ಕೆಎಸ್ಆರ್ಟಿಸಿ ಟಿಕೆಟ್ ಬ್ಲಾಕ್ನಲ್ಲಿ ಬಿಕರಿ
Team Udayavani, Nov 23, 2017, 12:10 PM IST
ಬೆಂಗಳೂರು: ಕೆಎಸ್ಆರ್ಟಿಸಿ ಜಾರಿಗೊಳಿಸಿದ “ಇ-ಟಿಕೆಟ್’ ವ್ಯವಸ್ಥೆಯಡಿ ಫ್ರಾಂಚೈಸಿಗಳೇ ಎಲ್ಲ ಟಿಕೆಟ್ಗಳನ್ನು ಬೇನಾಮಿ ಹೆಸರಿನಲ್ಲಿ ಕಾಯ್ದಿರಿಸಿ, ಪ್ರಯಾಣಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ.
ಮುಂಗಡ ಟಿಕೆಟ್ ಕಾಯ್ದಿರಿಸುವ ಕಾರ್ಯಕ್ಕಾಗಿ ಕೆಎಸ್ಆರ್ಟಿಸಿಯಿಂದ ನೇಮಕಗೊಂಡ ವೆಲ್ಲೂರಿನ ಫ್ರಾಂಚೈಸಿಯೊಂದು ತಾನೇ ಮುಂಚಿತವಾಗಿ ಎಲ್ಲ ಟಿಕೆಟ್ ಗಳನ್ನು ಕಾಯ್ದಿರಿಸಿ, ನಂತರ ಅವುಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಭದ್ರತಾ ಮತ್ತು ಜಾಗೃತ ವಿಭಾಗದ ಅಧಿಕಾರಿಗಳು ತನಿಖೆ ನಡೆಸಿದಾಗ, ಅಕ್ರಮ ನಡೆಯುತ್ತಿರು ವುದು ಪತ್ತೆಯಾಗಿದೆ.
ಒಂದೇ ಕೌಂಟರ್ನಿಂದ ಅತಿ ಹೆಚ್ಚು ಟಿಕೆಟ್ ಬುಕಿಂಗ್ ಆಗುತ್ತಿತ್ತು. ದೂರಿನ ಮೇರೆಗೆ ಇದನ್ನು ಪರಿಶೀಲಿಸಿದಾಗ, ಸುಮಾರು 12 ಟಿಕೆಟ್ಗಳನ್ನು ಕೆಎಸ್ಆರ್ಟಿಸಿಯಿಂದ ಫ್ರ್ಯಾಂಚೈಸಿ ಪಡೆದ ಖಾಸಗಿ ವ್ಯಕ್ತಿಯೇ ಬೇನಾಮಿ ಹೆಸರಿನಲ್ಲಿ ಬ್ಲಾಕ್ ಮಾಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ಗಳಲ್ಲಿ ಕ್ರಮವಾಗಿ ಟಿಕೆಟ್ಗಳನ್ನು ಬೇನಾಮಿ ಹೆಸರಿನಲ್ಲಿ ಕಾಯ್ದಿರಿಸಿ, ಪ್ರಯಾಣಿಕರಿಗೆ ಅನನುಕೂಲ ಉಂಟುಮಾಡುವ ಮತ್ತು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿರುವುದು ಕಂಡುಬಂದರೆ, ಸಾರ್ವಜನಿಕರು [email protected] ವೆಬ್ಸೈಟ್ ಅಥವಾ ಮೊ: 7760990034/ 77609 90035 ಕರೆ ಮಾಡಿ ದೂರು ದಾಖಲಿಸಬೇಕು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.