ಗೌರಿ ಲಂಕೇಶ್ ಹತ್ಯೆ: ದೋಷಾರೋಪ ಪಟ್ಟಿ ಇಂದು
Team Udayavani, May 30, 2018, 11:54 AM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು 560 ಪುಟಗಳ ಸಂಪೂರ್ಣ ದೋಷಾರೋಪ ಪಟ್ಟಿ ಸಿದ್ಧಪಡಿಸಿದ್ದು, ಬುಧವಾರ ಬುಧವಾರ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
ಮತ್ತೂಂದೆಡೆ ಅಕ್ರಮ ಶಸ್ತ್ರಾಸ್ತ್ರ ಹಾಗೂ ಸಾಹಿತಿ ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಂಡ್ಯ ಮೂಲದ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನ ಹೇಳಿಕೆಯನ್ನಾಧಿರಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಿರಂತವಾಗಿದೆ.
ಶಿಕಾರಿಪುರ ಮೂಲದ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್, ಮಹಾರಾಷ್ಟ್ರದ ಅಮೋಲ್ ಕಾಳೆ, ಅಮಿತ್ ದೇಗ್ವೇಕರ್ ಮತ್ತು ವಿಜಯಪುರದ ಮನೋಹರ್ ದುಂಡಪ್ಪ ಯವಡೆಯನ್ನು ಬಂಧಿಸಿದ್ದು, ಮತ್ತೂಬ್ಬ ಆರೋಪಿ ದಾದಾ ಅಲಿಯಾಸ್ ನಿಹಾಲ್‌ಗಾಗಿ ಹುಡುಕಾಟ ನಡೆಯುತ್ತಿದೆ.
ಮೇ 20 ರಂದು ಪ್ರವೀಣ್‌ನನ್ನು ಬಂಧಿಸಿದ್ದು, ಈತನ ಹೇಳಿಕೆಯನ್ನಾಧರಿಸಿ ದಾವಣಗೆರೆಯಲ್ಲಿ ತಲೆಮರೆಸಿಕೊಂಡಿದ್ದ ಇತರೆ ಮೂವರನ್ನು ಬಂಧಿಸಲಾಗಿದೆ. ಈ ನಾಲ್ವರನ್ನು ಉಪ್ಪಾರಪೇಟೆ ಪೊಲೀಸರು ಹಾಗೂ ಎಸ್‌ಐಟಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.
ನಾಲ್ವರು ಆರೋಪಿಗಳು ಹೊಟ್ಟೆ ಮಂಜನ ಜತೆ ನಿರಂತರ ಸಂಪರ್ಕದಲ್ಲಿದ್ದರು. ಅಲ್ಲದೇ, ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದರು. ಇದರೊಂದಿಗೆ ಹೊಟ್ಟೆ ಮಂಜ ಕೂಡ ಭಗವಾನ್ ಹತ್ಯೆ ಸಂಚಿನ ಬಗ್ಗೆ ಮಾಹಿತಿ ನೀಡಿದ್ದ. ಇದನ್ನು ಆಧರಿಸಿ ನಾಲ್ವರನ್ನು ಬಂಧಿಸಲಾಗಿದೆ.
ಈ ಆರೋಪಿಗಳನ್ನು ಗೌರಿಲಂಕೇಶ್ ಹತ್ಯೆ ಪ್ರಕರಣದಲ್ಲಿ ಕೈವಾಡ ಇರುವ ಸಂಬಂಧ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಹೇಳಿಕೆಯನ್ನಾಧರಿಸಿ ಕರ್ನಾಟಕ, ಮಹಾರಾಷ್ಟ್ರದ ಏಳು ಕಡೆಗಳಲ್ಲಿ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಹೊಟ್ಟೆ ಮಂಜ ಮತ್ತೆ ವಶಕ್ಕೆ: ಫೆ.18 ರಂದು ಮೆಜೆಸ್ಟಿಕ್‌ನಲ್ಲಿ ಶಸ್ತ್ರಾಸ್ತ್ರ ಸಾಗಣೆ ಆರೋಪದಡಿ ಮದ್ದೂರಿನ ಕೆ.ಟಿ.ನವೀನ್‌ಕುಮಾರ್ (ಹೊಟ್ಟೆ ಮಂಜ) ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಇದರೊಂದಿಗೆ ನ್ಯಾಯಾಲದ ಮುಂದೆ ಮಂಪರು ಪರೀಕ್ಷೆಗೆ ಒಪ್ಪಿಗೆ ಸೂಚಿಸಿ, ಪರೀಕ್ಷೆಗೆಂದು ಗುಜರಾತ್‌ಗೆ ಕರೆದೊಯ್ದಾಗ ನಿರಾಕರಿಸಿದ ಮಂಜನನ್ನು ಬುಧವಾರ ಮತ್ತೂಮ್ಮೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ವಶಕ್ಕೆ ಪಡೆಯಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ಹೇಳಿದ್ದಾರೆ.
