ಸರ್ಜಾಪುರ ರಸ್ತೆ ವಿಸ್ತರಣೆ ಸಭೆಗೆ ಜಾರ್ಜ್ ಸೂಚನೆ
Team Udayavani, Jan 10, 2018, 12:02 PM IST
ಬೆಂಗಳೂರು: ಸರ್ಜಾಪುರ ರಸ್ತೆ ವಿಸ್ತರಣೆ ಸಂಬಂಧ ಸ್ಥಳೀಯರೊಂದಿಗೆ ಸಭೆ ನಡೆಸಿ ಸಮಸ್ಯೆಗಳನ್ನು ಪರಿಹರಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಿಎಂಆರ್‌ಡಿಎನಲ್ಲಿ ಸೋಮವಾರ ಸರ್ಜಾಪುರ ರಸ್ತೆ ವಿಸ್ತರಣೆ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಾಮಗಾರಿಯ ಪ್ರಗತಿ ಹಾಗೂ ವಿಳಂಬವಾಗುತ್ತಿರುವುದಕ್ಕೆ ಕಾರಣವೇನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಇದಕ್ಕೆ ಉತ್ತರಿಸಿದ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಸರ್ಜಾಪುರ ರಸ್ತೆಯನ್ನು ಹೊರವರ್ತುಲ ರಸ್ತೆಯಿಂದ ಇಬ್ಬಲೂರು ಜಂಕ್ಷನ್‌ವರಗೆ ಸರ್ವಿಸ್ ರಸ್ತೆಗಳನ್ನು ಒಳಗೊಂಡಂತೆ ಆರು ಪಥಗಳ ರಸ್ತೆಯಾಗಿ ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ. ರಸ್ತೆ ಅಗಲೀಕರಣಕ್ಕಾಗಿ 320 ಆಸ್ತಿಗಳ 2.05 ಎಕರೆ ಪ್ರದೇಶವನ್ನು ಭೂ ಸ್ವಾಧೀನ ಪಡಿಸಿಕೊಳ್ಳಬೇಕಿದೆ ಎಂದು ಮಾಹಿತಿ ನೀಡಿದರು.
ಭೂಸ್ವಾಧೀನ ಕಾಯ್ದೆಯಂತೆ ಟಿಡಿಆರ್ ನೀಡುವ ಸಂಬಂಧ 140 ಜನರಿಂದ ಆಕ್ಷೇಪಣೆಗಳು ಬಂದಿದ್ದು, ಬಹುತೇಕ ಭೂಮಿ ಮಾಲೀಕರು ಟಿಡಿಆರ್ ಬದಲಿಗೆ ಪರಿಹಾರ ನೀಡುವಂತೆ ಕೋರಿದ್ದಾರೆ. ಹೀಗಾಗಿ ಕಾಮಗಾರಿ ಕೈಗೊಳ್ಳಲು ವಿಳಂಬವಾಗಿದೆ ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಸ್ಥಳೀಯರಾದ ರಾಮಚಂದ್ರರೆಡ್ಡಿ ಮಾತನಾಡಿ, ಪಾಲಿಕೆಯ ಅಧಿಕಾರಿಗಳು ಈವರೆಗೆ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿಲ್ಲ. ಜತೆಗೆ ರಸ್ತೆ ಅಗಲೀಕರಣದ ಕುರಿತು ಮಾಹಿತಿ ನೀಡುವ ಕೆಲಸವನ್ನು ಮಾಡಿಲ್ಲ ಎಂದು ದೂರಿದರು.
ಇದಕ್ಕೆ ಸ್ಪಂದಿಸಿದ ಜಾರ್ಜ್, ಕೂಡಲೇ ಸ್ಥಳೀಯರೊಂದಿಗೆ ಸಭೆ ನಡೆಸಿ ಟಿಡಿಆರ್ ಕುರಿತು ಅವರಿಗೆ ಮಾಹಿತಿ ನೀಡುವಂತೆ ಮತ್ತು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ಮುಂದಾಗುವಂತೆ ಪಾಲಿಕೆಯ ವಿಶೇಷ ಆಯುಕ್ತ (ಆಸ್ತಿಗಳು) ವಿಜಯ್‌ಶಂಕರ್ ಅವರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.