ಗೌರಿ ಹಂತಕರ ಬಂಧನ ಶೀಘ್ರ: ರಾಮಲಿಂಗಾರೆಡ್ಡಿ
Team Udayavani, Nov 12, 2017, 11:42 AM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದವರ ಸಂಪೂರ್ಣ ಮಾಹಿತಿ ಲಭ್ಯವಾಗಿದ್ದು, ಶೀಘ್ರವೇ ಹಂತಕರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಪುನರುತ್ಛರಿಸಿದ್ದಾರೆ.
ಬೆಂಗಳೂರು ಪ್ರಸ್ ಕ್ಲಬ್ ಹಾಗೂ ವರದಿಗಾರರ ಕೂಟ ಏರ್ಪಡಿಸಿದ್ದ ಪತ್ರಿಕಾ ಸಂವಾದದಲ್ಲಿ ಪಾಲ್ಗೊಂಡು
ಮಾತನಾಡಿದರು. ಹತ್ಯೆ ಮಾಡಿದವರು ಎಡ ಪಂಥೀಯರೋ, ಬಲಪಂಥೀಯರೋ ಗೊತ್ತಿಲ್ಲ. ಶೂಟ್ ಮಾಡಿದವರು ಯಾರು ಅನ್ನೋದು ಪತ್ತೆಯಾಗಿದೆ.ಆದರೆ, ಸೂಕ್ತ ಸಾಕ್ಷ್ಯ ದೊರೆತ ಮೇಲೆ ಬಹಿರಂಗಪಡಿಸಲಾಗುವುದು ಎಂದು ತಿಳಿಸಿದರು.
ಸಂಶೋಧಕ ಎಂ.ಎಂ.ಕಲಬುರ್ಗಿ ಪ್ರಕರಣದಲ್ಲಿ ಇನ್ನೂ ಹಂತಕರು ಪತ್ತೆಯಾಗಿಲ್ಲ. ಆದರೆ, ಗೌರಿ ಪ್ರಕರಣದಲ್ಲಿ
ಹಂತಕರು ಯಾರು ಎನ್ನುವುದು ಸ್ಪಷ್ಟವಾಗಿದೆ.
ಸಾಕ್ಷ್ಯ ದೊರೆಯುವವರೆಗೂ ತನಿಖೆ ಮುಂದುವರಿಯಲಿದೆ ಎಂದರು. ಪ್ರಕರಣದಲ್ಲಿ ಅನುಮಾನಾಸ್ಪದ ವ್ಯಕ್ತಿಗಳನ್ನು
ನೋಡಿದವರು ನೀಡಿದ ಸಾಕ್ಷ್ಯಗಳ ಆಧಾರದಲ್ಲಿ ರೇಖಾ ಚಿತ್ರ ಬಿಡುಗಡೆ ಮಾಡಲಾಗಿದೆ. ಹಣೆಗೆ ಕುಂಕುಮ
ಇಟ್ಟವರ ರೇಖಾಚಿತ್ರ ಬಿಡುಗಡೆ ಮಾಡಲಾಗಿದೆ ಎಂದು ಬಿಜೆಪಿಯವರು ಇದರಲ್ಲಿ ರಾಜಕೀಯ ಮಾಡುವುದು
ಸರಿಯಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.