ಗಾಂಧೀಜಿ ಮೇಲೆ ಭಗವದ್ಗೀತೆ ಪ್ರಭಾವವಿತ್ತು
Team Udayavani, Oct 3, 2018, 12:21 PM IST
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮೇಲೆ ಭಗವದ್ಗೀತೆ ಬಹಳಷ್ಟು ಪ್ರಭಾವ ಬೀರಿತ್ತು ಎಂದು ಆರ್‌ಎಸ್‌ಎಸ್ ಕ್ಷೇತ್ರೀಯ ಸಂಘಚಾಲಕ ವಿ.ನಾಗರಾಜ್ ಅಭಿಪ್ರಾಯಪಟ್ಟಿದ್ದಾರೆ.
ಗಾಂಧಿ ಜಯಂತಿ ಅಂಗವಾಗಿ ಫೌಂಡೇಷನ್ ಫಾರ್ ಇಂಡಿಕ್ ರಿಸರ್ಚ್ ಸ್ಟಡೀಸ್, ಮಂಗಳವಾರ ನಗರದ ಮಿಥಿಕ್ ಸೊಸೈಟಿಯಲ್ಲಿ ಹಮ್ಮಿಕೊಂಡಿದ್ದ “ಸಮಯಾತೀತ ಮಹಾತ್ಮಾಗಾಂಧಿ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೀತೆಯಲ್ಲಿರುವ ಹಲವು ಶ್ಲೋಕಗಳು ಗಾಂಧೀಜಿ ಅವರ ಮೇಲೆೆ ಪ್ರಭಾವ ಬೀರಿದ್ದವು ಎಂದು ಹೇಳಿದರು
ಗಾಂಧೀಜಿ ಅವರು ಭವ್ಯ ಭಾರತದ ಬಗ್ಗೆ ಕನಸು ಕಂಡಿದ್ದರು. ದೇಸಿ ಚಿಂತನೆಯ ಬಗ್ಗೆ ಅಪಾರ ಒಲವು ಹೊಂದಿದ್ದ ಗಾಂಧೀಜಿ, ಭಾರತೀಯರಲ್ಲಿ ಸ್ವದೇಶಿ ತನವನ್ನು ಬಿತ್ತಿದರು. ಚರಕ ಕೂಡ ಹಿಂದೂ ತತ್ವ ಸಿದ್ಧಾಂತವನ್ನು ಸಾರುತ್ತದೆ. ದೇಸೀಯರು ನಮ್ಮನ್ನು ಆಳಲಿ, ಆದರೆ ವಿದೇಶಿಯರು ಆಳುವುದು ಬೇಡ ಎಂಬ ಸಿದ್ಧಾಂತ ಈ ಚರಕದಲ್ಲಿ ಅಡಕವಾಗಿತ್ತು ಎಂದರು.
ಗ್ರಾಮ ಭಾರತದ ಅಭಿವೃದ್ಧಿಯ ಬಗ್ಗೆ ಕನಸು ಹೊಂದಿದ್ದ ಗಾಂಧೀಜಿ, ಯುವಜನತೆಯೇ ಭವ್ಯ ಭಾರತದ ಶಕ್ತಿ ಎಂದು ನಂಬಿದ್ದರು. ಈ ಹಿನ್ನೆಲ್ಲೆಯಲ್ಲೇ ಅವರು, ತಮ್ಮ ಪತ್ರಿಕೆಗೆ ಯಂಗ್ ಇಂಡಿಯಾ ಎಂದು ಹೆಸರಿಟ್ಟರು. ಹರಿಜನರ ಏಳ್ಗೆಯ ಬಗ್ಗೆಯೂ ಹಲವು ಆಲೋಚನೆಗಳನ್ನು ಹೊಂದಿದ್ದ ಗಾಂಧೀಜಿ, ಯಂಗ್ ಇಂಡಿಯಾ ಮತ್ತು ಹರಿಜನ ಪತ್ರಿಕೆಯಲ್ಲಿ ಸಮಾಜವನ್ನು ಎಚ್ಚರಿಸುವ ಲೇಖನಗಳನ್ನು ಬರೆಯುತ್ತಿದ್ದರು ಎಂದು ಹೇಳಿದರು.
