ಕಂಟೈನ್ಮೆಂಟ್ ಝೋನ್ ಗಳಲ್ಲಿ ಕಸದ ಸಮಸ್ಯೆ
Team Udayavani, May 1, 2020, 3:58 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚು ಕಾಣಿಸಿ ಕೊಂಡ ಹಿನ್ನೆಲೆಯಲ್ಲಿ ಸೀಲ್‌ಡೌನ್ ಮಾಡಲಾಗಿರುವ ಪಾದರಾಯನ ಪುರ ಹಾಗೂ ಕಂಟೈನ್ಮೆಂಟ್ ಝೋನ್‌ಗಳಲ್ಲಿ ತ್ಯಾಜ್ಯ ಸಮಸ್ಯೆ ಎದುರಾಗಿದೆ.
ಪಾದರಾಯನಪುರದಲ್ಲಿ ಕೋವಿಡ್ 19 ಸೋಂಕು ದೃಢಪಟ್ಟ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿರದ ವ್ಯಕ್ತಿಗಳಿಗೂ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಈ ಭಾಗದಲ್ಲಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ, ಈ ಭಾಗದಲ್ಲೇ ಹೆಚ್ಚು ಪೌರಕಾರ್ಮಿಕರಿದ್ದು, ಸೀಲ್‌ಡೌನ್‌ನಿಂದಾಗಿ ಪೌರಕಾರ್ಮಿಕರೂ ಉದ್ಯೋಗಕ್ಕೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಈ ಭಾಗದಲ್ಲಿ ಕಸ ವಿಲೇವಾರಿ ಸಮಸ್ಯೆ ಸೃಷ್ಟಿಯಾಗಿದೆ.
ಜಾಗೃತಿ ಮೂಡಿಸುತ್ತೇವೆ: ಮೇಯರ್ ಎಂ.ಗೌತಮ್‌ಕುಮಾರ್ ಮಾತನಾಡಿ ನಗರದಲ್ಲಿ ಲಕ್ಷಾಂತರ ಜನ ಮಾಸ್ಕ್ ಬಳಸುತ್ತಿದ್ದಾರೆ. ಇದರ ವಿಲೇವಾರಿಯಲ್ಲಿ ಲೋಪವಾಗುತ್ತಿದೆ. ಇದರಿಂದ ಪೌರಕಾರ್ಮಿಕರಲ್ಲೂ ಕೋವಿಡ್ ಭೀತಿ ಎದುರಾಗಿದ್ದು, ಈ ಸಂಬಂಧ ಜಾಗೃತಿ ಮೂಡಿಸಲಾಗುವುದು. ಪೌರಕಾರ್ಮಿಕರಿಗೆ ಹೊಂಗಸಂದ್ರದಲ್ಲಿ ನೀಡಲಾಗಿರುವ ರಕ್ಷಣಾ ಕವಚದ ರೀತಿಯಲ್ಲೇ ಉಳಿದಕಡೆಯೂ ನೀಡಲು ನಿರ್ದೇಶನ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.