ಗೌರಿ ಹತ್ಯೆ ಭಯೋತ್ಪಾದನಾ ಕೃತ್ಯ ಎಂದು ಘೋಷಿಸಿ


Team Udayavani, Oct 3, 2017, 11:59 AM IST

gauri-hatye.jpg

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌, ಸಂಶೋಧಕ ಎಂ.ಎಂ.ಕಲಬುರ್ಗಿ, ಚಿಂತಕರಾದ ನರೇಂದ್ರ ದಾಬೋಲ್ಕರ್‌, ಪನ್ಸಾರೆ ಹತ್ಯೆಗಳನ್ನು ಭಯೋತ್ಪದನಾ ಕೃತ್ಯ ಎಂದು ಘೋಷಿಸಬೇಕು ಎಂದು ಗೌರಿ ಲಂಕೇಶ್‌ ಹತ್ಯಾ ವಿರೋಧಿ ವೇದಿಕೆ ಆಗ್ರಹಿಸಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ವೇದಿಕೆಯ ರಾಜ್ಯ ಸಂಚಾಲಕಿ ಕೆ.ನೀಲಾ, ಸಂಘ ಪರಿವಾರದ ಜತೆ ಸಂಪರ್ಕದಲ್ಲಿರುವವರೇ ಗೌರಿ ಲಂಕೇಶ್‌ ಅವರನ್ನು ಹತ್ಯೆಗೈದಿದ್ದಾರೆ ಎಂದು ಆರೋಪಿಸಿದರು.

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಎಸ್‌ಐಟಿ ತನಿಖೆಯನ್ನು ತೀವ್ರಗೊಳಿಸಿ ಹಂತಕರನ್ನು ಶೀಘ್ರದಲ್ಲೇ ಬಂಧಿಸಬೇಕು. ಗೌರಿ ಹತ್ಯೆಯನ್ನು ಸಂಭ್ರಮಿಸಿದ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಪ್ರಮುಖವಾಗಿ ಆರೋಪಿಗಳನ್ನು ಸೆರೆ ಹಿಡಿಯುವ ಜತೆಗೆ, ಕೊಲೆಗೆ ಪ್ರೇರಣೆ ನೀಡಿದ ಸಂಘಟನೆಗಳ ಹಿನ್ನೆಲೆಯನ್ನು ಬಹಿರಂಗಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಸುಳಿವು ಪತ್ತೆಯಾಗಿಲ್ಲ: ಗೌರಿ ಲಂಕೇಶ್‌ ಹತ್ಯೆಗೈದು ಒಂದು ತಿಂಗಳು ಕಳೆದಿದೆ. ಆದರೆ, ಸರ್ಕಾರ ರಚನೆ ಮಾಡಿರುವ ಎಸ್‌ಐಟಿ ಇದುವರೆಗೂ ಆರೋಪಿಗಳ ಒಂದು ಸಣ್ಣ ಸುಳಿವು ಸಹ ಪತ್ತೆ ಮಾಡಿಲ್ಲ. ಇದನ್ನು ಪ್ರತಿಯೊಬ್ಬರು ಖಂಡಿಸಬೇಕಿದೆ. ಗೌರಿ ಲಂಕೇಶ್‌ ಹತ್ಯೆಯನ್ನು ಕೆಲ ವಿಕೃತ ಮನಸ್ಸುಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಿಸಿವೆ. ಇತಂಹ 100ಕ್ಕೂ ಅಧಿಕ ಮಂದಿಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಆದರೆ, ಕೆಲವರನ್ನು ಮಾತ್ರ ವಿಚಾರಣೆ ನಡೆಸಿದ್ದಾರೆ. ಮೂಲ ಕಾರಣಕರ್ತರನ್ನು ವಿಚಾರಣೆ ಮಾಡಿಲ್ಲ. ಹೀಗಾಗಿ ಎಸ್‌ಐಟಿ ಅಧಿಕಾರಿಗಳಿಗೆ ಆರೋಪಿಗಳ ಬಗ್ಗೆ ಮಾಹಿತಿ ಸಿಗುತ್ತಿಲ್ಲ ಎಂದು ಆರೋಪಿಸಿದರು.

ಗೌರಿ ಹತ್ಯೆ ನಮ್ಮೆಲ್ಲರಲ್ಲಿ ಆತಂಕ ಮೂಡಿಸಿದೆ. ಜತೆಗೆ ದೇಶದೆಲ್ಲೆಡೆ ತೀವ್ರ ಪ್ರತಿರೋಧ ಹುಟ್ಟು ಹಾಕಿದೆ. ಹತ್ಯೆ ಖಂಡಿಸಿ ದೇಶದ ನೂರಾರು ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಅಷ್ಟೇ ಅಲ್ಲದೇ, ಫ್ಯಾಸಿಸ್ಟ್‌ ಶಕ್ತಿಗಳ ಕ್ರೌರ್ಯ ಎದುರಿಸಲು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಿಕೊಳ್ಳಲು ಇನ್ನೂ ಹೆಚ್ಚಿನ ಸಂಘಟಿತ ಹೋರಾಟದ ಅಗತ್ಯವಿದೆ. ಇದಕ್ಕೆ ಎಲ್ಲರೂ ಒಟ್ಟಾಗಬೇಕಿದೆ ಎಂದರು. ಸುದ್ದಿಗೋಷ್ಠಿಯಲ್ಲಿ  ಪ್ರೊ.ಎಸ್‌.ಜಿ. ಸಿದ್ದರಾಮಯ್ಯ, ಗೌರಮ್ಮ, ಅನಂತನಾಯಕ್‌, ನರಸಿಂಹಮೂರ್ತಿ ದೊಡ್ಡಿಪಾಳ್ಯ ಉಪಸ್ಥಿತರಿದ್ದರು.

