ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಗಾಜು ಪುಡಿ
Team Udayavani, Apr 16, 2018, 12:35 PM IST
ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಪುಡಿ ಮಾಡಿರುವ ಘಟನೆ ಡಿ.ಜಿ.ಹಳ್ಳಿ ಕಾವಲ್ ಬೈರಸಂದ್ರದ ಮೋದಿ ಗಾರ್ಡ್ನ್ನಲ್ಲಿ ಶನವಾರ ತಡರಾತ್ರಿ ನಡೆದಿದೆ.
ತಡರಾತ್ರಿ 11 ಗಂಟೆ ಸುಮಾರಿಗೆ ನಾಲ್ಕೈದು ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳು ಮನೆ ಮುಂದೆ ನಿಲ್ಲಿಸಿದ ಆಟೋ, ಕಾರು ಹಾಗೂ ಟೆಂಪೋಗಳ ಗಾಜುಗಳನ್ನು ಮಾರಕಾಸ್ತ್ರಗಳಿಂದ ಪುಡಿ ಮಾಡಿದ್ದಾರೆ. ಆರೋಪಿಗಳ ದೌರ್ಜನ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೃತ್ಯದ ಬಗ್ಗೆ ಸ್ಥಳೀಯರೊಬ್ಬರು ಆರೋಪಿಗಳನ್ನು ಪ್ರಶ್ನಿಸಿದಾಗ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸ್ ಸಹಾಯವಾಣಿ “ನಮ್ಮ-100’ಕ್ಕೆ ಕರೆ ಮಾಡಿ ಮಾಹಿತಿ ನೀಡಿದಾಗ ಸ್ಥಳಕ್ಕೆ ಬಂದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಯನ್ನಾಧಿರಿಸಿ ಪೊಲೀಸರು ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾವಲ್ ಬೈರಸಂದ್ರದ ಮೋದಿ ಗಾರ್ಡ್ನ್ನಲ್ಲಿ ಎರಡು ಪುಂಡರ ಗುಂಪುಗಳಿದ್ದು, ಈ ಹಿಂದೆಯೂ ನಾಲ್ಕೈದು ಬಾರಿ ಇದೇ ರೀತಿ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ, ಸಾರ್ವಜನಿಕರ ಮೇಲೂ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.