32 ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ
Team Udayavani, Aug 17, 2019, 3:05 AM IST
ಬೆಂಗಳೂರು: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವ ನಿಟ್ಟಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್ ಬಿಬಿಎಂಪಿ, ಪೊಲೀಸ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದರು.
ಸಭೆಯಲ್ಲಿ ಗಣೇಶ ಮೂರ್ತಿಗಳನ್ನು ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ಉಂಟಾಗುವ ಮಾಲಿನ್ಯ ಹಾಗೂ ಜಲಮೂಲಗಳ ಸಂರಕ್ಷಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಯಿತು.
ಅವುಗಳಲ್ಲಿ ಪ್ರಮುಖವಾಗಿ ಪಿಒಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪರವಾನಗಿ ನೀಡದಿರುವುದು. ಜತೆಗೆ ಅನಧಿಕೃತವಾಗಿ ತಯಾರಿ ಅಥವಾ ಮಾರಾಟ ಮಾಡುವ ವ್ಯಕ್ತಿ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಲಾಯಿತು.
ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ 32 ಕಲ್ಯಾಣಿ, 100 ಮೊಬೈಲ್ ಟ್ಯಾಂಕರ್‌ಗಳನ್ನು ನಿಯೋಜಿಸಲಾಗಿದ್ದು, ವಾರ್ಡ್‌ಮಟ್ಟದಲ್ಲಿ ಪೊಲೀಸರ ಸಹಯೋಗದಲ್ಲಿ ಸಮಿತಿ ರಚಿಸಿ ಸೂಕ್ತ ವಿಲೇವಾರಿಗೆ ಕ್ರಮಕೈಗೊಳ್ಳುವ ತೀರ್ಮಾನಕ್ಕೆ ಬರಲಾಗಿದೆ. ಮೂರ್ತಿ ವಿಸರ್ಜನಾ ಸ್ಥಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಬಿಬಿಎಂಪಿ ಕ್ರಮವಹಿಸಬೇಕಿದೆ.
ಜಲಮಾಲಿನ್ಯಕ್ಕೆ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಗಣೇಶ ಮೂರ್ತಿಗಳು ಹಾಗೂ ಮೂರ್ತಿಗೆ ಲೇಪಿಸಿದ ರಾಸಾಯನಿಕ ಬಣ್ಣಗಳು ಪ್ರಮುಖ ಕಾರಣವಾಗಿದ್ದು, ಸಾರ್ವಜನಿಕರು ಮಣ್ಣಿನ ಗಣಪತಿಯೊಂದಿಗೆ ಹಬ್ಬ ಆಚರಿಸಿ ಸ್ಥಳೀಯ ಸಂಸ್ಥೆ ನಿಯೋಜಿಸಿದ ಸ್ಥಳದಲ್ಲಿಯೇ ಮೂರ್ತಿ ವಿಸರ್ಜನೆ ಮಾಡಬೇಕು, ಸಾರ್ವಜನಿಕವಾಗಿ ಮೂರ್ತಿ ಕೂರಿಸಲು ಕಡ್ಡಾಯ ಅನುಮತಿ ಪಡೆಯುವಂತೆ ತಿಳಿಸಿದೆ.
ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ವಿಸರ್ಜಿಸದೆ ಉಳಿದಿರುವ ಪಿಒಪಿ ಅಥವಾ ಬಣ್ಣದ ವಿಗ್ರಹಗಳನ್ನು ತನಿಖೆ ಮಾಡಿ ತನ್ನ ಸುಪರ್ದಿಗೆ ತೆಗೆದುಕೊಂಡು ಮತ್ತು ಅಂತಹ ವಸ್ತುಗಳನ್ನು ಸ್ಥಳೀಯ ಸಂಸ್ಥೆಗಳಲ್ಲಿ ಇರುವ ಘನ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಬೇಕು. ಬೇರೆ ರಾಜ್ಯದಿಂದ ಬರುವಂತಹ ಪಿಒಪಿ ವಿಗ್ರಹಗಳನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಜಿಲ್ಲೆ ಅಥವಾ ತಾಲ್ಲೂಕುಗಳಲ್ಲಿ ತಪಾಸಣಾ ಕೇಂದ್ರ ತೆರೆಯಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.