ಮೋದಕ ಪ್ರಿಯನಿಗೆ ಶುಭಾಹ್ವಾನ

Team Udayavani, Aug 22, 2020, 11:49 AM IST

ಮೋದಕ ಪ್ರಿಯನಿಗೆ ಶುಭಾಹ್ವಾನ

ಬೆಂಗಳೂರು: ನಗರದಲ್ಲಿ ಮೋದಕ ಪ್ರಿಯ ಗಣಪನನ್ನು ಬರಮಾಡಿಕೊಳ್ಳಲು ಜನ ಸಜ್ಜಾಗಿದ್ದಾರೆ. ಇದಕ್ಕಾಗಿಯೇ ಶುಕ್ರವಾರ ವಿವಿಧೆಡೆ ಜನರು ಖರೀದಿ ಪ್ರಕ್ರಿಯಲ್ಲಿ ತೊಡಗಿದ್ದು ಕಂಡು ಬಂತು.

ನಗರದ ಅಲ್ಲಲ್ಲಿ ತಲೆ ಎತ್ತಿರುವ ಮಾರುಕಟ್ಟೆಯಲ್ಲೂ ವ್ಯಾಪಾರ ಜೋರಾಗಿ ನಡೆಯಿತು. ಗೌರಿ, ಗಣೇಶ ಮೂರ್ತಿಗಳು,ಬಾಳೆಕಂದು,  ಪೂಜೆಗೆ ಬೇಕಾದ ವಸ್ತುಗಳನ್ನು ಜನರು ಖರೀದಿಸಿದರು. ಕೋವಿಡ್‌ ಹಿನ್ನೆಲೆ ಕೆ.ಆರ್‌ ಮಾರುಕಟ್ಟೆ ಬಂದ್‌ ಆಗಿದ್ದು ಆ ಹಿನ್ನೆಲೆಯಲ್ಲಿ ಬೆಂಗಳೂರು ಅಕ್ಕಪಕ್ಕದ ಹಳ್ಳಿಗಳಿಂದ ತಂದುರಸ್ತೆಯಂಚುಗಳಲ್ಲಿ ಹೂವು ಹಣ್ಣು ಮಾರಾಟ ಮಾಡಿದರು. ಕೋವಿಡ್‌ನಿಂದ ಈ ಹಿಂದೆ ಗಣೇಶೋತ್ಸವಕ್ಕೆ ನಿಷೇಧ ಹೇರಲಾಗಿದೆ ಎಂದಾಗ ಮೂರ್ತಿ ತಯಾರಕರು ಆತಂಕ ಗೊಂಡಿದ್ದರು. ಆದರೆ ಹಬ್ಬಕ್ಕೆ ಐದಾರು ದಿನ ಬಾಕಿ ಇರುವಾಗ ಸಾರ್ವಜನಿಕ ಗಣೇಶೋತ್ಸವಕ್ಕೆ ಸರಕಾರ ಅವಕಾಶ ನೀಡಿದ ಹಿನ್ನೆಲೆಯಲ್ಲಿಮೂರ್ತಿಗಳು ಭರದಿಂದ  ಮಾರಾಟವಾಗುತ್ತಿವೆ. ಜಯನಗರ, ಜೆ,ಪಿ.ನಗರ, ಆರ್‌.ವಿ.ರಸ್ತೆ, ಬಸವನಗುಡಿ, ಮಲ್ಲೇಶ್ವರ ಸೇರಿದಂತೆ 150 ರೂ.ನಿಂದ 25 ಲಕ್ಷದವರೆಗಿನ ಮೂರ್ತಿಗಳು ಕೂಡ ಮಾರಾಟಕ್ಕಿವೆ. ಪರಿಸರಪ್ರಿಯ ಗಣಪತಿ ಖರೀದಿ ಜೋರಾಗಿತ್ತು. ಕೆಲವು ಕಂಪನಿಗಳು ಗಣೇಶ ಮೂರ್ತಿಗಳನ್ನು ಉಡುಗೊರೆ ನೀಡುವ ಸಲುವಾಗಿ ಮೂರ್ತಿ ತಯಾರಕರಿಂದ ಬಲ್ಕ್ ಆಗಿ ಖರೀದಿಸಿವೆ ಎಂದು ವಿಗ್ರಹ ತಯಾರಕ ಮೂರ್ತಿ ಹೇಳಿದರು.

