Gas geyser: ಗ್ಯಾಸ್ ಗೀಸರ್ ಸೋರಿಕೆಯಿಂದ ಯುವತಿ ಸಾವು
Team Udayavani, Dec 26, 2023, 10:30 AM IST
ಬೆಂಗಳೂರು: ಮನೆಯಲ್ಲಿ ಸ್ನಾನ ಮಾಡುವಾಗ ಯುವತಿಯೊಬ್ಬಳು ಕುಸಿದು ಬಿದ್ದು ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೌಸಿಂಗ್ ಬೋರ್ಡ್ ನಿವಾಸಿ ರಾಜೇಶ್ವರಿ(23) ಮೃತ ಯುವತಿ. ಡಿ.20ರಂದು ಮಧ್ಯಾಹ್ನ 2 ಗಂಟೆಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿ.ಕಾಂ ಪದವಿ ವ್ಯಾಸಂಗ ಮಾಡಿದ್ದ ರಾಜೇಶ್ವರಿ, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂಬಂಧಿಕರೊಬ್ಬರ ಮದುವೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಲಸಕ್ಕೆ ರಜೆ ಹಾಕಿದ್ದರು. ಡಿ.20ರಂದು ಮಧ್ಯಾಹ್ನ ಸ್ನಾನ ಮಾಡಲು ಬಾತ್ ರೂಮ್‌ಗೆ ಹೋಗಿದ್ದಾರೆ. 20 ನಿಮಿಷ ಕಳೆದರೂ ಬಾತ್ ರೂಮ್‌ನಿಂದ ರಾಜೇಶ್ವರಿ ಹೊರಗೆ ಬಂದಿಲ್ಲ. ಅನುಮಾನಗೊಂಡು ಕುಟುಂಬದ ಸದಸ್ಯರು ಬಾತ್ ರೂಮ್ ಬಾಗಿಲು ಬಡಿದಿದ್ದಾರೆ. ಆದರೂ ಪ್ರತಿಕ್ರಿಯೆ ಬಂದಿಲ್ಲ. ಬಳಿಕ ಬಾತ್‌ರೂಮ್‌ನ ಕಿಟಕಿ ಬಳಿ ತೆರಳಿ ನೋಡಿದಾಗ, ರಾಜೇಶ್ವರಿ ಅಸ್ವಸ್ಥರಾಗಿ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಬಾಗಿಲು ಒಡೆದು, ಒಳ ಹೋಗಿ, ಆಕೆಗೆ ಬಟ್ಟೆ ತೊಡಿಸಿ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ರಾಜೇಶ್ವರಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ವಿಷಯ ತಿಳಿದು ಪೊಲೀಸರು ಮೃತಳ ಮನೆಗೆ ತೆರಳಿ ಪರಿಶೀಲಿಸಿದ್ದಾರೆ.
ಗ್ಯಾಸ್ ಸೋರಿಕೆಯಿಂದ ಸಾವು?: ಕುಟುಂಬ ಸದಸ್ಯರು ಗ್ಯಾಸ್ ಗೀಸರ್ ಸೋರಿಕೆಯಿಂದ ರಾಜೇಶ್ವರಿ ಮೃತಪಟ್ಟಿದ್ದಾಳೆ ಎಂದು ಹೇಳುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.