯಲ್ಲಿ ವಾಡಿಕೆಯಂತೆ 185 ಮಿ.ಮೀ.ಮಳೆಯಾಗುತ್ತದೆ.
ಆದರೆ, ಈ ಬಾರಿ ಅಕ್ಟೋಬರ್‌ನಿಂದ ನ.12ರವರೆಗೆ 88.6 ಮಿ.ಮೀ. ಮಳೆ ಸುರಿದಿದೆ.
ರಾಜ್ಯದಲ್ಲಿ ಮುಂಗಾರು ಸ್ವಲ್ಪಮಟ್ಟಿಗೆ ಚುರುಕುಗೊಂಡಿತ್ತು. ಆದರೆ, ಹಿಂಗಾರು ಮಳೆ ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ
ಸೃಷ್ಟಿಯಾಗಿರುವ ಚಂಡಮಾರುತದಿಂದ ರಾಜ್ಯದಲ್ಲಿ ಸ್ವಲ್ಪಮಟ್ಟಿಗೆ ಮಳೆಯಾಗಬಹುದು ಎನ್ನಲಾಗಿದೆ. ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗಬಹುದು ಅಥವಾ ಮೋಡ ಮುಸುಕಿದ ವಾತಾವರಣ ಕಂಡು ಬಂದು, ಚಳಿ ಕಡಿಮೆಯಾಗಬಹುದು. ಸದ್ಯ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29-30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17-18 ಸೆಲ್ಸಿಯಸ್‌ನಷ್ಟಿದೆ. ಹಗಲಿನಲ್ಲಿ ಉಷ್ಣಾಂಶ ಹೆಚ್ಚಾಗಿದ್ದರೆ, ಸಂಜೆ ಹಾಗೂ ರಾತ್ರಿ ವೇಳೆಗೆ ಕೊರೆಯುವ ಚಳಿಯ ಅನುಭವವಾಗುತ್ತಿದೆ. ಶುಭ್ರ ಆಕಾಶವಿರುವುದರಿಂದ ತಾಪಮಾನ ಇಳಿಯುತ್ತದೆ. ಮೋಡ ಬಂದರೆ ತಾಪಮಾನ ಮೇಲಕ್ಕೇರುತ್ತದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.