ಮಾತೃ ಭಾಷೆಯಲ್ಲೇ ಶಿಕ್ಷಣ: ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು ಎಂಬುದು ಗಾಂಧೀಜಿ ಅವರ ಆಶಯವಾಗಿತ್ತು. ಮಾತೃಭಾಷೆಯಲ್ಲಿ ಶಿಕ್ಷಣ ನೀಡಿದರೆ ಒಂದು ವಿಷಯವನ್ನು ಮಕ್ಕಳು ಆಳವಾಗಿ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ ಎಂಬುವುದು ಅವರ ನಿಲುವಾಗಿತ್ತು. ಹೀಗಾಗಿ, ಗಾಂಧೀಜಿ ಅವರ ವಿಚಾರಧಾರೆಗಳು ಇಂದಿಗೂ ಕೂಡ ಪ್ರಸ್ತುತ ಎನಿಸುತ್ತವೆ ಎಂದು ಹೇಳಿದರು.
ಆರ್.ಎಸ್.ಎಸ್ ಪ್ರಾಂತ ಕಾರ್ಯವಾಹಕ ಡಾ.ಜಯಪ್ರಕಾಶ್, ಕ್ಷೇತ್ರೀಯ ಸಹಕಾರ್ಯವಾಹಕ ಎನ್.ತಿಪ್ಪೇಸ್ವಾಮಿ, ರಾಷ್ಟ್ರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ಎನ್.ದಿನೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಅಸ್ಪೃಶ್ಯತೆ ಬಗ್ಗೆ ವೇದಗಳಲ್ಲಿ ಉಲ್ಲೇಖವಿಲ್ಲ: 1927 ಜುಲೈ 27ರಂದು ಗಾಂಧೀಜಿ ಅವರು ಮಿಥಿಕ್ ಸೊಸೈಟಿಗೆ ಭೇಟಿ ನೀಡಿದ್ದರು. ಮಿಥಿಕ್ ಸೊಸೈಟಿಯಲ್ಲಿ ವಿದ್ವಾಂಸರುಗಳೇ ಹೆಚ್ಚಿರುತ್ತಾರೆ ಎಂಬುವುದನ್ನು ಅವರು ತಿಳಿದುಕೊಂಡಿದ್ದರು. ಹೀಗಾಗಿ, ಇಲ್ಲಿ ಅಸ್ಪೃಶ್ಯತೆಯ ಬಗ್ಗೆ ಆಂಗ್ಲ ಭಾಷೆಯಲ್ಲಿ ಮಾತನಾಡಿದ್ದರು.
ನಾನು ಹಿಂದೂ. ದೇಶದಲ್ಲಿರುವ ಅಸ್ಪೃಶ್ಯತೆ ನನಗೆ ನೋವು ತಂದಿದೆ. ವೇದ ಪುರಾಣಗಳಲ್ಲಿ ಅಸ್ಪೃಶ್ಯತೆ ಬಗ್ಗೆ ಉಲ್ಲೇಖ ಇಲ್ಲ. ಹೀಗಾಗಿ ಅಸ್ಪೃಶ್ಯತೆಯನ್ನು ತೊಲಗಿಸಲು ವಿದ್ವಾಂಸರು ನನ್ನ ಕೈ ಬಲಪಡಿಸಿ ಎಂದು ಗಾಂಧೀಜಿ ಮನವಿ ಮಾಡಿದ್ದರು ಎಂದು ಆರ್.ಎಸ್.ಎಸ್.ನ ಕ್ಷೇತ್ರೀಯ ಸಂಘಚಾಲಕ ವಿ.ನಾಗರಾಜ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.