ಗೌರಿ ಹತ್ಯೆ: ಮೋಹನ್ ನಾಯಕ್ ಅರ್ಜಿ ವಜಾ
Team Udayavani, Feb 12, 2019, 6:37 AM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಬಾಡಿಗೆ ಮನೆ ಕೊಡಿಸಿದ ಆರೋಪದಲ್ಲಿ ಎಸ್ಐಟಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಡಾ.ಮೋಹನ್ ನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ದಕ್ಷಿಣ ಕನ್ನಡದ ಸಂಪಾಜೆಯ ಮೋಹನ್ ನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ ಬಿ.ಎ. ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಅದನ್ನು ಪ್ರಕಟಿಸಿತು.
ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ಸೂಚನೆಯ ಮೇರೆಗೆ ಮೋಹನ್, ಆಕ್ಯುಪಂಚರ್ ಕ್ಲಿನಿಕ್ ನಡೆಸುವ ಸೋಗಿನಲ್ಲಿ ಮೈಸೂರು ರಸ್ತೆಯ ಕುಂಬಳಗೋಡು ಬಳಿ ಬಾಡಿಗೆ ಮನೆಯೊಂದನ್ನು ಪಡೆದಿದ್ದರು. ಅದೇ ಮನೆಯಲ್ಲಿ ಗೌರಿ ಹಂತಕರ ತಂಡ ಸಭೆ ಸೇರುತ್ತಿತ್ತು ಹಾಗೂ ಹತ್ಯೆಗೆ ಬಳಕೆ ಮಾಡಿದ್ದ ಬೈಕ್ ನಿಲುಗಡೆ ಮಾಡಲಾಗಿತ್ತು ಎಂಬ ಆರೋಪದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) 2018ರ ಜು.18ರಂದು ಮೋಹನ್ ನಾಯಕ್ನನ್ನು ಬಂಧಿಸಿತ್ತು.
ಪ್ರಕರಣದ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ 2018ರ ಅ.25ರಂದು ವಜಾಗೊಳಿಸಿತ್ತು. ಇದರಿಂದ ಮೋಹನ್ ನಾಯಕ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.