ಅ.5ರಂದು ದೆಹಲಿಯಲ್ಲಿ ಹೋರಾಟ: ರಾಷ್ಟಮಟ್ಟದಲ್ಲಿ ಗೌರಿ ಲಂಕೇಶ್‌ ಹತ್ಯೆ ಬಗ್ಗೆ ಆಕ್ರೋಶಗಳು, ಆತಂಕಗಳು ಮೂಡಿ ಬಂದರೂ ರಾಜ್ಯ ತನಿಖಾ ತಂಡ ತನ್ನ ತನಿಖೆಯ ವೇಗ ಹೆಚ್ಚಿಸುತ್ತಿಲ್ಲ. ಹೀಗಾಗಿ ಅ.5ರಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಬೃಹತ್‌ ರ್ಯಾಲಿ ನಡೆಸಲು ವೇದಿಕೆ ಸಿದ್ಧತೆ ನಡೆಸಿದೆ. ಇದಕ್ಕೆ ಕಲಾವಿದರು, ಸಾಹಿತಿಗಳು, ಪತ್ರಕರ್ತರು, ವಿದ್ಯಾರ್ಥಿಗಳು, ಪ್ರಗತಿಪರ ಸ್ವಾಮೀಜಿಗಳು, ಚಿಂತಕರು ಭಾಗಿಯಾಗಲಿದ್ದಾರೆ. ಇದೇ ವೇಳೆ ದೇಶದ ವಿವಿಧೆಡೆ ಹೋರಾಟಗಳು ನಡೆಯಲಿವೆ ಎಂದು ನೀಲಾ ತಿಳಿಸಿದರು.

ಟಾಪ್ ನ್ಯೂಸ್

Electricity

Adani;ಬಿಲ್‌ ಕೊಡದ್ದಕ್ಕೆ ಬಾಂಗ್ಲಾಕ್ಕೆ ಆಂಶಿಕ ವಿದ್ಯುತ್‌

1-adsadsa

Pakistan;ಬಾಂಬ್‌ ದಾಳಿಗೆ 5 ಮಕ್ಕಳು ಸೇರಿ 9 ಜನ ಸಾ*ವು

1-a-chenab

China ಚಿತಾವಣೆ ಹಿನ್ನೆಲೆ: ಚೆನಾಬ್‌ ಬ್ರಿಡ್ಜ್ ಮಾಹಿತಿ ಸಂಗ್ರಹಿಸುತ್ತಿರುವ ಪಾಕ್‌

yogi-2

UP; ‘ಜುಡೇಂಗೆ ಜೀತೇಂಗೆ’: ಸಿಎಂ ಯೋಗಿ ಹೇಳಿಕೆಗೆ ಎಸ್‌ಪಿ ತಿರುಗೇಟು!

GST

GST; ಅಕ್ಟೋಬರಲ್ಲಿ 1.87 ಲಕ್ಷ ಕೋಟಿ ಸಂಗ್ರಹ: 2ನೇ ಗರಿಷ್ಠ!

1-a-rb

Rohit Bal; ಖ್ಯಾತ ಫ್ಯಾಷನ್‌ ಡಿಸೈನರ್‌ ರೋಹಿತ್‌ ಬಲ್‌ ನಿಧನ

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-bng

Bengaluru: ಕಾವೇರಿ ನೀರು 6ನೇ ಹಂತದ ಯೋಜನೆಗೆ ಸಿದ್ಧತೆ

18-bng

ಆಟೋದಲ್ಲಿ ಗಾಂಜಾ ಮಾರುತ್ತಿದ್ದ ಚಾಲಕನ ಬಂಧನ

17-bng

Bengaluru: ನಟ ದರ್ಶನ್‌ಗೆ ಜಾಮೀನು: ಸುಪ್ರೀಂಗೆ ಪೊಲೀಸರ ಮೊರೆ?

16-skin

Deepawali: ಪಟಾಕಿ ಅವಘಡ: ಚರ್ಮ ಕಸಿ ಶಸಚಿಕಿತ್ಸೆಗೆ ಸಜ್ಜು

15-bng

Bengaluru: ಆಂಧ್ರಪ್ರದೇಶದಿಂದ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

puttige-2

Udupi; ಗೀತಾರ್ಥ ಚಿಂತನೆ 82: ಮೊದಲು ವಿಷಾದ ಯೋಗ, ಕೊನೆಗೆ ಅಮೃತ ಯೋಗ!

congress

Goa; 8 ಶಾಸಕರ ಅನರ್ಹಕ್ಕೆ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿ ವಜಾ

Suresh Gopi

AMMA; ಶೀಘ್ರದಲ್ಲೇ ನೂತನ ಸಮಿತಿ: ಸುರೇಶ್‌ ಗೋಪಿ

Electricity

Adani;ಬಿಲ್‌ ಕೊಡದ್ದಕ್ಕೆ ಬಾಂಗ್ಲಾಕ್ಕೆ ಆಂಶಿಕ ವಿದ್ಯುತ್‌

sens-2

Deepavali; ಮುಹೂರ್ತ ಟ್ರೇಡಿಂಗ್‌ನಲ್ಲಿ 448 ಅಂಕ ಏರಿದ ಸೆನ್ಸೆಕ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.