ಬುಧವಾರ ದೋಷಾರೋಪ ಪಟ್ಟಿ ಸಲ್ಲಿಕೆ: ಎಸ್‌ಐಟಿ ಅಧಿಕಾರಿಗಳು 560ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿ ಸಿದ್ಧಪಡಿಸಿದ್ದು, ಬುಧವಾರ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಈ ವೇಳೆ ಸುಮಾರು 250ಕ್ಕೂ ಅಧಿಕ ಮಂದಿಯ ಸಾಕ್ಷ್ಯಾಗಳ ಹೇಳಿಕೆ, ಸಂಚು ರೂಪಿಸಿದ್ದು ಹೇಗೆ?, ಪ್ರಕರಣದಲ್ಲಿ ಇದುವರೆಗೂ ಎಷ್ಟು ಮಂದಿಯನ್ನು ದಸ್ತಗಿರಿ ಮಾಡಲಾಗಿದೆ ಸೇರಿದಂತೆ ಮಾಹಿತಿ ದೋಷಾರೋಪ ಪಟ್ಟಿಯಲ್ಲಿ ಸೇರಿಸಲಾಗಿದೆ.
ಹೊಟ್ಟೆ ಮಂಜ ಜಾಮೀನಿಗೆ ಅರ್ಜಿ: ಹೊಟ್ಟೆ ಮಂಜನನ್ನು ಬಂಧಿಸಿದ ಎಸ್‌ಐಟಿ ಅಧಿಕಾರಿಗಳು ಪ್ರಕರಣ(ಅಕ್ರಮ ಶಸ್ತ್ರಾಸ್ತ್ರ)ಕ್ಕೆ ಸಂಬಂಧಿಸಿದಂತೆ ಇದುವರೆಗೂ ಜಾರ್ಜ್‌ಶೀಟ್ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಬುಧವಾರ ಆರೋಪಿ ಪರ ವಕೀಲರು ಹೊಟ್ಟೆ ಮಂಜನಿಗೆ ಜಾಮೀನು ನೀಡುವಂತೆ ಮನವಿ ಮಾಡಲಿದ್ದಾರೆ. ಜತೆಗೆ ಪ್ರಕರಣ ನಿಮಿತ್ತ ಮತ್ತೂಮ್ಮೆ ನವೀನ್ ಕುಮಾರ್‌ನನ್ನು ವಶಕ್ಕೆ ಪಡೆಯಲಿದ್ದಾರೆ.
ಗೌರಿ ಹಂತಕರ ಬಂಧನವಾಗಿಲ್ಲ: ವಿಶೇಷ ತನಿಖಾ ತಂಡ ಪ್ರಕರಣದಲ್ಲಿ ನೂರಾರು ಮಂದಿಯ ಸಾಕ್ಷ್ಯಾಗಳನ್ನು ಸಂಗ್ರಹಿಸಿ ತನಿಖೆ ನಡೆಸಿದರಾದರೂ ಇದುವರೆಗೂ ಒಬ್ಬ ಆರೋಪಿಯನ್ನು ಗೌರಿ ಪ್ರಕರಣದಲ್ಲಿ ಬಂಧಿಸಿಲ್ಲ. ಮತ್ತೂಂದೆಡೆ ಹಿಂದೂಪರ ಸಂಘಟನೆ ಕೈವಾಡವಿದೆ ಎಂಬ ಶಂಕೆ ಮೇಲೆ ಕೆಲ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮುಖಂಡರನ್ನು ವಿಚಾರಣೆ ನಡೆಸಿದ್ದರೂ ಆರೋಪಿಗಳ ಸುಳಿವು ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.