ಸಂಘ ಪರಿವಾರ ವಿರುದ್ಧದ ಟೀಕೆಗೆ ಬಿಜೆಪಿ ಕಿಡಿ
Team Udayavani, Sep 13, 2017, 7:35 AM IST
ಬೆಂಗಳೂರು: ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಸಂಘ ಪರಿವಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಕೆಲವು ವಿಚಾರವಾದಿಗಳ ವಿರುದ್ಧ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ.
ಮಂಗಳವಾರ ಬಿಜೆಪಿ ಚುನಾವಣಾ ಉಸ್ತುವಾರಿಗಳ ಕರ್ನಾಟಕ ದಕ್ಷಿಣ ಭಾಗದ ಕಾರ್ಯಾಗಾರದಲ್ಲಿ ಮಾತನಾಡಿದ ಬಿಜೆಪಿ
ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ ಜೋಶಿ ಮತ್ತು
ಶಾಸಕ ಸಿ.ಟಿ.ರವಿ, ಗೌರಿ ಹತ್ಯೆ ಪ್ರಕರಣದಲ್ಲಿ ಸಂಘ ಪರಿವಾರವನ್ನು ಎಳೆತಂದಿರುವುದು ಮತ್ತು ಪ್ರತಿ ಸಂದರ್ಭದಲ್ಲೂ ಆರ್‌ಎಸ್‌ಎಸ್, ಬಿಜೆಪಿಯನ್ನು ಎಳೆತರುವ ಪ್ರಯತ್ನದ ವಿರುದ್ಧ ಕಿಡಿ ಕಾರಿದರು.
ಗೌರಿ ಹತ್ಯೆ ಖಂಡಿಸಿ ನಡೆಯುತ್ತಿರುವ ಪ್ರತಿರೋಧ ಸಮಾವೇಶವನ್ನು ಯಾರ ವಿರುದ್ಧ ಯಾರು ಮಾಡುತ್ತಿದ್ದಾರೆ ಎಂದು
ಪ್ರಶ್ನಿಸಿದರಲ್ಲದೆ, ಕಾಂಗ್ರೆಸ್ ಸರಕಾರದ ವೈಫಲ್ಯ ಮುಚ್ಚಿಕೊಳ್ಳಲು ತಥಾಕಥಿತ ವಿಚಾರವಾದಿಗಳು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಮತ್ತು ರಾಮ ಚಂದ್ರ ಗುಹಾ ಮೊದಲಾದವರನ್ನು ಪೊಲೀಸರು ಮೊದಲು ವಿಚಾರಣೆಗೊಳಪಡಿಸಬೇಕು. ಆರೋಪಿಗಳ ಪತ್ತೆಗೆ ಸಹಾಯ ಮಾಡಿದವರಿಗೆ ನೀಡುವ ಬಹುಮಾನದ ಮೊತ್ತವನ್ನು ಅವರಿಗೇ ನೀಡಬೇಕು ಎಂದು ಹೇಳಿದರು.
ಈ ಮಧ್ಯೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್, ಗೌರಿ ಲಂಕೇಶ್
ಅವರ ಚಿಂತನೆಗಳನ್ನು ವಿರೋಧಿಸುತ್ತಲೇ ಬಂದಿದ್ದ ಬಿಜೆಪಿ ಅವರ ಹತ್ಯೆಯನ್ನೂ ಅಷ್ಟೇ ತೀಕ್ಷ್ಣವಾಗಿ ಖಂಡಿಸಿದೆ. ಆದರೆ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನವರೇ ತನಿಖೆಯ ದಿಕ್ಕುತಪ್ಪಿಸುವ ರೀತಿಯಲ್ಲಿ ಸಂಘ ಪರಿವಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದನ್ನು ಗಮನಿಸಿದರೆ ಅವರು ಯಾರನ್ನೋ ರಕ್ಷಿಸಲು ಹೊರಟಿದ್ದಾರೆ ಎಂಬಂತೆ ಭಾಸವಾಗುತ್ತಿದೆ ಎಂದು ಆರೋಪಿಸಿದರು.
ಆರ್‌ಎಸ್‌ಎಸ್ ಸೇರಿ ಸಂಘ ಪರಿವಾರ ದೇಶಭಕ್ತಿ ಮೂಡಿಸುವ ಕೆಲಸ ಮಾಡುತ್ತದೆಯೇ ಹೊರತು, ಕೊಲೆ ಸುಲಿಗೆಗಳನ್ನಲ್ಲ. ಗೌರಿ ಜತೆ ಅನೇಕ ವೈಚಾರಿಕ ಸಂಘರ್ಷವಿದ್ದರೂ, ಕೊಲೆ ಮಾಡುವ ಕೆಲಸಕ್ಕೆ ಸಂಘಪರಿವಾರದವರು ಇಳಿಯುವುದಿಲ್ಲ. ಸರ್ಕಾರಕ್ಕೆ ಅಷ್ಟು ಅನುಮಾನವಿದ್ದರೆ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಲಿ.
– ಕೆ.ಎಸ್.ಈಶ್ವರಪ್ಪ, ಮೇಲ್ಮನೆ ಪ್ರತಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಭಾರತೀಯ ಸಂಸ್ಕೃತಿ ಮತ್ತು ಭಗವದ್ಗೀತೆ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.