ಸರಳ ಗಣೇಶ ಚತುರ್ಥಿ ಆಚರಣೆಗೆ ಮನವಿ : ನಗರದಲ್ಲಿ ಕೋಚಿಡ್ ಭೀತಿ ಇರುವ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕರು ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಿಸುವಂತೆ ಬಿಬಿಎಂಪಿ ಕೋರಿದೆ. ಗಣೇಶ ಚತುರ್ಥಿ ವೇಳೆವಾರ್ಡ್‌ಗೆ ಒಂದೇ ಗಣೇಶಮೂರ್ತಿ ಪ್ರತಿಷ್ಠಾಪನೆ ಅನುಮತಿಗೆ  ಏಕಗವಾಕ್ಷಿ ಪದ್ಧತಿ, ಗರಿಷ್ಠ ಮೂರು ದಿನಕ್ಕೆ ಗಣೇಶಮೂರ್ತಿ ವಿಸರ್ಜಿಸುವುದು ಸೇರಿದಂತೆ ಹಲವು ಷರತ್ತು ಹಾಗೂ ಕೆಲವು ನಿರ್ದಿಷ್ಟ ಸೂಚನೆಗಳನ್ನು ನೀಡಿದೆ. ಮೂರು ದಿನಗಳಿಗೆ ಅಷ್ಟೇ ಅವಕಾಶ: ಪಾಲಿಕೆಯ ಪ್ರತಿ ವಾರ್ಡ್‌ನಲ್ಲಿ ಗರಿಷ್ಠ 4 ಅಡಿ ಎತ್ತರದಒಂದು ಗಣೇಶಮೂರ್ತಿ ಪ್ರತಿಷ್ಠಾಪಿಸಬಹುದು.  ಆದರೆ, ಆ.22ರಿಂದ 24ರ ವರೆಗೆ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ನೀಡಲಾಗುತ್ತದೆ. ಈ ಬಾರಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಗಣೇಶಮೂರ್ತಿಗಳನ್ನು ಗರಿಷ್ಠ ಮೂರು ದಿನದ ಬಳಿಕ ವಿಸರ್ಜಿಸಬೇಕು. ಸಾರ್ವಜನಿಕರು ತಮ್ಮ ಮನೆಗಳಲ್ಲೇ ಪರಿಸರ ಸ್ನೇಹಿ ಗಣೇಶಮೂರ್ತಿ ಪ್ರತಿಷ್ಠಾಪಿಸಬೇಕು ಮತ್ತು ಮನೆಯಲ್ಲೇ ವಿಸರ್ಜಿಸಬೇಕು ಎಂದು ಪಾಲಿಕೆ ತಿಳಿಸಿದೆ.

ಸಂಚಾರಿ ವಾಹನದಲ್ಲೇ ವಿಸರ್ಜನೆ: ಸರ್ಕಾರವೂ ಈಗಾಗಲೇ ನಿರ್ದೇಶನನೀಡಿರುವಂತೆ ಈ ಬಾರಿ ಯಾವುದೇ  ಮೆರವಣಿಗೆ ಅವಕಾಶವಿಲ್ಲ. ಸಾರ್ವ ಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಪಾಲಿಕೆ ನಿಯೋಜಿಸುವ ಸಂಚಾರಿ ವಾಹನದಲ್ಲಿಯೇ ವಿಸರ್ಜಿಸಬೇಕು ಎಂದು ಬಿಬಿಎಂಪಿ ಆಯುಕ್ತರು ನಿರ್ದೇಶನ ನೀಡಿದ್ದಾರೆ.

ಎಚ್ಚರಿಕೆ: ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಹಲವು ಷರತ್ತುಗಳನ್ನು ವಿಧಿಸಿರುವ ಪಾಲಿಕೆ ಮಾರ್ಗಸೂಚಿ ಪಾಲನೆ ಹಾಗೂ ನಿಯಮಗಳನ್ನು ಉಲ್ಲಂಘನೆಮಾಡುವವರ ಮೇಲೆ ವಿಪತ್ತು ನಿರ್ವಹಣಾ  ಕಾಯ್ದೆಯಡಿ ಕಾನೂನು ಕ್ರಮ ತೆಗೆದುಕೊಳ್ಳವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಕೂರಿಸುವ ಗಣೇಶ ಮೂರ್ತಿಗಳನ್ನು ಮನೆಗಳಲ್ಲೇ ವಿಸರ್ಜನೆ ಮಾಡುವ ಮೂಲಕ ಸಹಕಾರ ನೀಡಬೇಕು. ಸರಳ ಹಾಗೂ ಪರಿಸರ ಸ್ನೇಹಿಯಾಗಿ ಗಣೇಶೋತ್ಸವ ಆಚರಿಸಿ, ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಹಕರಿಸಬೇಕು. -ಎನ್‌.ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.